(Fasal Bima:) ಬೆಳೆ ವಿಮೆ ಯೋಜನೆಯನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಅದುವೇ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಥವಾ ಪಿಎಂಎಫ್ಬಿವೈ ಸ್ಕೀಮ್ ಆಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ
ಕೇಂದ್ರ ಸರ್ಕಾರ 2016ರಲ್ಲಿ ರೈತರ ಬೆಳೆಗಳಿಗೆ ವಿಮಾ ರಕ್ಷಣೆ ನೀಡಲು ಈ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿತು. ಈ ಕ್ರಾಪ್ ಇನ್ಷೂರೆನ್ಸ್ ಪಾಲಿಸಿಗೆ ಅರ್ಜಿ ಸಲ್ಲಿಸುವುದು, ಪರಿಹಾರ ಪಡೆಯುವುದು ಎಲ್ಲವೂ ಸುಲಭದ ಕೆಲಸ.
ರೈತರು ಯಾವುದಾದರೂ ಬ್ಯಾಂಕ್ನಿಂದ ಬೆಳೆ ಸಾಲ ಪಡೆದುಕೊಂಡಿದ್ದರೆ, ಆಗ ಪಿಎಂ ಫಸಲ್ ಬಿಮಾ ಯೋಜನೆ ಅಡಿ ಕ್ರಾಪ್ ಇನ್ಷೂರೆನ್ಸ್ ಅನ್ವಯ ಆಗುತ್ತದೆ. ನಿಮಗೆ ನೀಡಲಾಗುವ ಸಾಲದಲ್ಲಿ ಬೆಳೆ ವಿಮೆಯ ಪ್ರೀಮಿಯಮ್ ಅನ್ನು ಮುರಿದುಕೊಂಡಿರಲಾಗುತ್ತದೆ. ಹೀಗಾಗಿ, ಬೆಳೆ ಸಾಲ ಪಡೆದ ರೈತರು ಪ್ರತ್ಯೇಕವಾಗಿ ಬೆಳೆ ವಿಮೆ ಮಾಡಿಸುವ ಅಗತ್ಯ ಇರುವುದಿಲ್ಲ.
ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ
ಬ್ಯಾಂಕ್ಗಳಲ್ಲಿ, ಸಮೀಪದ ಸಿಎಸ್ಸಿ ಸೆಂಟರ್ ಅಥವಾ ಕೃಷಿ ಕೇಂದ್ರ, ಅಥವಾ ಅಧಿಕೃತ ವಿಮಾ ಏಜೆಂಟ್ ಭೇಟಿ ಮಾಡಿ ಬೆಳೆ ವಿಮೆಗೆ ಅರ್ಜಿ ಪಡೆದು ಅದನ್ನು ಭರ್ತಿ ಮಾಡಿ ಸಲ್ಲಿಸಬಹುದು.
ಜಮೀನಿನ ಆರ್ಟಿಸಿ (ಪಹಣಿ), ನಿಮ್ಮ ಆಧಾರ್ ಆರ್ಡ್ ಅಥವಾ ಇನ್ಯಾವುದಾದರೂ ಐಡಿ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರ ಇವನ್ನು ನೀಡಬೇಕಾಗುತ್ತದೆ. ಸಾಮಾನ್ಯವಾಗಿ ಬೆಳೆ ವಿಮಾ ಮೊತ್ತದ ಶೇ. 1.5ರಿಂದ 5ರಷ್ಟು ಹಣವನ್ನು ರೈತರು ತಮ್ಮ ಕೈಯಿಂದ ನೀಡಬೇಕಾಗುತ್ತದೆ.
ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!; ಈ ರೀತಿ ಚೆಕ್ ಮಾಡಿ
ಕರ್ನಾಟಕದ ರೈತರಿಗೆ ಬೆಳೆ ವಿಮೆಗೆ ಪ್ರತ್ಯೇಕ ಪೋರ್ಟಲ್
ಕರ್ನಾಟಕ ಸರ್ಕಾರವು ಆನ್ಲೈನ್ನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಪೋರ್ಟಲ್ ರೂಪಿಸಿದೆ. ಅದರ ಲಿಂಕ್ ಇಲ್ಲಿದೆ: www.samrakshane.karnataka.gov.in/CropHome.aspx
ರಾಜ್ಯ ಸರ್ಕಾರವು ಬೆಳೆ ವಿಮೆಗಾಗಿ ವಿವಿಧ ಇನ್ಷೂರೆನ್ಸ್ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇದರಲ್ಲಿ ಸರ್ಕಾರಿ ಇನ್ಷೂರೆನ್ಸ್ ಕಂಪನಿಗಳು, ಖಾಸಗಿ ಇನ್ಷೂರೆನ್ಸ್ ಕಂಪನಿಗಳೂ ಸೇರಿವೆ. ಅಗ್ರಿಕಲ್ಚರ್ ಇನ್ಷೂರೆನ್ಸ್ ಕಂಪನಿಯಿಂದ ಹಿಡಿದು ಟಾಟಾ ಎಐಜಿವರೆಗೆ ವಿವಿಧ ಕಂಪನಿಗಳಿವೆ. ಒಂದೊಂದು ಜಿಲ್ಲೆಗೂ ಒಂದು ನಿಗದಿತ ಇನ್ಷೂರೆನ್ಸ್ ಕಂಪನಿ ಇರುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Fasal Bima:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





