Tuesday, November 28, 2023
Homeರಾಜ್ಯ1 ರಿಂದ 8 ನೇ ತರಗತಿ ಶಾಲೆಗಳು ಆರಂಭ - 30 ರಂದು ಸಿಎಂ ಬೊಮ್ಮಾಯಿ...

1 ರಿಂದ 8 ನೇ ತರಗತಿ ಶಾಲೆಗಳು ಆರಂಭ – 30 ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ

ಧಾರವಾಡ/ಹುಬ್ಬಳ್ಳಿ: 1 ರಿಂದ 8 ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆ.30 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.23 ರಿಂದ 9 ರಿಂದ 12 ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಭಾದಕಗಳನ್ನು ಅವಲೋಕಿಸಿ 1 ರಿಂದ 8 ನೇ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದರು.

ಉನ್ನತ ಮಟ್ಟದ ತಜ್ಞರ ಸಮಿತಿಯ ಡಾ. ದೇವಿಪ್ರಸಾದ್ ಶೆಟ್ಟಿ ಅವರು 6 ರಿಂದ 8 ನೇ ತರಗತಿ ಆರಂಭಿಸಬಹುದೆoದು ಸಲಹೆ ನೀಡಿದ್ದಾರೆ. ಜೊತೆಗೆ ಕಳೆದ ನಾಲ್ಕು ದಿನಗಳಿಂದ ಆರಂಭವಾದ ಶಾಲೆಗಳ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಉತ್ಸಾಹ ಕಂಡುಬoದಿದೆ. ಇದರಿಂದ ಶಾಲೆಗಳನ್ನು ಆರಂಭಿಸಬೇಕೆoಬ ಆಲೋಚನೆಯು ವ್ಯಕ್ತವಾಗುತ್ತಿದೆ. ಆದರೆ ತಾಂತ್ರಿಕ ಸಮಿತಿಯ ವರದಿ ಮೇಲೆ ಮುಂದಿನ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಳೆದ ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಪುನಃ ಶಿಕ್ಷಣ ನೀಡುವ ಉದ್ದೇಶದಿಂದ 1 ರಿಂದ 8 ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಉತ್ಸುಕವಾಗಿದೆ. ಮಕ್ಕಳ ತಜ್ಞರು ಹಾಗೂ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಆಧಾರದ ಮೇಲೆ ಶಾಲೆಗಳನ್ನು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಆರಂಭಿಸಲಾಗುವುದು. ಅಕಸ್ಮಾತ್ ಮೂರನೇ ಅಲೆ ವ್ಯಾಪಿಸಿದರೆ ಶಾಲೆಗಳನ್ನು ಬಂದ್ ಮಾಡುವ ಕುರಿತು ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದರು.

Most Popular

Recent Comments