(Education Department:) ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲು ಆರಂಭಕ್ಕೂ ಮುನ್ನ ರಾಜ್ಯದ ಎಲ್ಲಾ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸಮರ್ಪಕವಾಗಿ ತಲುಪಿಸಲು ಕರ್ನಾಟಕ ಪಠ್ಯಪುಸ್ತಕ ಸಂಘ (ರಿ) ಮಹತ್ವದ ಆದೇಶ ಹೊರಡಿಸಿದೆ. ಮೇ 18ರಂದು ಸಂಘದ ವ್ಯವಸ್ಥಾಪಕ ನಿರ್ದೇಶಕರು ಈ ಸಂಬಂಧ ಅಧಿಕೃತ ಸುತ್ತೋಲೆ ಬಿಡುಗಡೆ ಮಾಡಿ, ಪಠ್ಯಪುಸ್ತಕ ವಿತರಣೆ, ಹಣ ಪಾವತಿ ಹಾಗೂ ದಾಖಲೆ ನಿರ್ವಹಣೆಗೆ ಸಂಬಂಧಿಸಿದ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದಾರೆ.
ಸುತ್ತೋಲೆಯ ಪ್ರಕಾರ, LKG ಮತ್ತು UKG ಯಿಂದ 10ನೇ ತರಗತಿಯವರೆಗಿನ ಪಠ್ಯಪುಸ್ತಕಗಳು ಹಾಗೂ ದಿನಚರಿಗಳು, 4ರಿಂದ 9ನೇ ತರಗತಿಯ ಅಭ್ಯಾಸ ಪುಸ್ತಕಗಳು ಮತ್ತು 1ರಿಂದ 10ನೇ ತರಗತಿಯವರೆಗಿನ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ‘ಸ್ಯಾಟ್ಸ್’ (SATS) ತಂತ್ರಾಂಶದಲ್ಲಿ ದಾಖಲಾಗಿರುವ ಬೇಡಿಕೆಯ ಆಧಾರದ ಮೇಲೆ ಮುದ್ರಿಸಿ ತಾಲೂಕು ಗೋದಾಮುಗಳಿಗೆ ಸರಬರಾಜು ಮಾಡಲಾಗುತ್ತಿದೆ.
ಪುಸ್ತಕ ವಿತರಣೆಯ ಸಂಪೂರ್ಣ ಮಾಹಿತಿಯನ್ನು SATS ತಂತ್ರಾಂಶದಲ್ಲಿ ಕಡ್ಡಾಯವಾಗಿ ದಾಖಲಿಸಬೇಕೆಂದು ಸೂಚಿಸಲಾಗಿದೆ. ಗೋದಾಮುಗಳಿಗೆ ಬಂದಿರುವ ಡೆಲಿವರಿ ಚಲನ್ (DC) ಹಾಗೂ ಸ್ಟಾಕ್ ರಿಜಿಸ್ಟರ್ ಮಾಹಿತಿಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಇದಕ್ಕೂ ಮೊದಲು ಅನುದಾನರಹಿತ ಖಾಸಗಿ ಶಾಲೆಗಳಿಗೆ ಶೇ.25ರಷ್ಟು ಮುಂಗಡ ಹಣ ಪಾವತಿಸಿ ಪುಸ್ತಕ ಪಡೆಯಲು ಅವಕಾಶವಿತ್ತು. ಆದರೆ ಇದೀಗ ಪಠ್ಯಪುಸ್ತಕಗಳನ್ನು ಪಡೆಯುವ ಮೊದಲು ಶೇ.100ರಷ್ಟು ಪೂರ್ಣ ಹಣ ಪಾವತಿಸುವುದು ಕಡ್ಡಾಯವಾಗಿದೆ. ಹಣ ಪಾವತಿಸದ ಶಾಲೆಗಳಿಗೆ ಯಾವುದೇ ಕಾರಣಕ್ಕೂ ಪುಸ್ತಕ ವಿತರಿಸಬಾರದು ಎಂದು ತಾಲೂಕು ಗೋದಾಮುಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಇನ್ನೊಂದೆಡೆ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವ ಪಠ್ಯಪುಸ್ತಕಗಳ ಸಾಗಣೆ ವೆಚ್ಚವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಆಯಾ ಶಾಲೆಯ ಮುಖ್ಯ ಶಿಕ್ಷಕರ ಬ್ಯಾಂಕ್ ಖಾತೆಗೆ ಜಮಾ ಮಾಡಲು ತೀರ್ಮಾನಿಸಲಾಗಿದೆ. ಮುಖ್ಯ ಶಿಕ್ಷಕರು ತಕ್ಷಣವೇ ಪುಸ್ತಕಗಳನ್ನು ಶಾಲೆಗೆ ತರಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕಾಗಿದೆ.
ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಶಾಲಾ ಪ್ರಾರಂಭೋತ್ಸವಕ್ಕೂ ಮುನ್ನವೇ ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಪುಸ್ತಕಗಳು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಪಠ್ಯಪುಸ್ತಕ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು ಎಂದು ಇಲಾಖೆ ಎಚ್ಚರಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Education Department:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply