(e-Assets;) ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹಾಗಾದರೆ ಆದೇಶದಲ್ಲಿ ಏನಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ಆದೇಶದಲ್ಲಿ ಏನಿದೆ?:
ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006 ರ ನಿಯಮ 28 ಮತ್ತು 30 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
(e-Assets;) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ: 25.03.2025 ರಂದು ನಡೆದ ಸಭೆಯ ಸೂಚನೆಯಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ವರದಿಯನ್ನು ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ. ಇವರ ಅಧ್ಯಕ್ಷತೆಯಲ್ಲಿನ ಇ-ಸ್ವತ್ತು ಸಲಹಾ ಸಮಿತಿಗೆ ಸಲ್ಲಿಸಲು ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲು ಸರ್ಕಾರವು ನಿರ್ಣಯಿಸಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್ ಮಾಡಿ
ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಲು ನಿರ್ದೇಶಕರು (ಪಂ.ರಾಜ್) ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ಆದೇಶಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (e-Assets;)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





