ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಸಾಮಾಜಿಕ ಜಾಲತಾಣದಲ್ಲಿ ಕೊಪ್ಪ ಮೂಲದ ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಿ ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ. ಕೆಲ ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿದ್ದು ಇದು ಹೊಸದೇನಲ್ಲ. ಈ ಕಿಡಿಗೇಡಿಗಳು ಯಾರೆಂದು ಪತ್ತೆ ಹಚ್ಚುವಲ್ಲಿ ಸೈಬರ್ ಕ್ರೈಂ ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ.
ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ ಎನ್ನುವ ಆರೋಪಗಳು ಕೂಡ ಕೇಳಿಬಂದಿವೆ. ಕಿಡಿಗೇಡಿಗಳು ಮೆಸೆಂಜರ್, ಫೇಸ್‌ಬುಕ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಭಯ ಹುಟ್ಟಿಸುವಂತಹ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಭಯ ಹುಟ್ಟಿಸಿ ಹಣ ವಸೂಲಿಗೂ ಇಳಿದಿದ್ದಾರೆ. 45 ದಿನದೊಳಗೆ ನಿಮಗೆ ಗಂಡಾತರ ಕಾದಿದೆ ಅನ್ನುವ ರೀತಿ ಮೆಸೇಜ್ ಮಾಡುವ ಮೂಲಕ ಜನರಿಗೆ ಭಯ ಹುಟ್ಟಿಸುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.
ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್?
ಆಶ್ರಮದಿಂದ ಸ್ಪಷ್ಟನೆ, ಕಾನೂನು ಕ್ರಮಕ್ಕೆ ಮುಂದಾದ ಸಿಬ್ಬಂದಿ
ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಿ ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ. ಕಿಡಿಗೇಡಿಗಳು ಭಯ ಹುಟ್ಟಿಸುವ ರೀತಿ ಮೆಸೇಜ್ಗಳನ್ನು ಮಾಡಿ ಹಣ ಸುಲಿಗೆಗೆ ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆಶ್ರಮದ ಸಿಬ್ಬಂದಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಾಗೂ ಆಶ್ರಮಕ್ಕೂ ಈ ಅಕೌಂಟ್ಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮತ್ತೊಂದೆಡೆ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿದ್ದು ಫೇಕ್ ಅಕೌಂಟ್ ನಿಂದ ಹಣ ಕೇಳಿದ್ರೆ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಚಿಕ್ಕಮಗಳೂರು: ಕಾದ ಕಾವಲಿಯಂತಿದ್ದ ಜಿಲ್ಲೆಗೆ ತಂಪೆರೆದ ಮಳೆರಾಯ, ಹಲವೆಡೆ ಅವಾಂತರ ಸೃಷ್ಟಿ; ಶೃಂಗೇರಿಯಲ್ಲಿ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ
ಜಿಲ್ಲೆಯ ಹಲವೆಡೆ ಗಾಳಿಸಹಿತ ಭಾರಿ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದರು. ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದ ಬಳಿ ಬೃಹತ್ ಗಾತ್ರದ ಮರವೊಂದು ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಖಂ ಆಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ
- ಪಟ್ಟಣದಲ್ಲಿ ಡಬಲ್ ಮರ್ಡರ್; ಕೊನೆಗೂ ಆರೋಪಿ ಅರೆಸ್ಟ್; ಹತ್ಯೆಗೆ ಕಾರಣವೇನು?
- ಕಾಡಾನೆ ದಾಳಿಗೊಳಗಾಗಿದ್ದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವು
ಪ್ರದೀಪ್ ಗೌಡ ಎನ್ನುವವರಿಗೆ ಸೇದಿಷ ಓಮ್ನಿ ಕಾರು ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆ ಸಂಚಾರ ಕೂಡ ಕೆಲ ಸಮಯ ಬಂದ್ ಆಗಿತ್ತು. ಶೃಂಗೇರಿ, ಕೊಪ್ಪ, ಜಯಪುರ ಸೇರಿದಂತೆ ಹಲವು ಕಡೆ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನರಿಗೆ ವರುಣರಾಯ ತಂಪೆರೆದಿದ್ದಾನೆ.
ಕಾದ ಕಾವಲಿಯಂತಿದ್ದ ಜಿಲ್ಲೆಗೆ ತಂಪೆರೆದ ವರುಣರಾಯ
ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಶೃಂಗೇರಿ, ಕೊಪ್ಪ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇದನ್ನೂ ಓದಿ; ಶುಭ ಕಾರ್ಯಕ್ಕೆ ಹೊರಟ್ಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಜಯಪುರ, ಕೊಪ್ಪ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಬಾರಿ ಮಳೆಯಾಗುತ್ತಿದ್ದು, ಕೆಲವೆಡೆ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ ಉಂಟಾಗಿದೆ.
ಮಳೆ ಇಲ್ಲದೆ ಬೆಳೆಗಾರರಿಗೆ ಕಾಫಿ, ಅಡಿಕೆ ಹಾಗೂ ಮೆಣಸನ್ನ ಉಳಿಸಿಕೊಳ್ಳುವುದೇ ಕಷ್ಟವಾಗಿತ್ತು. ಬೆಳೆಗಳಿಗೆ ನಿತ್ಯ ನೀರಿನ ಸೌಲಭ್ಯ ಕಲ್ಪಿಸುವುದು ಅಸಾಧ್ಯವಾಗಿತ್ತು. ಕಳೆದ ವರ್ಷ ಈ ವೇಳೆಯಲ್ಲಿ ಮಲೆನಾಡಲ್ಲಿ ಸಮೃದ್ಧ ಮಳೆಯಾಗಿತ್ತು. ಹಾಗಾಗಿ, ಮೇ ಮುಗಿಯುವ ಹಂತಕ್ಕೆ ಬಂದರೂ ಮಳೆಯಾಗದ್ದನ್ನ ಕಂಡು ಮಲೆನಾಡಿಗರು ಆತಂಕಕ್ಕೀಡಾಗಿದ್ದರು. ನಿತ್ಯ ಸಂಜೆ ವೇಳೆಗೆ ಮೋಡ ಕಡುಗಟ್ಟುತ್ತಿದ್ದರು ಮಳೆಯಾಗುತ್ತಿರಲಿಲ್ಲ. ಇದೀಗ, ಭಾರೀ ಗುಡುಗು-ಸಿಡಿಲಿನ ಸಮೇತ ಧಾರಾಕಾರವಾಗಿ ಆಲುಕಲ್ಲು ಮಳೆ ಸುರಿಯುತ್ತಿದ್ದು ಮಲೆನಾಡಿಗರು ಸಂತಸಗೊಂಡಿದ್ದಾರೆ. ಭಾರಿ ಮಳೆಯಿಂದ ಮಲೆನಾಡಿನ ಕೆಲಭಾಗದಲ್ಲಿ ಮರಗಳು ರಸ್ತೆಗೆ ಉಳಿರುವುದರಿಂದ ಗ್ರಾಮೀಣ ಭಾಗದ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮಳೆ ಗಾಳಿಗೆ ಮರಗಳು ಬಿದ್ದ ಪರಿಣಾಮ ಗ್ರಾಮೀಣ ಭಾಗದ ಕೆಲವೆಡೆ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.