ಗುಂಟೂರು: ಬಿ.ಟೆಕ್ ವಿದ್ಯಾರ್ಥಿನಿಯೋರ್ವಳನ್ನು ಹಾಡುಹಗಲು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವಂತಹ ಭಯಾನಕ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಎನ್. ರಮ್ಯಾ ಎಂದು ಗುರುತಿಸಲಾಗಿದೆ. ಈಕೆ ಇಂಜಿನಿಯರಿoಗ್ ಮೂರನೇ ವರ್ಷದ ವಿದ್ಯಾರ್ಥಿನಿ. ಉಪಹಾರ ಸೇವನೆಗೆಂದು ಹೊರಟಿದ್ದ ಯುವತಿಗೆ, ಯುವಕನೋರ್ವ ಮನ ಬಂದoತೆ ಮಾರಕಾಸ್ತ್ರದಿಂದ ಹಲ್ಲೆಯನ್ನು ನಡೆಸಿ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ.
ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾಗಿದ್ದ ವಿಧ್ಯಾರ್ಥಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ಯತ್ನಿಸಿದರು ಆದರೇ ಅಷ್ಟರಲ್ಲಾಗಲೇ ಆಕೆ ಸಾವನ್ನಪಿದ್ದಳು ಎಂದು ತಿಳಿದು ಬಂದಿದೆ.
ಈ ಘಟನೆಯ ನಂತರ ಕಾರ್ಯಪ್ರವೃತ್ತರಾದ ಗುಂಟೂರು ನಗರದ ಪೊಲೀಸರು ಸಿಸಿಟಿವಿ ದೃಶ್ಯವನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.