Emergency Alert Test ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್ ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು ಬಂದಿದೆ.
ಇದನ್ನೂ ಓದಿ; ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್ ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಕುರಿತು ಕಳೆದೆರಡು ದಿಗಳಿಂದ ಸಂದೇಶಗಳು ಬರುತ್ತಿದ್ದವು. ಅಂತೆಯೇ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ 2 ಬಾರಿ ಫ್ಲ್ಯಾಶ್ ಮೆಸೇಜ್ ಜೊತೆ ವಿಭಿನ್ನ ಶಬ್ದ ಕೂಡ ಮೊಬೈಲ್ ಗೆ ಬಂದಿದೆ.
ಇದನ್ನೂ ಓದಿ; ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 11-10-2023
ಸಂದೇಶದಲ್ಲಿ ಏನಿತ್ತು..?:(Emergency Alert Test )
ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
ಭಯಪಡಬೇಡಿ:
ಈ ಮೊದಲು ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಬಳಕೆದಾರರು ಓಕೆ ಕೊಡುವವರೆಗೂ ಈ ಶಬ್ಧ ಬರುತ್ತಲೇ ಇರುತ್ತದೆ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆದರೆ ಇದಕ್ಕೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.
ಇದನ್ನೂ ಓದಿ; ಕಾಫಿ ಬೆಲೆಯಲ್ಲಿ ಕೊಂಚ ಏರಿಕೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.10.2023
ಇನ್ನು ತಮ್ಮ ಮೊಬೈಲ್ ಗೆ ಅಲರ್ಟ್ ಮೆಸೇಜ್ ಬಂದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಇದಕ್ಕೆ ಸಂಭಾವ್ಯ ಕಾರಣಗಳು ಇಲ್ಲಿವೆ:
* ಎಲ್ಲರಿಗೂ ಏಕಕಾಲದಲ್ಲಿ ಟೆಸ್ಟ್ ಮೆಸೇಜ್ ಬಂದಿರುವುದಿಲ್ಲ. ಏರ್ ಟೆಲ್, ಜಿಯೋ, ವೊಡಾಫೋನ್ ಇತ್ಯಾದಿ ಟೆಲಿಕಾಂ ಕಂಪನಿಗಳ ಬಳಕೆದಾರರಿಗೆ ಪ್ರತ್ಯೇಕವಾಗಿ ಈ ಅಲರ್ಟ್ ಮೆಸೇಜ್ ತಲುಪಿರುತ್ತದೆ. ಇಂದು (ಅ.12) ಏರ್ಟೆಲ್ ಗ್ರಾಹಕರಿಗೆ ಮೊದಲು ಅಲರ್ಟ್ ಬಂದಿದೆ. ಕೆಲ ಹೊತ್ತಿನ ಬಳಿಕ ಜಿಯೋ ಬಳಕೆದಾರರಿಗೆ ಅಲರ್ಟ್ ಬಂದಿದೆ. ಬಳಿಕ ವೊಡಾಫೋನ್ ಐಡಿಯಾ ಸಿಮ್ ಹೊಂದಿರುವವರಿಗೆ ಟೆಸ್ಟಿಂಗ್ ಅಲರ್ಟ್ ಸಂದೇಶ ಸಿಕ್ಕಿದೆ.
* ಅಲರ್ಟ್ ಮೆಸೇಜ್ ಸುಮಾರು 30 ನಿಮಿಷ ಕಾಲಘಟ್ಟದಲ್ಲಿ ಇರುತ್ತದೆ. ಈ ಅವಧಿಯಲ್ಲಿ ನಿಮ್ಮ ಮೊಬೈಲ್ ಸ್ವಿಚ್ ಆಫ್ ಆಗಿದ್ದರೆ ನಿಮಗೆ ಮೆಸೇಜ್ ಬಂದಿರುವುದಿಲ್ಲ. ಈ 30 ನಿಮಿಷದ ಅವಧಿಯೊಳಗೆ ನಿಮ್ಮ ಮೊಬೈಲ್ ಸ್ವಿಚ್ ಆನ್ ಆದಾಗ ಮೆಸೇಜ್ ಬರುತ್ತದೆ. ಅವಧಿ ಮೀರಿದ ಬಳಿಕ ಸ್ವಿಚ್ ಆನ್ ಮಾಡಿದರೂ ಮೆಸೇಜ್ ಬರುವುದಿಲ್ಲ. ಏರ್ ಪ್ಲೇನ್ ಮೋಡ್ ನಲ್ಲಿದ್ದರೂ ಅಲರ್ಟ್ ಸಿಗುವುದಿಲ್ಲ.
* ಫೋನ್ ಸೆಟಿಂಗ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಸಿಸ್ಟಂ ಆಫ್ ಆಗಿರಬಹುದು.
* ಪ್ರದೇಶವಾರು ಬೇರೆ ಬೇರೆ ಸಮಯದಲ್ಲಿ ಅಲರ್ಟ್ ಬಂದಿರಬಹುದು.
ಇದನ್ನೂ ಓದಿ; ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಸೆಟ್ಟಿಂಗ್ ನಲ್ಲಿ ಅಲರ್ಟ್ ಸಿಸ್ಟಂ ಅನ್ ಮಾಡುವುದು ಹೇಗೆ?:
* ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಸೆಟಿಂಗ್ಸ್ ಗೆ ಹೋಗಿ
* ಸರ್ಚ್ ಬಾರ್ ನಲ್ಲಿ ವೈರ್ಲೆಸ್ ಎಮರ್ಜೆನ್ಸಿ ನೋಟಿಫಿಕೇಶನ್ ಎಂದು ಸರ್ಚ್ ಮಾಡಿ.
* ಅಲ್ಲಿ ಅಲರ್ಟ್ಸ್ ಆಫ್ ಆಗಿದ್ದರೆ ಅದನ್ನು ಆನ್ ಮಾಡಿ..
ಪ್ರಮುಖ ಸುದ್ದಿಗಳನ್ನು ಓದಿ
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
- ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply