Sunday, June 4, 2023
Homeಕ್ರೈಂ ನ್ಯೂಸ್ಶಿವಮೊಗ್ಗ/ಚಿಕ್ಕಮಗಳೂರು: ಕಾನೂನು ಉಲ್ಲಂಘಿಸುವವರಿಗೆ ಶಿವಮೊಗ್ಗ ಪೊಲೀಸ್ ಎಚ್ಚರಿಕೆ; ಭದ್ರಾವತಿಯ ಮೂವರು ರೌಡಿಗಳಿಗೆ ಗಡಿಪಾರು

ಶಿವಮೊಗ್ಗ/ಚಿಕ್ಕಮಗಳೂರು: ಕಾನೂನು ಉಲ್ಲಂಘಿಸುವವರಿಗೆ ಶಿವಮೊಗ್ಗ ಪೊಲೀಸ್ ಎಚ್ಚರಿಕೆ; ಭದ್ರಾವತಿಯ ಮೂವರು ರೌಡಿಗಳಿಗೆ ಗಡಿಪಾರು

ಶಿವಮೊಗ್ಗ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸ್ ಮತ್ತು ಜಿಲ್ಲಾಡಳಿತ ಶಾಂತಿ ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಅದರಲ್ಲಿಯು ಪದೇ ಪದೇ ಕಾನೂನು ಉಲ್ಲಂಘಿಸಿ, ಸಮಾಜದಲ್ಲಿ ಶಾಂತಿ ಭಂಗ ಮಾಡುತ್ತಿರುವವರನ್ನ ಮುಲಾಜಿಲ್ಲದೆ ಗಡಿಪಾರು ಮಾಡಲಾಗುತ್ತಿದೆ.

ಇತ್ತೀಚೆಗೆ ಶಿಕಾರಿಪುರದ ಇಬ್ಬರನ್ನ ಗಡಿಪಾರು ಮಾಡಿದ ಬೆನ್ನಲ್ಲೆ ಇದೀಗ ಭದ್ರಾವತಿಯಲ್ಲಿ ಮೂವರು ರೌಡಿಗಳಿಗೆ ಗಡಿಪಾರು ಮಾಡಿ ಉಪವಿಭಾಗಾಧಿಕಾರಿಗಳು ಆದೇಶ ಮಾಡಿದ್ದಾರೆ. ಭದ್ರಾವತಿ ಟೌನ್ ಸೀಗೆಬಾಗಿಯ ಶೇಕ್ ಹುಸೇನ್ (39) ಮತ್ತು ತನ್ವಿರ್ ಪಾಷಾ, ಗಡಿಪಾರಾದ ರೌಡಿಗಳಾಗಿದ್ದಾರೆ. ಇವರುಗಳು ಸಮಾಜಕ್ಕೆ ಧಕ್ಕೆಯಾಗುವಂತಹ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಕೃತ್ಯಗಳನ್ನು ಎಸಗಿದ್ದಾರೆ. ಓಸಿ/ಮಟಕಾ ಜೂಜಾಟ ಆಡುವ ಮತ್ತು ಆಡಿಸುವ ಪ್ರವೃತ್ತಿ ಹೊಂದಿರುವ ಇವರು, ರೌಡಿ ಚಟುವಟಿಕೆಯಲ್ಲೂ ಸಹ ಭಾಗಿಯಾಗಿದ್ದಾರೆ.

ಭದ್ರಾವತಿ ಬಂಡಾರಳ್ಳಿಯ ಧನುಶ್ ಅಲಿಯಾಸ್ ಧನು (23) ಈತನು ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನ ಮಾಡುವುದು ಮತ್ತು ಸಾರ್ವಜನಿಕವಾಗಿ ಅಪಾಯಕಾರಿ ಆಯುಧಗಳನ್ನು ತೋರಿಸುತ್ತಾ ಜನರಲ್ಲಿ ಭೀತಿಯನ್ನುಂಟು ಮಾಡುವ ಮೂಲಕ ಸಾರ್ವಜನಿಕರ ಆಸ್ತಿ ಮತ್ತು ಜೀವ ಹಾನಿಪಡಿಸುವ ಅಪಾಯವಿದ್ದು, ಸದರಿ ಕೃತ್ಯಗಳನ್ನು ಯಾವುದೇ ಕಾನೂನಿನ ಭಯವಿಲ್ಲದೇ ಮುಂದುವರೆಸಿಕೊಂಡು ಬಂದಿದ್ದಾರೆ.

ಶೇಕ್ ಹುಸೇನ್, ವಿರುದ್ಧ ಒಟ್ಟು 08 ಪ್ರಕರಣಗಳು ದಾಖಲಾಗಿದ್ದು, ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ತೆರೆಯಲಾಗಿದೆ. ಮತ್ತು ತನ್ವಿರ್ ಪಾಷಾನ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿದ್ದು, ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ತೆರೆಯಲಾಗಿದೆ. ಮತ್ತು ಧನುಶ್ ಅಲಿಯಾಸ್ ಧನು ವಿರುದ್ಧ ಒಟ್ಟು 03 ಪ್ರಕರಣಗಳು ದಾಖಲಾಗಿದ್ದು, ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ತೆರೆಯಲಾಗಿದೆ.

ಇಲ್ಲಿಯವರೆಗೆ ಇವರುಗಳು ತಮ್ಮ ನಡವಳಿಕೆಯಲ್ಲಿ ಸುಧಾರಣೆ ಮಾಡಿಕೊಳ್ಳದೇ ತಮ್ಮ ಚಟುವಟಿಕೆಯನ್ನು ಮುಂದುವರೆಸಿಕೊಂಡು ಬಂದಿರುವುದರಿಂದ, ಕಾನೂನು ಬಾಹೀರ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಶೇಕ್ ಹುಸೇನ್, ತನ್ವಿರ್ ಪಾಷಾ ಮತ್ತು ಧನುಶ್ ಅಲಿಯಾಸ್ ಧನು ಅವರುಗಳನ್ನು ಗಡಿಪಾರು ಮಾಡುವಂತೆ ಪೊಲೀಸ್ ವೃತ್ತ ನಿರೀಕ್ಷಕರು, ಭದ್ರಾವತಿ ನಗರ ವೃತ್ತ ರವರು ನೀಡಿದ ವರದಿಯ ಮೇರೆಗೆ, ಶಿವಮೊಗ್ಗ ಉಪ ವಿಭಾಗದ ಉಪ ವಿಭಾಗೀಯ ದಂಡಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳು ರವರು ಮೂರು ಆರೋಪಿತರನ್ನು ದಿನಾಂಕಃ-13- 03-2023 ರಿಂದ ದಿನಾಂಕಃ- 13-03-2024 ರ ವರೆಗೆ ಒಂದು ವರ್ಷದ ಅವಧಿಗೆ ಚಿಕ್ಕಮಗಳೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ.

Most Popular

Recent Comments