(Eye Kajal:) ಮಕ್ಕಳ ಕಣ್ಣಿಗೆ ಕಾಜಲ್ ಅಥವಾ ಕಾಡಿಗೆ ಹಚ್ಚುವುದರಿಂದ ದುಷ್ಟಶಕ್ತಿಗಳು ದೂರವಾಗುತ್ತವೆ ಹಾಗೂ ಮಗುವಿನ ಸೌಂದರ್ಯ ಹೆಚ್ಚುತ್ತದೆ ಎಂಬ ನಂಬಿಕೆ ಹಲವು ವರ್ಷಗಳಿಂದ ಸಮಾಜದಲ್ಲಿ ಇದೆ. ಆದರೆ ಈಗ ಈ ಸಂಪ್ರದಾಯವೇ ಮಕ್ಕಳ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂಬ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.
ಇದನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ
ಇತ್ತೀಚೆಗೆ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಮಕ್ಕಳ ಕಣ್ಣಿಗೆ ಕಾಜಲ್ ಹಚ್ಚಿದ ಬಳಿಕ ಕಣ್ಣಿನ ಕಿರಿಕಿರಿ, ಊತ ಹಾಗೂ ಸೋಂಕಿನ ಹಲವು ಪ್ರಕರಣಗಳು ವರದಿಯಾಗಿವೆ. ಈ ಘಟನೆಗಳು ವೈದ್ಯರು ಮತ್ತು ಪೋಷಕರಲ್ಲಿ ಆತಂಕವನ್ನು ಉಂಟುಮಾಡಿವೆ. ಇಂದಿನ ಮಾರುಕಟ್ಟೆಯಲ್ಲಿ ದೊರೆಯುವ ಹೆಚ್ಚಿನ ಐಲೈನರ್ ಹಾಗೂ ಕಾಜಲ್ ಉತ್ಪನ್ನಗಳು ಸಂಪೂರ್ಣವಾಗಿ ಶುದ್ಧವಾಗಿಲ್ಲ ಎಂದು ತಿಳಿಸಿದ್ದಾರೆ. ಇವುಗಳಲ್ಲಿ ಹಾನಿಕಾರಕ ರಾಸಾಯನಿಕಗಳು, ಕಾರ್ಬನ್, ಸೀಸ ಸೇರಿದಂತೆ ಹಲವು ವಿಷಕಾರಿ ಅಂಶಗಳು ಸೇರಿರುತ್ತವೆ.
ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳ ಕಣ್ಣುಗಳ ಸುತ್ತಲಿನ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಇಂತಹ ರಾಸಾಯನಿಕಗಳ ಪರಿಣಾಮದಿಂದ ಗಂಭೀರ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ
ರಾಸಾಯನಿಕ ಆಧಾರಿತ ಕಣ್ಣಿನ ಮೇಕಪ್ ಬಳಸುವುದರಿಂದ ಮಕ್ಕಳಲ್ಲಿ ಕಣ್ಣು ನೀರು ಬೀಳುವುದು, ಕಣ್ಣು ಕೆಂಪಾಗುವುದು, ತುರಿಕೆ, ಕಿರಿಕಿರಿ ಹಾಗೂ ಊತ ಉಂಟಾಗಬಹುದು. ದೀರ್ಘಕಾಲ ಬಳಸಿದರೆ ಸಮಸ್ಯೆ ಮತ್ತಷ್ಟು ಗಂಭೀರವಾಗಿ, ವೈದ್ಯಕೀಯ ಚಿಕಿತ್ಸೆ ಹಾಗೂ ಕಣ್ಣಿನ ಹನಿಗಳ ಅಗತ್ಯವಿರಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಇಂತಹ ಉತ್ಪನ್ನಗಳನ್ನು ನಿರಂತರವಾಗಿ ಬಳಸುವುದರಿಂದ ಕಾರ್ನಿಯಾ ಹಾನಿಯಾಗುವ ಸಾಧ್ಯತೆಯೂ ಇದ್ದು, ಇದು ಮಕ್ಕಳ ದೃಷ್ಟಿಗೂ ಹಾನಿ ಉಂಟುಮಾಡಬಹುದು ಎಂದು ತಿಳಿಸಿದ್ದಾರೆ.
ಒಂದು ವರ್ಷದೊಳಗಿನ ಮಕ್ಕಳಿಗೆ ಯಾವತ್ತೂ ಐಲೈನರ್ ಅಥವಾ ಕಾಜಲ್ ಬಳಸಬಾರದು. ಪೋಷಕರು ಅಗತ್ಯವೆಂದು ಭಾವಿಸಿದರೂ ಅಂಗಡಿಯಲ್ಲಿ ದೊರೆಯುವ ಕಾಜಲ್ ಅಥವಾ ಐಲೈನರ್ ಬಳಕೆಯನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಚಿಕ್ಕಮಗಳೂರು ಉಸ್ತುವಾರಿ ಸಚಿವರಿಂದ ರೈತರಿಗೆ 3 ತಿಂಗಳು ಮಾತ್ರ ಟೈಲ್!
ಮಕ್ಕಳ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಶುದ್ಧ ಬಟ್ಟೆ ಹಾಗೂ ಕುದಿಸಿ ತಣ್ಣಗಾದ ನೀರನ್ನು ಮಾತ್ರ ಬಳಸುವುದು ಉತ್ತಮ ಎಂದು ವೈದ್ಯರು ಸೂಚಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Eye Kajal:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





