Farming Training: ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

(Farming Training:) ದಕ್ಷಿಣ ಕನ್ನಡ: ಗ್ರಾಮೀಣಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ ಸಂಸ್ಥೆಯಾದ ಉಜಿರೆಯ ರುಡ್‌ಸೆಟ್ (RUDSET) ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಉಚಿತ “ಕೃಷಿ ಉದ್ಯಮಿ – ಕೋಳಿ ಸಾಕಾಣಿಕೆ” ತರಬೇತಿ ಶಿಬಿರವನ್ನು ಆಯೋಜಿಸಿದೆ. ಸ್ವಉದ್ಯೋಗ ಆರಂಭಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜೂನ್ 1ರಿಂದ ಜೂನ್ 13, 2026ರವರೆಗೆ ನಡೆಯಲಿರುವ ಈ ತರಬೇತಿ ಶಿಬಿರವು 13 ದಿನಗಳ ಕಾಲ ಪ್ರತಿದಿನ ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ಉಜಿರೆಯ ಸಿದ್ಧವನದಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯಲಿದೆ.

ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18ರಿಂದ 50 ವರ್ಷದೊಳಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು ಹಾಗೂ ಸ್ವಉದ್ಯೋಗದ ಬಗ್ಗೆ ಆಸಕ್ತಿ ಹೊಂದಿರಬೇಕು ಎಂದು ಸಂಸ್ಥೆ ತಿಳಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಸಂಪೂರ್ಣ ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಕೂಡ ಒದಗಿಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಪ್ರಕಟಣೆಯಲ್ಲಿ ನೀಡಿರುವ QR ಕೋಡ್ ಸ್ಕ್ಯಾನ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 6364561982, 8296770307, 9980885900, 9448348569, 8861514706, 9591044014 ಹಾಗೂ 9902594791 ಮೊಬೈಲ್ ಸಂಖ್ಯೆಗಳ ಮೂಲಕ ಅಥವಾ 08256-236404 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Farming Training: ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
Farming Training: ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Farming Training:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?