ವಿದ್ಯುತ್ ಕಂಬವನ್ನೇ ಮುರಿದು ಹಾಕಿದ ಟಿಪ್ಪರ್ ಲಾರಿ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಟಿಪ್ಪರ್ ಲಾರಿಯೊಂದು ಹಿಂಬದಿಯ ಕ್ಯಾರಿಯರ್ ನ್ನ ಸಮತಟ್ಟು ಮಾಡಿಕೊಳ್ಳದೆ ಚಲಿಸಿದ ಪರಿಣಾಮ ವಿದ್ಯುತ್ ತಂತಿಗಳನ್ನೇ ಎಳೆದುಕೊಂಡು ಮುಂದೆ ಸಾಗಿದೆ ಇದರಿಂದ ಎರಡು ವಿದ್ಯುತ್ ಕಂಬಗಳು ಹಾನಿಗೊಳಗಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಇದನ್ನೂ ಓದಿ; ನಾಗರ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು

ಇದನ್ನೂ ಓದಿ; ಸಿಡಿಲು ಬಡಿದು ಮಹಿಳೆ ಸಾವು

ನವುಲೆ ಕೆರೆಯ ಮೇಲೆ ಪಿಡಬ್ಲೂಡಿ ರಸ್ತೆ ನಿರ್ಮಿಸಲಾಗುತ್ತಿದ್ದು, ಪಿಡಬ್ಲೂಡಿ ಇಲಾಖೆಗೆ ಸಂಬಂಧಿಸಿದ ಟಿಪ್ಪರ್ ಲಾರಿಯೊಂದು ಎಂ ಸ್ಯಾಂಡ್ ನ್ನ ಅನ್ ಲೋಡ್ ಮಾಡಿ ಹಿಂಬದಿಯ ಕ್ಯಾರಿಯರ್ ನ್ನ ಸಮತಟ್ಟು ಮಾಡಿಕೊಳ್ಳದೆ ವಾಪಾಸಾದ ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಅದೃಷ್ಟವಶಾತ್ ತಂತಿಗಳು ತಗುಲಿ ಯಾವುದೇ ಘಟನೆ ಸಂಭವಿಸಿಲ್ಲ.

ಇದನ್ನೂ ಓದಿ; ಬೈಕ್‌ನಿಂದ ನಿಯಂತ್ರಣ ತಪ್ಪಿ ಬಿದ್ದು ಮಹಿಳೆ ಸಾವು

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ