Employee Schemes: ಎರಡು ತಿಂಗಳಲ್ಲಿ ಸಹಾಯಧನ ಬಿಡುಗಡೆ

(Employee Schemes:) 2023-24 ಮತ್ತು 2024-25ನೇ ಸಾಲಿನ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಮುಂದಿನ ಎರಡು ತಿಂಗಳಲ್ಲಿ ಸಹಾಯಧನ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


ನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ


ವಿಧಾನಸಭೆಯ ಬಜೆಟ್ ಅಧಿವೇಶನದ ಕಲಾಪದಲ್ಲಿ ಬುಧವಾರ ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ವಿಳಂಬವಾದ ಕಾರಣ ಸಹಾಯಧನ ಬಿಡುಗಡೆಗೂ ತಡವಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕಾದ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಗಳು ವಿಳಂಬವಾದ ಹಿನ್ನೆಲೆಯಲ್ಲಿ ಈ ಸಮಸ್ಯೆ ಎದುರಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ, ಶಾಸಕರನ್ನು ಖುದ್ದಾಗಿ ಭೇಟಿ ಮಾಡಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.


ನ್ನೂ ಓದಿ: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ


ಈ ವರ್ಷವೂ ಉದ್ಯೋಗಿನಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಮುಂದುವರಿದಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಮತ್ತು ಶಕ್ತಿ ಯೋಜನೆಗಳನ್ನೂ ಜಾರಿಗೆ ತಂದಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಉದ್ಯೋಗಿನಿ ಯೋಜನೆಯ ಸಹಾಯಧನ ವಿತರಣೆಯಲ್ಲಿ ಬ್ಯಾಂಕ್‌ಗಳ ಸಹಕಾರವೂ ಸಮರ್ಪಕವಾಗಿಲ್ಲ ಎಂದು ಸಚಿವೆ ಸೂಚಿಸಿದರು. ಶಾಸಕರು ಆಯ್ಕೆ ಮಾಡಿದ ಫಲಾನುಭವಿಗಳಲ್ಲಿ ಸಿಬಿಲ್ ಸ್ಕೋರ್ ಆಧಾರದ ಮೇಲೆ ಬ್ಯಾಂಕ್‌ಗಳು ಸಾಲ ಮಂಜೂರಾತಿ ನೀಡುವಲ್ಲಿ ವಿಳಂಬ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಹೇಳಿದರು.


ನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿದ್ರೆ ಈ ಸುದ್ದಿ ಓದಿ;  ಚಿಕ್ಕಮಗಳೂರು ಉಸ್ತುವಾರಿ ಸಚಿವರಿಂದ ರೈತರಿಗೆ 3 ತಿಂಗಳು ಮಾತ್ರ ಟೈಲ್!


ಈ ಹಿನ್ನೆಲೆಯಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಬ್ಯಾಂಕ್ ಸಮಿತಿಗಳ (SLBC) ಸಭೆಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.

Employee Schemes: ಎರಡು ತಿಂಗಳಲ್ಲಿ ಸಹಾಯಧನ ಬಿಡುಗಡೆ
Employee Schemes: ಎರಡು ತಿಂಗಳಲ್ಲಿ ಸಹಾಯಧನ ಬಿಡುಗಡೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Employee Schemes:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ