E-KHATA; ಇ-ಖಾತೆ ಪಡೆಯುವವರ ಗಮನಕ್ಕೆ

(E-KHATA; ) ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಅನೂಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರಿಗೆ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿಯನ್ನು 9480683695 ಪ್ರಾರಂಭಿಸಲಾಗಿದ್ದು, ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ನಿರ್ದೇಶನದಂತೆ ಸಾರ್ವಜನಿಕರಿಗೆ ಇ-ಖಾತಾಗಳು ಸುಗಮವಾಗಿ ಸಿಗುವುದನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿಯು ತಕ್ಷಣದ ಕ್ರಮಗಳನ್ನು ಕೈಗೊಂಡಿದೆ.


ಇದನ್ನೂ ಓದಿ; ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?


ಕೈಗೊಂಡಿರುವ ಕ್ರಮಗಳ ವಿವರ ಹೀಗಿದೆ ನೋಡಿ:
* ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿ (eKhata Citizen Helpline – 9480683695)
* ಯಾರೇ ಲಂಚ ಕೇಳಿದರೆ ಅಥವಾ ವಿಳಂಬವಾದರೆ ನಾಗರೀಕ ಸಹಾಯವಾಣಿ
* ನಾಗರೀಕರು ತಾವೇ ಆನ್‌ ಲೈನ್‌ ನಲ್ಲಿ ಇ-ಖಾತಾವನ್ನು ರಚಿಸಲು ಪ್ರೋತ್ಸಾಹಿಸಲಾಗುತ್ತದೆ (https://BBMPeAasthi.karnataka.gov.in)
* ಸಹಾಯಕ ಕಂದಾಯ ಅಧಿಕಾರಿ ಕಛೇರಿಗಳನ್ನು ನಾಗರೀಕರಿಗೆ ಸುಗಮವಾಗಿ ಇ-ಖಾತಾ ನೀಡಲು ವಿಸ್ತರಿಸಲಾಗಿದೆ


ಇದನ್ನೂ ಓದಿ; ಅಂದು ಚಿಕ್ಕಮಗಳೂರು ಎಸಿ, ಇಂದು ಮಠದ ಸ್ವಾಮೀಜಿ!


* 1000ಕ್ಕೂ ಅಧಿಕ ಹೆಚ್ಚುವರಿ ಕೇಸ್ ವರ್ಕರ್ ಲಾಗಿನ್‌ ಗಳನ್ನು ನೀಡಲಾಗಿದೆ.
* 200ಕ್ಕೂ ಅಧಿಕ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
* ಯಾರಿಂದಾದರೂ ಯಾವುದಾದರೂ ಅನಗತ್ಯ ವಿಳಂಬವಾದಲ್ಲಿ, ಪಾಲಿಕೆಯು ಕ್ರಮ ಕೈಗೊಳ್ಳುತ್ತದೆ ಮತ್ತು ನಾಗರೀಕರು ಬದಲಿ ಸಹಾಯಕ ಕಂದಾಯ ಅಧಿಕಾರಿ/ಕೇಸ್ ವರ್ಕರ್ ಗಳನ್ನು ಸಹ ಭೇಟಿ ನೀಡಬಹುದಾಗಿರುತ್ತದೆ.

E-KHATA; ಇ-ಖಾತೆ ಪಡೆಯುವವರ ಗಮನಕ್ಕೆ
E-KHATA; ಇ-ಖಾತೆ ಪಡೆಯುವವರ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು