Education subsidy: ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ

(Education subsidy) ಶೈಕ್ಷಣಿಕ ಧನ ಸಹಾಯ ಪಡೆಯಲು ಕಾರ್ಮಿಕರ ಮಕ್ಕಳಿಗೆ ಡಿಸೆಂಬರ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಡಿಸೆಂಬರ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.


ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್


ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – https://kbocwwb. karnataka.gov.in (Registration Number) 2 (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.

ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದೆ.

Education subsidy: ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ
Education subsidy: ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ

ಇದನ್ನೂ ಓದಿ; ಇಂಡಿಯನ್‌ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು