ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್ ದೇಶದಲ್ಲಿ ಡಾಕ್ಟರ್ ಎಂದು ನಂಬಿಸಿ 6.50 ಲಕ್ಷ ವಂಚಿಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಸರ್ಕಾರಿ ಆಸ್ಪತ್ರೆ ವೈದ್ಯ ಬರುವಾಗಲೇ ಚಿತ್ತಾಲ್ ಪತ್ತಾಲ್!
ಇದನ್ನೂ ಓದಿ; ಚಿಕ್ಕಮಗಳೂರಿನ ಹೋಂ ಸ್ಟೇ ಮೇಲೆ ಪೊಲೀಸ್ ದಾಳಿ; 25 ಜನ ವಶಕ್ಕೆ
ಏನಿದು ಪ್ರಕರಣ:
ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಆಕೆ ರಿಕ್ವೆಸ್ಟ್ ಅಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್ ನಡೆಸಿದ್ದರು. ತಾನೊಬ್ಬ ವೈದ್ಯ. ಇಂಗ್ಲೆಂಡ್‌ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್ ನಡೆಸಿದ್ದ ವೇಳೆ ಆತ ಮಹಿಳೆಗೆ ಬೆಲೆಬಾಳುವ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಆಸ್ಪತ್ರೆಗೆ ಕುಡಿದು ಬಂದ ಪ್ರಕರಣ, ಡಾ. ಬಾಲಕೃಷ್ಣ ಸಸ್ಪೆಂಡ್ ಗೆ ಆರೋಗ್ಯ ಸಚಿವರ ಆದೇಶ
- ಕರೆಂಟ್ ಬಿಲ್ ಕಟ್ಟಿ ಎಂದಿದ್ದಕ್ಕೆ ಮೆಸ್ಕಾಂ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ
- pfi ಬ್ಯಾನ್ ಗೆ ಪ್ರತೀಕಾರ; ವಿಧ್ವಂಸಕ ಕೃತ್ಯಕ್ಕೆ ಮಲೆನಾಡಿನಲ್ಲೇ ನಡೆದಿತ್ತು ಸಂಚು
ಮೇ 16ರಂದು ಮಹಿಳೆಯ ಮೊಬೈಲ್ ಸಂಖ್ಯೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ, ತಾನು ಏರ್‌ಪೋರ್ಟ್ ಅಧಿಕಾರಿ ಎಂದು ಹೇಳಿದ್ದ. ನಿಮಗೆ ಕೊರಿಯರ್ ಬಂದಿದ್ದು ಅದಕ್ಕೆ ಕಸ್ಟಮ್ ವೆಚ್ಚ ತಗುಲಲಿದೆ ಎಂದು ಹೇಳಿದ್ದನು. ಆ ವ್ಯಕ್ತಿಯ ಮಾತು ನಂಬಿದ ಮಹಿಳೆ ಮೇ 16ರಿಂದ 20ರವರೆಗೆ ಬೇರೆ ಬೇರೆ ಸಮಯದಲ್ಲಿ 6.50 ಲಕ್ಷ ಹಣ ವರ್ಗಾಯಿಸಿದ್ದರು. ಆ ಬಳಿಕ ವೈದ್ಯ ಮತ್ತು ಏರ್‌ಪೋರ್ಟ್ ಅಧಿಕಾರಿ ಸೋಗಿನ ವ್ಯಕ್ತಿ ಸಂಪರ್ಕಕ್ಕೆ ಸಿಕ್ಕಿಲ್ಲ.
ಇದನ್ನೂ ಓದಿ; ನಕ್ಸಲರಿಗಿಂತ ಸಿ.ಟಿ ರವಿಯೇ ಡೇಂಜರ್
ತಾನು ವಂಚನೆಗೊಳಗಾಗಿರುವುದು ಗೊತ್ತಾಗುತ್ತಿದ್ದಂತೆಯೇ ಮಹಿಳೆ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.
ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.
ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ