Fact Check: ಉಚಿತ ಪ್ರಯಾಣ ರದ್ದು! ನಿಜವೋ.. ಸುಳ್ಳೋ?

Fact Check: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅವಿರೋಧವಾಗಿ ಗೆಲ್ಲುವಂತೆ ಮಾಡಿದ್ದು ಗ್ಯಾರಂಟಿ ಯೋಜನೆಗಳು ಎಂದು ಜನ ಮಾತನಾಡಿಕೊಳ್ಳುವುದನ್ನು ಕೇಳಿರುತ್ತೇವೆ. ಚುನಾವಣಾ ತಂತ್ರ ಏನೇ ಇರಬಹುದು, ಆದರೆ ಕಾಂಗ್ರೆಸ್ ನುಡಿದಂತೆ ನಡೆದಿದೆ. ಚುನಾವಣಾ ಪ್ರಚಾರ ಸಮಯದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಸರ್ಕಾರ ಹುಸಿಗೊಳಿಸಿಲ್ಲ. ಎಲ್ಲಾ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಿದೆ. ಸರ್ಕಾರದ ಈ ಗ್ಯಾರಂಟಿಗಳು ಮಹಿಳೆಯರು ಸೇರಿದಂತೆ ರಾಜ್ಯದ ಜನತೆಗೆ ವರವಾಗಿದ್ದು ಅಕ್ಷರಶಃ ನಿಜ.

ಇದನ್ನೂ ಓದಿ; ಕಾಫಿನಾಡ ಕಳ್ ಕಹಾನಿ: ಪ್ರೇಮಿಯ ಜೊತೆಗಿನ ಕಳ್ಳಾಟಕ್ಕೆ ಪತಿಯನ್ನೇ ಮರ್ಡರ್ ಮಾಡಿದ ಮಿಟಕಲಾಡಿ

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಓಡಾಟ ಕಲ್ಪಿಸಿದ ಶಕ್ತಿ ಯೋಜನೆಯೂ ಒಂದು. ಜೂನ್ 11, 2023 ರಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಯಾದ ದಿನದಿಂದ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು ತುಂಬಿ ತುಳುಕುತ್ತಿದ್ದಾರೆ. ಕರ್ನಾಟಕ ವಿವಿಧ ಜಿಲ್ಲೆಗಳ ಮಹಿಳೆಯರು ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರೊಂದಿಗೆ ಬಹುತೇಕ ಪ್ರವಾಸಿ ತಾಣಗಳು ಮಹಿಳೆಯರಿಂದ ತುಂಬಿ ಹೋಗಿದೆ. ಉಚಿತ ಬಸ್ ಪ್ರಯಾಣವು ಉದ್ಯೋಗಕ್ಕೆ ತೆರಳುವ ಹೆಣ್ಣುಮಕ್ಕಳಿಗೆ ಮಾಸಿಕ ಬಸ್ ಪಾಸ್ ಕಿರಿಕಿರಿಯನ್ನೂ ತಪ್ಪಿಸಿದೆ.

ಇದನ್ನೂ ಓದಿ; ಮೂಡಿಗೆರೆ: ಮಚ್ಚಿನಿಂದ‌ ಹೊಡೆದು ಇಬ್ಬರ ಕೊಲೆ; ಓರ್ವನ ಸ್ಥಿತಿ ಗಂಭೀರ; ಕೊಲೆ ಮಾಡಿ ತಾನೇ ಪೊಲೀಸ್ ಠಾಣೆ ಹೋದ ಆರೋಪಿ

ಹೀಗಿರುವಾಗ ಈ ಯೋಜನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು ಇದೇ ಆಗಸ್ಟ್ ೧೫ ಅಂದರೆ ಇಂದಿನಿಂದ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ರದ್ದಾಗಲಿದೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಈ ಸುದ್ದಿ ನಿಜವೋ.. ಸುಳ್ಳೋ? ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕೇಂದ್ರ ಕಚೇರಿ ಅಧಿಕಾರಿಗಳು ಸ್ಪಷ್ಟನೆ ಏನು? ಅಂತಾ ನ್ಯೂಸ್ ಮಲ್ನಾಡ್ ಫ್ಯಾಕ್ಟ್ಚೆಕ್ ನಲ್ಲಿ ತಿಳಿಯೋಣ.


ಇತ್ತೀಚಿನ ಜನಪ್ರಿಯ ಸುದ್ದಿಗಳು   


Fact Check: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಶಕ್ತಿ ಯೋಜನೆಗೆ ಹೈಕೋರ್ಟ್ ತಡೆ ನೀಡಿದೆ. ಈ ಕಾರಣದಿಂದ ಆಗಸ್ಟ್ 15ರಿಂದ ಶಕ್ತಿ ಯೋಜನೆ ಸ್ಥಗಿತವಾಗಲಿದೆ’ ಎಂಬ ವಿವರ ಇರುವ ಸಂದೇಶಗಳು ವಾಟ್ಸ್ ಆಪ್ ಮತ್ತು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿವೆ. ಈ ಸಂದೇಶದ ಜೊತೆಗೆ ಸುದ್ದಿ ವಾಹಿನಿಯೊಂದರ ಸ್ಟೀನ್ ಶಾಟ್ ಹಂಚಿಕೊಳ್ಳಲಾಗುತ್ತಿದೆ. ಸ್ಟೀನ್ ಶಾಟ್ ನಲ್ಲಿ ಆಗಸ್ಟ್ 15ರಿಂದ ಫ್ರೀ ಬಸ್ ಪ್ರಯಾಣ ರದ್ದು ಹೈಕೋರ್ಟ್ ತಡೆ ಎಂಬ ಬರಹವಿದೆ. ಹಾಗೂ ಎಂಬ ಫೇಸ್‌ಬುಕ್ ಬಳಕೆದಾರರು ಪೋಸ್ಟ್ ಅನ್ನು ಹಂಚಿಕೊAಡಿದ್ದು ಆಗಸ್ಟ್ 15ರಿಂದ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಉಚಿತ ಪ್ರಯಾಣವನ್ನು ಕರ್ನಾಟಕ ಹೈ ಕೋರ್ಟ್ ತೀರ್ಪು ನೀಡಿದೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಉಚಿತ ಪ್ರಯಾಣವನ್ನು ಹೈಕೋರ್ಟ್ ರದ್ದು ಪಡಿಸಿದೆಯೇ?.

ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಶಕ್ತಿ ಯೋಜನೆಯನ್ನು ಆಗಸ್ಟ್ 15 ರಿಂದ ರದ್ದು ಪಡಿಸುವಂತೆ ನಿರ್ದೇಶನಗಳು ಬಂದಿಲ್ಲ, ಅಂತಹ ಯಾವುದೇ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನೀಡಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಕಲಿ ಸುದ್ದಿಯಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕೇಂದ್ರ ಕಚೇರಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ಬೋರ್‌ವೆಲ್‌ ಕೊರೆಸಲು ಸರ್ಕಾರವೇ ನೀಡತ್ತೆ 3 ಲಕ್ಷ ಸಹಾಯಧನ!

Fact Check: ಈ ಬಗ್ಗೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಪ್ರತಿಕ್ರಿಯಿಸಿ, ಶಕ್ತಿ ಯೋಜನೆಗೆ ಹೈಕೋರ್ಟ್ ತಡೆ ನೀಡಿಲ್ಲ ಮತ್ತು ಈ ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರವೂ ನಿರ್ಧರಿಸಿಲ್ಲ. ಈ ಬಗ್ಗೆ ಯಾವುದೇ ಆದೇಶ ಪ್ರಕಟವಾಗಿಲ್ಲ. ‘ಶಕ್ತಿ ಯೋಜನೆ ಆ.15ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು. ಇದನ್ನು ಜನರು ನಂಬಬಾರದು. ಈ ಯೋಜನೆ ಸ್ವಾತಂತ್ರ‍್ಯ ದಿನಾಚರಣೆಯ ಬಳಿಕವೂ ಮುಂದುವರಿಯಲಿದೆ’ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು ಇದನ್ನು ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಲಾಗಿದೆ. ಹಾಗಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಶಕ್ತಿ ಯೋಜನೆಯನ್ನು ರದ್ದು ಮಾಡಿಲ್ಲ.

ಇದನ್ನೂ ಓದಿ; ಪ್ರಮಾಣಿಕ ಸರ್ಕಾರ ಅನ್ನೋದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡ್ಲಿ

ಪ್ರಮುಖ ಸುದ್ದಿಗಳನ್ನು ಓದಿ

  1. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
  2. ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
  3. ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
  4. ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ;  ಯಾರು ಈ ಕೈ ಶಾಸಕ
  5. ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
  6. ಬ್ರಿಟಿಷ್ ಕಾಲದ ಕಾನೂನು ಬದಲು;  ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
  7. ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
  8. ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
  9. ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?;  ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
  10. ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
  11. ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್;  ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇