FACT CHECK: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರು ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ಶೃಂಗೇರಿ ಶಾರದಾ ಪೀಠದ ಶ್ರೀಗಳ ಆಶೀರ್ವಾದ ಮಾಡಲು ನಿರಾಕರಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವೈರಲ್ ಪೋಸ್ಟ್ ನಲ್ಲಿ ಹೇಳಿರುವಂತೆ ಶೃಂಗೇರಿ ಮಠದ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯವರಿಗೆ ಆಶಿರ್ವಾದ ನೀಡಲು ನಿಜಯಾಗಿಯೂ ನಿರಾಕರಿಸಿದ್ದರಾ? ಈ ಪೋಸ್ಟ್ನಲ್ಲಿ ಮಾಡಿರುವ ಪ್ರತಿಪಾದನೆಯ ಸತ್ಯಾಸತ್ಯತೆಗಳನ್ನು ನ್ಯೂಸ್ ಮಲ್ನಾಡ್ ನ ಫ್ಯಾಕ್ಟ್ಚೆಕ್ ಮೂಲಕ ಪರಿಶೀಲಿಸೋಣ.
ಇದನ್ನೂ ಓದಿ; ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
ಸಾಮಾಜಿಕ ಜಾಲತಣದಲ್ಲಿ ವೈರಲ್ ಆದ ಪೋಸ್ಟ್ ನಲ್ಲಿ ಏನಿದೆ;
ಶೃಂಗೇರಿ ಪೀಠದ ಶ್ರೀ ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯರು ರಾಹುಲ್ ಮತ್ತು ಸಿದ್ದರಾಮಯ್ಯ (ಕರ್ನಾಟಕ ಸಿಎಂ) ಆಶೀರ್ವಾದ ಮಾಡಲು ನಿರಾಕರಿಸಿದರು.
ಜಗದ್ಗುರುಗಳು ಅವರಿಗೆ ಹೇಳಿದರು “ನೀವು ಮಠಕ್ಕೆ ಬಂದಿದ್ದೀರಿ, ಧನ್ಯವಾದಗಳು. ಆದರೆ, ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ತಿಳಿದಿಲ್ಲ, ನಾವು ನಿಮ್ಮನ್ನು ಆಶೀರ್ವದಿಸಲು ಸಾಧ್ಯವಿಲ್ಲ”. ಸಭೆಯಲ್ಲಿ ಜಗದ್ಗುರುಗಳು ರಾಹುಲ್ ಮತ್ತು ಸಿದ್ದರಾಮಯ್ಯ ಅವರಿಗೆ ಹಿಂದೂ ಧರ್ಮದ ಬಗ್ಗೆ ಅಸಹಿಷ್ಣುತೆ ಇದ್ದರೆ, ನಿಮ್ಮ ಕಾರ್ಯಗಳಿಂದ ಹಿಂದೂ ಧರ್ಮದಲ್ಲಿ ಅಸಂಗತತೆಯನ್ನು ಉಂಟುಮಾಡುವ ಬದಲು ದಯವಿಟ್ಟು ಹಿಂದೂ ಧರ್ಮದಿಂದ ದೂರವಿರಿ ಎಂದು ಹೇಳಿದರು. ಹಿಂದೂ ಮಠ, ಮಂದಿರಗಳ ನಿರ್ವಹಣೆಯನ್ನು ಸರಕಾರ ವಹಿಸಿಕೊಂಡಿದೆ. ಅಷ್ಟೇ ಅಲ್ಲ ಹುಂಡಿಯ ರೂಪದಲ್ಲಿ ಬರುವ ಹಣ ದೇವಸ್ಥಾನಗಳ ಪುನರ್ ನಿರ್ಮಾಣಕ್ಕೆ ಬಳಕೆಯಾಗುತ್ತಿಲ್ಲ, ಅದೇ ಹಣವನ್ನು ಅನ್ಯ ಧರ್ಮದವರ ಕಲ್ಯಾಣಕ್ಕೆ ವಿನಿಯೋಗಿಸುತ್ತಿರುವುದು ಒಪ್ಪತಕ್ಕದ್ದಲ್ಲ. ನೀವು ನಮ್ಮ ಮಠಕ್ಕೆ ಬರುವುದು ಒಳ್ಳೆಯದು. ಆದರೆ ನೀವು ಹಿಂದೂ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿರುವ ರೀತಿಗೆ ನಾವು ನಿಮಗೆ ಆಶೀರ್ವಾದ ನೀಡಲು ಸಾಧ್ಯವಿಲ್ಲ. ಜಗದ್ಗುರುಗಳು ಇಬ್ಬರಿಗೂ ನೇರವಾಗಿ ಹೇಳಿದರು.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ
ರಾಜಕಾರಣಿಗಳಾದ ರಾಹುಲ್ ಮತ್ತು ಸಿದ್ಧರಾಮಯ್ಯ ಇಬ್ಬರೂ ಜಗದ್ಗುರುಗಳಿಂದ ಇಂತಹ ತೀಕ್ಷ್ಯವಾದ ಹೇಳಿಕೆಗಳನ್ನು ನಿರೀಕ್ಷಿಸಿರಲಿಲ್ಲ. ಇಬ್ಬರೂ ತುಂಬಾ ತಡಬಡಾಯಿಸಿ ಸಭೆಯಿಂದ ಹೊರಬಂದ ನಂತರ ಜಗದ್ಗುರುಗಳ ಪ್ರತಿಕ್ರಿಯೆ ಮಾಧ್ಯಮಗಳಿಗೆ ಬರದಂತೆ ತಡೆಯುವುದು ಹೇಗೆ ಎಂಬ ಚರ್ಚೆ ಶುರುವಾಯಿತು. ಮಠಕ್ಕೆ ಸಂಬಂಧಿಸಿದ ಎಲ್ಲಾ ಭಕ್ತರು ಮತ್ತು ಸಿಬ್ಬಂದಿಗಳು ಜಗದ್ಗುರುಗಳ ಪ್ರತಿಕ್ರಿಯೆಯನ್ನು ಕೇಳಿ ಸಂತೋಷಪಟ್ಟರು ಮತ್ತು ವಿಳಂಬವಿಲ್ಲದ ಪ್ರತಿ ಹಂತದಲ್ಲೂ ಹಂಚಿಕೊಂಡರು ಎಂದು ಸಾಮಾಜಿಕ ಜಾಲತಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ರಾಹುಲ್ ಮತ್ತು ಸಿದ್ದರಾಮಯ್ಯವರಿಗೆ ಆಶಿರ್ವಾದ ನೀಡಲು ನಿಜಯಾಗಿಯೂ ನಿರಾಕರಿಸಿದ್ದರಾ? ಈ ಪೋಸ್ಟ್ನಲ್ಲಿ ಮಾಡಿರುವ ಪ್ರತಿಪಾದನೆಯ ಸತ್ಯಾಸತ್ಯತೆಗಳನ್ನು ಫ್ಯಾಕ್ಟ್ಚೆಕ್ ಮೂಲಕ ತಿಳಿಯೋಣ.
ನ್ಯೂಸ್ ಮಲ್ನಾಡ್ ಫ್ಯಾಕ್ಟ್ಚೆಕ್:(FACT CHECK:)
ಮಾರ್ಚ್ 2018 ರಲ್ಲಿ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಬ್ಬರೂ ಇತರ ನಾಯಕರೊಂದಿಗೆ ಶೃಂಗೇರಿ ಮಠಕ್ಕೆ ಭೇಟಿ ನೀಡಿದರು. ಇದನ್ನು ಎಲ್ಲಾ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮಡಲಾಗಿದೆ. ಹಾಗೇ ಶೃಂಗೇರಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗುರುಗಳು ಆಶಿರ್ವಾದ ಮಾಡಿದ್ದ ಫೋಟೋ ‘ಕರ್ನಾಟಕ ಕಾಂಗ್ರೆಸ್’ ತನ್ನ ಟ್ವಿಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಹಾಗೆಯೇ ಶ್ರೀಗಳು ಆಶೀರ್ವಾದ ನೀಡಲು ನಿರಾಕರಿಸಿದ್ದಾರೆ ಎಂದು ಯಾವುದೇ ಸುದ್ದಿ ಸಂಸ್ಥೆ ಕೂಡ ವರದಿ ಮಾಡಿಲ್ಲ. ಬದಲಾಗಿ ಆಶೀರ್ವಾದ ಪಡೆದಿದ್ದಾರೆ ಎಂದು ವರದಿ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಚಿಕ್ಕಮಗಳೂರು ಜಿಲ್ಲೆಯ ಶ್ರೀ ಶೃಂಗೇರಿ ಮಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿಗಳವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. #JanaAashirwadaYatre #RGInKarnataka pic.twitter.com/qZ8L1rncJp
— Karnataka Congress (@INCKarnataka) March 21, 2018
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 26.09.2023
ಒಟ್ಟಾರೆಯಾಗಿ ಹೇಳುವುದಾದರೆ 2018 ರಲ್ಲಿ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದಿದ್ದಾರೆ ಇದನ್ನು ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಕೆಲವು ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು 2018 ಫೋಟೋಗಳನ್ನು ಬಳಸಿಕೊಂಡು ಇತ್ತೀಚೆಗೆ ನಡೆದ ಘಟನೆ ಎಂಬಂತೆ ಮತ್ತು ಶೃಂಗೇರಿ ಶ್ರೀಗಳು ಇಬ್ಬರಿಗೂ ಆಶೀರ್ವಾದ ನೀಡಲು ನಿರಾಕರಿಸಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಮತ್ತೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ಸುಳ್ಳು ಸುದ್ದಿ ಆಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
- ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ
- ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
- ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
intresting story ಓದಲು ಇಲ್ಲಿ ಕ್ಲಿಕ್ ಮಾಡಿ