ಗೋಣಿಕೊಪ್ಪಲು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಸಮೀಪದ ಕುಟ್ಟಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಇದನ್ನೂ ಓದಿ; ಓವರ್ ಟೇಕ್ ಮಾಡುವಾಗ ಆಕ್ಸಿಡೆಂಟ್ ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಇದನ್ನೂ ಓದಿ; ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್
ಕಾಫಿ ತೋಟದ ಮಧ್ಯ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿ ಹಾದು ಹೋಗಿತ್ತು. ಇದು ಸೊಂಡಿಲಿಗೆ ತಗುಲಿ ಆನೆಯು ಸ್ಥಳದಲ್ಲೆ ಮೃತಪಟ್ಟಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
- ಯುವಕನ ಮೇಲೆ ಹಲ್ಲೆಗೆ ಟ್ವಿಸ್ಟ್ ;ಮಹಿಳೆಯ ಮನೆಯಲ್ಲಿ ಸಿಕ್ಕಿ ಬಿದ್ದ ವಿಡಿಯೋ ವೈರಲ್
- ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ ಉಚ್ಛಾಟನೆ ಕುತಂತ್ರ ಮಾಡುತ್ತಿದ್ದಾರೆ
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿ.ಟಿ ರವಿ ಗೆ ಶಾಕ್ ನೀಡಲು ಶಾಸಕ ಹೆಚ್ ಡಿ ತಮ್ಮಯ್ಯ ಕಸರತ್ತು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎಚ್ ಡಿ ತಮ್ಮಯ್ಯ ಮಾಜಿ ಶಾಸಕ ಸಿಟಿ ರವಿಗೆ ಮತ್ತೊಂದು ಶಾಕ್ ನೀಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ.
ಇದನ್ನೂ ಓದಿ; ಕಾರ್ಯಕರ್ತರ ಶ್ರಮ ಅಪಾರ, ಸಮಚಿತ್ತದಿಂದ ಚುನಾವಣೆಯ ಫಲಿತಾಂಶ ಸ್ವೀಕಾರ: ಡಿ.ಎನ್ ಜೀವರಾಜ್
ಈ ಬಾರಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿ ಪರಿವರ್ತನೆಯಾಗಿತ್ತು. ಸಿಟಿ ರವಿ ಆಪ್ತ ಬಣ್ಣದಲ್ಲಿ ಗುರುತಿಸಿಕೊಂಡಿದ್ದ ಹೆಚ್ ಡಿ ತಮ್ಮಯ್ಯನೇ ಎದುರಾಳಿಯಾಗಿ ಸಿ.ಟಿ ರವಿಗೆ ಸೋಲಿನ ರುಚಿಯನ್ನು ತೋರಿಸಿದ್ದರು. ಇದೀಗ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದಾರೆ.
ಎಚ್ ಡಿ ತಮ್ಮಯ್ಯ ಸದ್ದಿಲ್ಲದೆ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ. ನಗರಸಭೆ ಆಡಳಿತವನ್ನು ಬಿಜೆಪಿಯಿಂದ ತಪ್ಪಿಸಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದ್ದಾರೆ. ಚಿಕ್ಕಮಗಳೂರು ನಗರಸಭೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಂತ್ರಗಾರಿಕೆಯನ್ನು ಆರಂಭಿಸಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರು: ಸ್ಟೈಲಾಗಿ ಡ್ರೆಸ್ ಮಾಡ್ಕೊಂಡು ಹಣ ವಸೂಲಿಗಿಳಿದ ಲೇಡಿ ಗ್ಯಾಂಗ್
ಮೂಲಗಳ ಮಾಹಿತಿ ಪ್ರಕಾರ ವಿಧಾನಸಭಾ ಅಧಿವೇಶನ ಮುಗಿದ ಬಳಿಕ ನಗರಸಭಾ ಸದಸ್ಯರ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಎಚ್ ಡಿ ತಮ್ಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಮೂವರು ನಗರಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸುವ ಮೂಲಕ ನಗರಸಭೆಯಲ್ಲಿ ಬಿಜೆಪಿ ಬಲವನ್ನು ತಗ್ಗಿಸುವ ಕಾರ್ಯತಂತ್ರವನ್ನು ಎಣಿದಿದ್ದಾರೆ.
ಇದನ್ನೂ ಓದಿ; ಬೆಂಗಳೂರಿಂದ ಚಿಕ್ಕಮಗಳೂರಿಗೆ 6 ಅತ್ಯಾಧುನಿಕ ‘ಎಲೆಕ್ಟ್ರಿಕ್ ಬಸ್’
ಬಿಜೆಪಿ ಪಕ್ಷದಿಂದ ಆಯ್ಕೆಯಾಗಿರುವ ಮೂವರು ಸದಸ್ಯರು ರಾಜೀನಾಮೆ ಕೊಟ್ಟರೆ ನಗರಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಕುಸಿತಗೊಳ್ಳಲಿದೆ ಆಗ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ಯೋಜನೆಯನ್ನು ನೂತನ ಶಾಸಕ ಎಚ್ ಡಿ ತಮ್ಮಯ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ.