(Electricity Bill:) ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರದ ಬರೆ ಬರುವ ಸಾಧ್ಯತೆ ಎದುರಾಗುತ್ತಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) 2025-26ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಕುರಿತಂತೆ ಚರ್ಚೆ ಆರಂಭಿಸಿದ್ದು, ಏಪ್ರಿಲ್‌ನಿಂದ ದರ ಏರಿಕೆ ಜಾರಿಗೆ ಬರಬಹುದೆಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು ತಮ್ಮ ಹಣಕಾಸು ಕೊರತೆ, ಇಂಧನ ವೆಚ್ಚದ ಏರಿಕೆ ಹಾಗೂ ನಿರ್ವಹಣಾ ಖರ್ಚು ಹೆಚ್ಚಳದ ಹಿನ್ನೆಲೆ ಯೂನಿಟ್‌ಗೆ ಸರಾಸರಿ 60 ರಿಂದ 70 ಪೈಸೆವರೆಗೆ ಹೆಚ್ಚಳ ಮಾಡುವಂತೆ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಿವೆ. ಆದರೆ ಆಯೋಗವು ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ಮಧ್ಯಮ ಮಟ್ಟದ ಏರಿಕೆಯನ್ನು ಪರಿಗಣಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಪ್ರಾಥಮಿಕ ಚರ್ಚೆಗಳ ಪ್ರಕಾರ, ಯೂನಿಟ್‌ಗೆ 15 ರಿಂದ 20 ಪೈಸೆವರೆಗೆ ಹೆಚ್ಚಳ ಮಾಡುವ ಬಗ್ಗೆ ಆಯೋಗ ಯೋಚಿಸುತ್ತಿದೆ ಎನ್ನಲಾಗಿದೆ. ಇದಕ್ಕೂ ಮೊದಲು ಇಂಧನ ಹೊಂದಾಣಿಕೆ ಶುಲ್ಕದ ರೂಪದಲ್ಲಿ ಜಾರಿಗೆ ಬಂದ ಹೆಚ್ಚಳವನ್ನು ಸೇರಿಸಿ ನೋಡಿದರೆ, ಗ್ರಾಹಕರಿಗೆ ಒಟ್ಟು ಯೂನಿಟ್‌ಗೆ ಸುಮಾರು 45 ರಿಂದ 55 ಪೈಸೆವರೆಗೆ ಹೆಚ್ಚುವರಿ ಭಾರ ಬೀಳುವ ಸಾಧ್ಯತೆ ಇದೆ.
ಈ ಕುರಿತು ಸಾರ್ವಜನಿಕ ಆಕ್ಷೇಪಣೆಗಳನ್ನು ಆಹ್ವಾನಿಸಲು ಶೀಘ್ರದಲ್ಲೇ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ. ಬಳಿಕ ಸಾರ್ವಜನಿಕ ವಿಚಾರಣೆ ನಡೆಸಿ ಅಂತಿಮ ಆದೇಶ ಪ್ರಕಟಿಸಲಾಗುತ್ತದೆ. ಏಪ್ರಿಲ್ 1ರಿಂದ ಹೊಸ ದರ ಜಾರಿಗೆ ಬರುವ ನಿರೀಕ್ಷೆಯಿದೆ.
ವಿದ್ಯುತ್ ದರ ಏರಿಕೆ ಜಾರಿಗೆ ಬಂದಲ್ಲಿ ಗೃಹ ಬಳಕೆದಾರರು, ವಾಣಿಜ್ಯ ಘಟಕಗಳು ಹಾಗೂ ಸಣ್ಣ ಕೈಗಾರಿಕೆಗಳ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಸರ್ಕಾರವು ಸಬ್ಸಿಡಿ ಮುಂದುವರಿಸುವ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Electricity Bill:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್





