(E-SHRAM Card) ಅಸಂಘಟಿತ ಕಾರ್ಮಿಕರಿಗಾಗಿಯೇ ಜಾರಿಗೆ ತಂದಿರುವ ಇ-ಶ್ರಮ್ ಕಾರ್ಡ್ ನಿಂದ 2 ಲಕ್ಷ ರೂ. ವಿಮಾ ಸೌಲಭ್ಯದ ಜೊತೆಗೆ ಹಲವು ಸೌಲಭ್ಯವನ್ನು ಈ ಕಾರ್ಡ್ ನಲ್ಲಿ ಪಡೆಯಬಹುದಾಗಿದೆ.
ಇದನ್ನೂ ಓದಿ; ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ
ಇ-ಶ್ರಮ ಕಾರ್ಡ್ ಪಡೆಯಲು ಯಾರು ಅರ್ಹರು:
* 16 ವರ್ಷದಿಂದ 59 ವಯೋಮಾನದ ಇಎಸ್‌ಐ ಹಾಗೂ ಇಪಿಎಸ್ ಸೌಲಭ್ಯ ಹೊಂದಿರದವರು.
* ಆದಾಯ ತೆರಿಗೆ ಪಾವತಿ ಮಾಡದವರು. ಕಟ್ಟಡ ಕಾರ್ಮಿಕರು, ಸಣ್ಣ, ಅತಿ ಸಣ್ಣ ರೈತರು, ಮೀನುಗಾರರು, ಕೃಷಿಕರು, ನೇಕಾರರು, ಬಡಗಿಗಳು, ಆಶಾ ಕಾರ್ಯಕತರು, ಛಾಯಗ್ರಾಹಕರು, ಕ್ಷೌರಿಕರು, ತರಕಾರಿ ಹಣ್ಣು ಮಾರಾಟಗಾರರು, ಮನೆ ಕೆಲಸದವರು, ಪತ್ರಿಕೆ ಮಾರಾಟಗಾರರು, ನರೇಗಾ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು, ಚರ್ಮ ಕೈಗಾರಿಕಾ ಕಾರ್ಮಿಕರು, ಟೈಲರ್‌ಗಳು, ಆನ್ ಲೈನ್ ಸೇವಾ ಕಾರ್ಮಿಕರು, ಹೋಟೆಲ್, ಬೇಕರಿ, ವಲಸೆ ಕಾರ್ಮಿಕರು ಸೇರಿದಂತೆ ಒಟ್ಟು 379 ವರ್ಗಗಳ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದು.
ಇದನ್ನೂ ಓದಿ; ಚುನಾವಣಾ ಕರ್ತವ್ಯದಿಂದ ವೈದ್ಯರು, ನರ್ಸ್ ಗಳಿಗೆ ವಿನಾಯಿತಿ: ಹೈಕೋರ್ಟ್
ಈ ಕಾರ್ಡ್ ನಿಂದ ಲಾಭವೇನು?;
* ಈ ಕಾರ್ಡ್ ಮಾಡಿದ ಕಾರ್ಮಿಕರು ಒಂದು ವರ್ಷಕ್ಕೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಪ್ರಯೋಜನ ಪಡೆಯಬಹುದು.
* ಇದು ಅಪಘಾತ ವಿಮೆಯಾಗಿದ್ದು, ಅಪಘಾತದಿಂದ ಮರಣ ಹೊಂದಿದ್ದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂ. ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ಪರಿಹಾರ ಸಿಗಲಿದೆ.
* ಇದರ ಜೊತೆಗೆ ಹಲವು ಯೋಜನೆಯ ಸೌಲಭ್ಯ ಈ ಯೋಜನೆಯಲ್ಲಿ ಪಡೆಯಬಹುದು.
ಇದನ್ನೂ ಓದಿ; ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ ಸಾಲ!; ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್
ಈ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಎಲ್ಲಿ:
ಗ್ರಾಮ ಪಂಚಾಯಿತಿಯ ಭಾಪೂಜಿ ಸೇವಾ ಕೇಂದ್ರಗಳಲ್ಲಿ ಅಸಂಘಟಿತ ಕಾರ್ಮಿಕರಿಗೆ ವಿಮಾ ಸೌಲಭ್ಯ ಒದಗಿಸುವ ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುಇ ಪಡೆಯಬಹುದಾಗಿದೆ.

ಇದನ್ನೂ ಓದಿ; ಇಸ್ರೋದಲ್ಲಿ ಭರ್ಜರಿ ಜಾಬ್ ಆಪರ್; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ







Leave a Reply