Emergency Panic Button: ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ

Emergency Panic Button: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್ ಡಿವೈಸ್ (ವಿಎಲ್‌ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ (Emergency Panic Button:) ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಯಾವುದೇ ರೀತಿ ಕ್ರಮ ಕೈಗೊಂಡರೂ ಸಹ ಸಾರ್ವಜನಿಕ ಸೇವಾ ವಾಹನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಘಟನೆಗಳು ನಡೆಯುತ್ತಲೇ ಇರುತ್ತದೆ. ಹೀಗಾಗಿ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ; sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ

ಒಂದು ವರ್ಷಗಳ ಕಾಲ ಅವಕಾಶ:
ಸಾರ್ವಜನಿಕ ಸೇವೆ ಇರುವ ಖಾಸಗಿ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಡಿವೈಸ್ ಅಳವಡಿಕೆಗೆ ಕೊನೆ ದಿನಾಂಕ ಕೂಡ ನಿಗದಿ ಮಾಡಿದೆ. ಡಿಸೆಂಬರ್ 1 ರಿಂದ ಈ ಆದೇಶ ಜಾರಿಗೆ ಬರಲಿದ್ದು, 2024 ರ ನವೆಂಬರ್ 30 ರವರೆಗೆ ಅಂದರೆ ಒಂದು ವರ್ಷಗಳ ಅವಧಿಯ ಅವಕಾಶವನ್ನು ಸರ್ಕಾರ ನೀಡಿದೆ. ಈ ಕೆಲಸ ಶೀಘ್ರವಾಗಿ ಆಗಬೇಕಿರುವುದರಿಂದ ಆರ್.ಟಿ.ಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ; ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ

ಯಾವ್ಯಾವ ರೀತಿಯ ವಾಹನಗಳಿಗೆ ವಿ.ಎಲ್.ಟಿ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ?:
ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳು ಅಂದರೆ ಯೆಲ್ಲೋ ಬೋರ್ಡ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಇನ್ನು ಒಂದು ವರ್ಷದ ಅವಧಿಯೊಳಗೆ ಈ ವಾಹನಗಳ ಮಾಲೀಕರು ಪ್ಯಾನಿಕ್ ಬಟನ್ ಹಾಗೂ ವಿ.ಎಲ್.ಟಿ ಅಳವಡಿಸಬೇಕಿದೆ.

ಇದನ್ನೂ ಓದಿ; ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?

ದರವೆಷ್ಟು?:
ಇನ್ನು ವಾಹನಗಳಿಗೆ ವಿ.ಎಲ್.ಟಿ ಸೇರಿದಂತೆ ಪ್ಯಾನಿಕ್ ಬಟನ್ ಅಳವಡಿಕೆಗೆ 7,599 ರೂಪಾಯಿ ಖರ್ಚಾಗಲಿದೆ. ಜಿ.ಎಸ್.ಟಿ ಹೊರತುಪಡಿಸಿ ಈ ಬೆಲೆಯನ್ನು ನಿಗದಿ ಮಾಡಲಾಗಿದೆ.

Emergency Panic Button:
Emergency Panic Button:

ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ:
ವಿ.ಎಲ್.ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಯ ನಂತರ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್ ಟ್ರ‍್ಯಾಕಿಂಗ್  ಆರಂಭವಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಎಚ್ಚರಿಕೆ ಕೂಡ ಕೊಡಲಿದೆ. ಇಂತಹ ವಾಹನಗಳಲ್ಲಿ ಪ್ರಯಾಣಿಸುವಾಗ ಆರೋಗ್ಯದಲ್ಲಿ ಏರುಪೇರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್ ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಇದರಿಂದ ಕಮಾಂಡ್ ಸೆಂಟರ್ ವಾಹನದ ಲೊಕೇಷನ್ ಸಮೇತವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಿದ್ದು ಇದರಿಂದ ಸಂಭವಿಸಬಹುದಾದ ಅನಾಹುತ ತಡೆಯಬಹುದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  2. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  3. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  4. ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
  5. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  6. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  7.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  8. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  9. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  10. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  11. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  12. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  13. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  14. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  15. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  16.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  17. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  18. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  19. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  20. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  21. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  22. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  23. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇