Elephant Attack: ಆನೆ ದಾಳಿ: ಕೇರಳ ವ್ಯಕ್ತಿಗೆ ರಾಜ್ಯದಿಂದ ಪರಿಹಾರ

Elephant Attack: ಕೇರಳದ ವಯನಾಡಿನಲ್ಲಿ ಆನೆ ದಾಳಿಗೆ ರೈತನೊಬ್ಬ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ 15 ಲಕ್ಷ ರೂಪಾಯಿಗಳನ್ನ ಪರಿಹಾರವಾಗಿ ಘೋಷಿಸಿದೆ. ಇದೇ ಮೊದಲ ಬಾರಿಗೆ ಬೇರೆ ರಾಜ್ಯದಲ್ಲಿ ಮೃತಪಟ್ಟ ವ್ಯಕ್ತಿಗೆ ಈ ರೀತಿ ಪರಿಹಾರ ನೀಡಲಾಗುತ್ತಿದೆ. ರಾಹುಲ್ ಗಾಂಧಿಯನ್ನ ಮೆಚ್ಚಿಸಲು ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕರ್ನಾಟಕ ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ; ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಸಲ್ಲಿಸಿ

ಏನಿದು ಘಟನೆ:
ಹಾಸನ ಜಿಲ್ಲೆ ಬೇಲೂರಿನಲ್ಲಿ ನ.30ರಂದು ಸೆರೆ ಹಿಡಿದಿದ್ದ ಮಕ್ನಾ ಆನೆಯನ್ನು ಬಿ.ಆರ್.ಟಿಯಲ್ಲಿ ಬಿಡಲಾಗಿತ್ತು. ಅಲ್ಲಿಂದ ಬಂಡೀಪುರ ದಾಟಿ ವೈಯನಾಡು ಭಾಗಕ್ಕೆ ತಲುಪಿದ್ದ ಆನೆ (Elephant Attack:) ಆಜೀಶ್ ಅವರ ಮೇಲೆ ದಾಳಿ ಮಾಡಿತ್ತು. ದಾಳಿಯಲ್ಲಿ ಆತ ಮೃತಪಟ್ಟಿದ್ದು, ಈ ಬಗ್ಗೆ ಆನೆಗೆ ಹಾಕಿದ್ದ ಕಾಲರ್ ಐಡಿಯಿಂದ ಸ್ಪಷ್ಟವಾಗಿದೆ. ಕ್ಷೇತ್ರಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೃತ ಕುಟುಂಬಕ್ಕೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಹಿನ್ನೆಲೆಯಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಕೇರಳದ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ತಿಳಿಸಿದ್ದರು. ಅಜೀಶ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೇರಳದ ಜನಪ್ರತಿನಿಧಿಗಳು ಮತ್ತು ಅಲ್ಲಿನ ಸರ್ಕಾರವು ಕರ್ನಾಟಕ ಸರ್ಕಾರವನ್ನು ಕೋರಿತ್ತು. ಈ ಕುರಿತು ಮುಖ್ಯಮಂತ್ರಿಯವರ ಜೊತೆ ಮಾತನಾಡಿದ್ದು, ಪರಿಹಾರ ನೀಡಲು ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದರು.

Elephant Attack: ಆನೆ ದಾಳಿ: ಕೇರಳ ವ್ಯಕ್ತಿಗೆ ರಾಜ್ಯದಿಂದ ಪರಿಹಾರ
Elephant Attack: ಆನೆ ದಾಳಿ: ಕೇರಳ ವ್ಯಕ್ತಿಗೆ ರಾಜ್ಯದಿಂದ ಪರಿಹಾರ

ಇದನ್ನೂ ಓದಿ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ FIR ದಾಖಲು

ಬಿಜೆಪಿ ಕಿಡಿ:
ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ 15 ಲಕ್ಷವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ. ಬರಗಾಲದಿಂದ ರಾಜ್ಯದಾದ್ಯಂತ ನೂರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ತುರ್ತು ಅಗತ್ಯಗಳ ಬಗ್ಗೆ ಗಮನಹರಿಸುವ ಬದಲು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ ಶಿಪ್‌; ಅರ್ಹತೆಗಳು, ಪ್ರಮುಖ ದಿನಾಂಕ, ಇತರೆ ಮಾಹಿತಿಗಳು ಇಲ್ಲಿದೆ

ರಾಜ್ಯ ಸರ್ಕಾರ ಮಾನ-ಮರ್ಯಾದೆ ಎಲ್ಲ ಬಿಟ್ಟಿದೆ:
ಕೇರಳ ವ್ಯಕ್ತಿಗೆ ಕರ್ನಾಟಕ ಸರ್ಕಾರ ಪರಿಹಾರ ಹಿನ್ನೆಲೆ ನಗರದಲ್ಲಿ ಮಾಜಿ ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಘಟನೆ ನಡೆದಿರೋದು ಕೇರಳದಲ್ಲಿ, ಪರಿಹಾರ ಕೊಡಬೇಕಿರೋದು ಕೇರಳ ಸರ್ಕಾರ. ಆನೆ (Elephant Attack:) ಕರ್ನಾಟಕದ್ದು, ಕೇರಳದ್ದು, ತಮಿಳುನಾಡಿನದ್ದು ಅಂತ ಸೀಲ್ ಹಾಕಿದ್ದಾರಾ…ಹೈಕಮಾಂಡ್ ಮೆಚ್ಚಿಸಲು ರಾಜಕೀಯ ಹಿತಾಸಕ್ತಿಗೆ ಕರ್ನಾಟಕದ ಹಣ ಬಳಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಮಾನ-ಮರ್ಯಾದೆ ಎಲ್ಲವನ್ನೂ ಬಿಟ್ಟಿದೆ. ಸಿದ್ದರಾಮಯ್ಯ ದೆಹಲಿಗೆ ಹೋಗಿ ನನ್ನ ತೆರಿಗೆ ನನ್ನ ಹಕ್ಕು ಅಂದ್ರು. ನಿಮ್ಮ ರಾಜಕೀಯ ಹಿತಾಸಕ್ತಿಗೆ ಕರ್ನಾಟಕದ ಹಣವನ್ನ ಕೇರಳಕ್ಕೆ ಕೊಡಲು ನಾಚಿಕೆ ಆಗಲ್ವಾ. ಕೇರಳದಲ್ಲಿ ನಿಮ್ಮದ್ದೇ ಮೈತ್ರಿ ಕೂಟದ ಸರ್ಕಾರವಿದೆ, ಪರಿಹಾರ ಕೊಡಿಸೋ ಯೋಗ್ಯತೆ ಇಲ್ವಾ. ದೆಹಲಿಯಲ್ಲಿ ಎಲ್ಲಾ ಒಂದು ಅಂತಾರೆ, ಪರಿಹಾರ ಕೊಡ್ಸಕ್ಕೆ ರಾಹುಲ್ ಗಾಂಧಿಗೆ ಆಗಲ್ವಾ. ಕರ್ನಾಟಕದಲ್ಲಿ ನಿಮ್ಮ ವೇಣುಗೋಪಾಲ್ ದು ಏನು ನಡೆಯಲ್ವಾ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ