ಆವಂತಿಪೊರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಲ್ಲಿಯವರೆಗೆ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಪುಲ್ವಾಮ ಜಿಲ್ಲೆಯ ಪಂಪೋರ್ ಪ್ರದೇಶದ ಖ್ರೆವ್ ನಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿಯು ಬಂದ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದರು. ಈ ವೇಳೆ ಇದ್ದಕ್ಕಿದ್ದಂತೆ ಅಲ್ಲಿ ಅಡಗಿ ಕುಳಿತಿದ್ದಂತಹ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಯಿತು.
ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರಗಾಮಿಗಳು ಹತ್ಯೆಗೊಂಡಿದ್ದಾರೆ. ಇನ್ನೂ ಆವ ಸ್ಥಳದಲ್ಲಿ ಉಗ್ರರು ಅಡಗಿರುವ ಮಾಹಿತಿಯಿಂದ ಅಲ್ಲಿ ಎನ್ ಕೌಂಟರ್ ಮುಂದುವರಿದಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.