ಭದ್ರಾವತಿ: (ನ್ಯೂಸ್ ಮಲ್ನಾಡ್ ವರದಿ) 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ನೋಂದಣಿ ಮಾಡಿಸಿದ್ದರೂ ಅಧಿಕಾರಿಗಳು ಬಂದು ಮತ ಹಾಕಿಸಿಕೊಳ್ಳದ ಹಿನ್ನೆಲೆಯಲ್ಲಿ ಭದ್ರಾವತಿ ಮತ್ತು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಅಂಗವಿಕಲ ಚೇತನರು ಮತ್ತು ವೃದ್ಧರು ಮತಯಾಚನೆ ಮಾಡಿದರು.
ಇದನ್ನೂ ಓದಿ; ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು: ಆರೋಪ!
ಇದನ್ನೂ ಓದಿ; ಶಾಸಕರು ಅನುದಾನ ತರದೇ ತಂದ ಅನುದಾನಗಳನ್ನು ತನ್ನ ಬೆಂಬಲಿಗರಿಗೆ ನೀಡಿದ್ದಾರೆ
ತಾಲೂಕಿನ 28ನೇ ವಾರ್ಡ್ ನ ಹೊಸಸಿದ್ದಾಪುರದ ಮತಗಟ್ಡೆಯಲ್ಲಿ 80 ವರ್ಷ ಮೇಲ್ಪಟ್ಟ ವೃದ್ದೆ ಜಯಮ್ಮ ಅವರು ವೀಲ್ ಚೇರ್ ನಲ್ಲಿ ಆಗಮಿಸಿ ಮತ ಚಲಾಯಿಸಿದರು. ಮನೆಗೆ ಬಂದು ಮತ ಹಾಕಿಸಿಕೊಳ್ಳದ ಚುನಾವಣಾ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಅಸಮಾಧಾನ ಹೊರಹಾಕಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?
- ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ
- ಕೋಟಿ ಹಣದ ಕನಸಲ್ಲಿ ಮಾಜಿ ಶಾಸಕನ ಮನೆಗೆ ಕನ್ನ
ಅದರಂತೆ ಸೈನ್ಸ್ ಮೈದಾನದಲ್ಲಿ ವೆಳ್ಳಿಯಮ್ಮ ಮತ್ತು 92 ವರ್ಷ ಧೀನಬಂಧು ಎಂಬುವರು ಊರುಗೋಲು ಹಿಡಿದು ಬಂದು ಮತಚಲಾಯಿಸಿದರು.
ಚುನಾವಣಾ ಕರ್ತವ್ಯಕ್ಕೆ ಲೋಪ; ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಮಾನತ್ತು
ಶೃಂಗೇರಿ: ಚುನಾವಣಾ ಕರ್ತವ್ಯಕ್ಕೆ ಲೋಪವನ್ನುಂಟು ಮಾಡಿ, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಯನ್ನು ಅಮಾನತ್ತುಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಪುಟ್ಟೇಗೌಡ ಅಮಾನತ್ತು ಆದ ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ ಮತ್ತು ಮಹಿಳಾ ಸಿಬ್ಬಂದಿಗಳ ಮುಂದೆ ಅವಾಚ್ಯ ಪದಗಳನ್ನು ಬಳಸಿ ಅವರುಗಳಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ.
ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 28 (ಎ) ಮತ್ತು 136 ರಡಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.