E Office: ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ಅನುಷ್ಠಾನ

(E Office) ಕರ್ನಾಟಕ ಸರ್ಕಾರ ಇ-ಆಫೀಸ್ ಯೋಜನೆ ಅನುಷ್ಠಾನ ಮಾಡುವ ಕುರಿತು ಪತ್ರವೊಂದನ್ನು ಬರೆದಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಎಲ್ಲಾ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದೆ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಈ ಕುರಿತು ಉಜ್ವಲ್ ಕುಮಾರ್ ಘೋಷ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ (ಇ-ಆಡಳಿತ) ಹಾಗೂ ಸಕಾಲ ಪತ್ರವನ್ನು ಬರೆದಿದ್ದಾರೆ. ಪತ್ರವು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಛೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.

ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ತಂತ್ರಾಂಶ ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ


ಪತ್ರದಲ್ಲಿ ಏನಿದೆ?;
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ) ಯ ಉಲ್ಲೇಖ (1) & (2) ರ ಸರ್ಕಾರಿ ಆದೇಶದಲ್ಲಿ ಇ- ಆಫೀಸ್ ತಂತ್ರಾಂಶವನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳ ಕಛೇರಿ/ ಪ್ರಾದೇಶಿಕ ಆಯುಕ್ತರುಗಳ ಕಛೇರಿ / ಜಿಲ್ಲಾಧಿಕಾರಿಗಳ ಕಛೇರಿ/ ಜಿಲ್ಲಾ ಪಂಚಾಯತ್ ಕಛೇರಿ/ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ (ಪ್ರಾದೇಶಿಕ ಮತ್ತು ಸಾಮಾಜಿಕ) ಗಳಲ್ಲಿ ಕಡ್ಡಾಯವಾಗಿ ಇ-ಆಫೀಸ್ ಅನುಷ್ಠಾನಗೊಳಿಸಿ, ತಾಲ್ಲೂಕು ಮಟ್ಟದ ಕಛೇರಿಗಳಲ್ಲಿ ಅನುಷ್ಠಾನ ಪ್ರಕ್ರಿಯೆ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿರುತ್ತದೆ.

ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿ ಮತ್ತು ಜಿಲ್ಲಾ ಪಂಚಾಯತ್ ಕಛೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಂಡಿರುವ ಮೇರೆಗೆ, ಆಯಾಯ ಜಿಲ್ಲೆಗಳ ಉಪ ವಿಭಾಗಾಧಿಕಾರಿಗಳ ಕಛೇರಿ ಮತ್ತು ಎಲ್ಲಾ ತಾಲ್ಲೂಕು ಮಟ್ಟದ ತಹಶೀಲ್ದಾರ್ ಕಛೇರಿ ಹಾಗೂ ತಾಲ್ಲೂಕು ಪಂಚಾಯತ್ ಕಛೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ದಿನಾಂಕ: 01-04-2021 ರಿಂದ ಅನುಷ್ಠಾನಗೊಳಿಸುವಂತೆ ಉಲ್ಲೇಖ (3) ರಲ್ಲಿ ಆದೇಶಿಸಲಾಗಿರುತ್ತದೆ. ಅದರಂತೆ, ತಾಲ್ಲೂಕು ಮಟ್ಟದ ಎಲ್ಲಾ ತಹಶೀಲ್ದಾರ್‌ಗಳ ಕಛೇರಿ, ತಾಲ್ಲೂಕು ಪಂಚಾಯತ್ ಕಛೇರಿ, ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗಳು ಹಾಗೂ ಉಪನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಇ-ಕಛೇರಿ ತಂತ್ರಾಂಶವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿರುತ್ತದೆ ಹಾಗೂ ರಾಜ್ಯದ ಎಲ್ಲಾ ನಿಗಮ/ ಮಂಡಳಿ/ ಆಯೋಗ/ ನಿಯಮಿತ ಕಂಪನಿ ಮತ್ತು ಇತರ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗಳಿಸಲು ಉಲ್ಲೇಖ (4) ರ ಸರ್ಕಾರಿ ಆದೇಶದಲ್ಲಿ ಅದೇಶಿಸಲಾಗಿರುತ್ತದೆ.


ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್


ಅದಾಗ್ಯೂ ಈವರೆಗೂ ಹಲವಾರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಛೇರಿಗಳು, ನಿಗಮ/ ಮಂಡಳಿ/ ಆಯೋಗ/ ನಿಯಮಿತ ಕಂಪನಿ ಮತ್ತು ಇತರೆ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಕಛೇರಿ ತಂತ್ರಾಂಶದ ಅನುಷ್ಠಾನ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದಿಲ್ಲ. ಆದ್ದರಿಂದ, ತಮ್ಮ ಸಚಿವಾಲಯದ ಅಧೀನದಲ್ಲಿ ಬರುವ ಯಾವ ಇಲಾಖೆಗಳು/ ಜಿಲ್ಲಾ ಮಟ್ಟದ ಕಛೇರಿಗಳು/ ತಾಲ್ಲೂಕು ಮಟ್ಟದ ಕಛೇರಿಗಳು/ ನಿಗಮ/ ಮಂಡಳಿ/ ವಿಶ್ವವಿದ್ಯಾಲಯಗಳು/ ಇತರೆ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಆಫೀಸ್ ತಂತ್ರಾಂಶವು ಅನುಷ್ಠಾನಗೊಂಡಿರುವುದಿಲ್ಲವೋ ಅಂತಹ ಕಛೇರಿಗಳಲ್ಲಿ ತುರ್ತಾಗಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಡ್ಡಾಯವಾಗಿ ಕಡತ ನಿರ್ವಹಣೆಯನ್ನು ಇ-ಆಫೀಸ್ ತಂತ್ರಾಂಶದ ಮೂಲಕವೇ ನಿರ್ವಹಿಸಬೇಕೆಂದು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಪತ್ರದ ಮೂಲಕ ತಿಳಿಸಿದೆ.

E Office: ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ಅನುಷ್ಠಾನ
E Office: ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ಅನುಷ್ಠಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್