Fast food: ಬಿಪಿಎಲ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ

(Fast food:) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕಾ ತರಬೇತಿ ಶಿಬಿರವನ್ನು ಏಪ್ರಿಲ್ 4ರಿಂದ ಆಯೋಜಿಸಲಾಗಿದೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಸೊಣ್ಣಹಳ್ಳಿಪುರದಲ್ಲಿರುವ ಸಂಸ್ಥೆಯಲ್ಲಿ ನಡೆಯುವ ಈ ತರಬೇತಿಯಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಫ್ರೈಡ್ ರೈಸ್, ಸಮೋಸ ಸೇರಿದಂತೆ ಹಲವು ಜನಪ್ರಿಯ ಚಾಟ್ಸ್ ಹಾಗೂ ಫಾಸ್ಟ್ ಫುಡ್ ಪದಾರ್ಥಗಳ ತಯಾರಿಕೆ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

ಸ್ವಯಂ ಉದ್ಯೋಗ ಆರಂಭಿಸಲು ಬಯಸುವ 18 ರಿಂದ 49 ವರ್ಷದೊಳಗಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರಾವಧಿಯಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ.


ನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದಿರಬೇಕು ಹಾಗೂ ಕನ್ನಡವನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಪೂರ್ಣಗೊಂಡ ನಂತರ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ವತಿಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಆಸಕ್ತರು ಮಾರ್ಚ್ 27ರ ಬೆಳಗ್ಗೆ 9.30ಕ್ಕೆ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ವಿದ್ಯಾರ್ಹತೆ ಹಾಗೂ ವಿಳಾಸದ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದವರು ಮಾರ್ಚ್ 27ರೊಳಗೆ ದೂರವಾಣಿ ಸಂಖ್ಯೆ 8970476050, 9591514754, 6363139123, 9686248369 ಮತ್ತು 9505894247 ಗೆ ಸಂಪರ್ಕಿಸಬಹುದು.

Fast food: ಬಿಪಿಎಲ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ
Fast food: ಬಿಪಿಎಲ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ

ನ್ನೂ ಓದಿ: ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ LPG ಬುಕಿಂಗ್ ಆ್ಯಪ್; ಚ್ಯಾಟ್ ಜಿಪಿಟಿ, ಫ್ಲಿಪ್‌ಕಾರ್ಟ್‌ ಹಿಂದಿಕ್ಕಿ ಹೊಸ ದಾಖಲೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು (Fast food:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ