ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿಯನ್ನು ಮಾಡಿದ್ದಾರೆ.
ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಮತದಾರರ ಮೇಲೆ ಭಾವನಾತ್ಮಕ ಅಸ್ತ್ರವನ್ನು ಪ್ರಯೋಗ ಮಾಡಿದ್ದಾರೆ.
ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿದ ಅವರು ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ್ದಾರೆ ಹಾಗೂ ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನಾನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆಯನ್ನು ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.