FASTag New Rule: ಫಾಸ್ಟ್ ​ಟ್ಯಾಗ್ ನಲ್ಲಿ ಹೊಸ ನಿಯಮ ಜಾರಿ

(FASTag New Rule) ಸೋಮವಾರದಿಂದ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮ ಜಾರಿಗೆ ಬಂದಿದೆ. ಇದರ ಅಡಿಯಲ್ಲಿ, ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್‌ಟ್ಯಾಗ್ ಅನ್ನು ಕಪ್ಪುಪಟ್ಟಿ ಅಥವಾ ಬ್ಲ್ಯಾಕ್​ ಲಿಸ್ಟ್​ಗೆ ಸೇರಿಸಿದರೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ


ಹೌದು, ಫಾಸ್ಟ್‌ ಟ್ಯಾಗ್‌ ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ. ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಹನವು ಟೋಲ್ ದಾಟುವ ಮೊದಲು 60 ನಿಮಿಷಗಳಿಗಿಂತ ಹೆಚ್ಚು ಕಾಲ ಮತ್ತು ಟೋಲ್ ದಾಟಿದ ನಂತರ 10 ನಿಮಿಷಗಳ ಕಾಲ ಫಾಸ್ಟ್‌ ಟ್ಯಾಗ್ ನಿಷ್ಕ್ರಿಯವಾಗಿದ್ದರೆ, ವಹಿವಾಟನ್ನು ತಿರಸ್ಕರಿಸಲಾಗುತ್ತದೆ. ಇದು ದೋಷ ಕೋಡ್ 176 ಅಡಿಯಲ್ಲಿ ಬರಲಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್‌ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಹೊಸ ನಿಯಮದಲ್ಲಿ ಏನಿದೆ?
* ಫಾಸ್ಟ್​ ಟ್ಯಾಗ್​ ನಲ್ಲಿ ಹಣ ಇರಬೇಕು, ಇಲ್ಲದಿದ್ದರೆ ಟೋಲ್ ಪ್ರವೇಶಕ್ಕೆ ಒಂದು ಗಂಟೆ ಮೊದಲು ಹಣ ಜಮೆ ಮಾಡಿರಬೇಕು. ಟೋಲ್ ಹತ್ತಿರ ಬಂದಮೇಲೆ ರಿಚಾರ್ಜ್ ಮಾಡೋಣ ಅಂದರೆ ಸಮಸ್ಯೆ ಆಗಲಿದೆ.
* ಟೋಲ್ ದಾಟುವ 60 ನಿಮಿಷ ಮೊದಲು ಹಾಗೂ ದಾಟಿದ 10 ನಿಮಿಷಗಳ ಕಾಲ ಫಾಸ್ಟ್​ಟ್ಯಾಗ್ ಆಕ್ಟೀವ್ ಇರಬೇಕು. ಒಂದು ವೇಳೆ ಈ ನಿಯಮ ಪಾಲನೆ ಮಾಡದಿದ್ದರೆ, ಟೋಲ್ ಸಿಸ್ಟಮ್​​ನಲ್ಲಿ ಎರರ್ ಕೋಡ್ 176 ಎಂದು ತೋರಿಸಲಾಗುತ್ತದೆ. ಈ ವೇಳೆ ಪ್ರಯಾಣಿಕರು ದುಪ್ಪಟ್ಟು ಹಣ ಪಾವತಿ ಮಾಡಬೇಕಾಗುತ್ತದೆ.
* ಕೆವೈಸಿ ಮಾಡಿಲ್ಲ ಎಂದಾದರೆ ನಿಮ್ಮ ಫಾಸ್ಟ್​ಟ್ಯಾಗ್ ಅನ್ನು ಕಪ್ಟುಪಟ್ಟಿಗೆ ಸೇರಿಸಲಾಗುತ್ತದೆ. ಅಂತಹ ಟ್ಯಾಗ್​ನೊಂದಿಗೆ ಬರುವ ವಾಹನಕ್ಕೆ ದುಪ್ಪಟ್ಟು ಸಂಕು ವಿಧಿಸಲಾಗುತ್ತದೆ.
* ಒಂದು ವೇಳೆ ವಾಹನ ಟೋಲ್ ಗೇಟ್ ದಾಟಿದ 15 ನಿಮಿಷಗಳ ನಂತರ ಫಾಸ್ಟ್​ಟ್ಯಾಗ್ ಖಾತೆಯಿಂದ ಹಣ ಕಡಿತವಾದರೆ ಅದಕ್ಕೆ ವಾಹನ ಸವಾರರು ಹೆಚ್ಚಿನ ಶುಲ್ಕವನ್ನು ವಿಧಿಸಬೇಕಾಗುತ್ತದೆ.
* ಟೋಲ್​ಗೇಟ್​ನಲ್ಲಿ ಹಣ ಕಡಿತ ವಿಳಂಬವಾದರೆ ಅದಕ್ಕೆ ಟೋಲ್ ಆಪರೇಟರ್ ಅನ್ನೇ ಹೊಣೆಯನ್ನಾಗಿ ಮಾಡಲಾಗುತ್ತದೆ. ತಪ್ಪು ಶುಲ್ಕ ಮತ್ತು ಹೆಚ್ಚುವರಿ ಹಣ ಕಡಿತಕ್ಕೆ ಸಂಬಂಧಿಸಿ ಬಳಕೆದಾರರು 15 ದಿನಗಳ ಬಳಿಕವಷ್ಟೇ ದೂರು ಸಲ್ಲಿಸಬಹುದು.

ಹೊಸ ನಿಯಮವೂ ಟೋಲ್ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಟೋಲ್ ಪ್ಲಾಜಾಗಳಲ್ಲಿನ ಜಗಳಗಳನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರು ನಂಬುತ್ತಾರೆ.


ಇದನ್ನೂ ಓದಿ: ಒಂದೇ ಚಾರ್ಜ್‌ನಲ್ಲಿ 320 ಕಿ.ಮೀ. ಪ್ರಯಾಣ; ಮತ್ತೊಂದು ಹೊಸ ಸ್ಕೂಟರ್ ಅನಾವರಣ


ಇದಲ್ಲದೆ, ಟೋಲ್ ಸಂಗ್ರಹವನ್ನು ಹೆಚ್ಚು ಪಾರದರ್ಶಕ ಮತ್ತು ಸುಗಮವಾಗಿಸುವುದು ಈ ಹೊಸ ವ್ಯವಸ್ಥೆಯ ಉದ್ದೇಶವಾಗಿದೆ. ಇದರಿಂದ ಟೋಲ್ ಪ್ಲಾಜಾದಲ್ಲಿ ಸಂಚಾರ ದಟ್ಟಣೆಯನ್ನು ತಡೆಗಟ್ಟಬಹುದು ಮತ್ತು ಪ್ರಯಾಣವನ್ನು ಸುಗಮಗೊಳಿಸಬಹುದು. ಈ ಬದಲಾವಣೆಗಳ ಬಗ್ಗೆ ತಿಳಿದಿಲ್ಲದ ಬಳಕೆದಾರರು ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಬಹುದು. ಆದ್ದರಿಂದ, ಎಲ್ಲಾ ವಾಹನ ಮಾಲೀಕರು ತಮ್ಮ ಫಾಸ್ಟ್‌ಟ್ಯಾಗ್ ಅನ್ನು ಸರಿಯಾಗಿ ನಿರ್ವಹಿಸುವುದು ಮುಖ್ಯ.

FASTag New Rule: ಫಾಸ್ಟ್ ​ಟ್ಯಾಗ್ ನಲ್ಲಿ ಹೊಸ ನಿಯಮ ಜಾರಿ
FASTag New Rule: ಫಾಸ್ಟ್ ​ಟ್ಯಾಗ್ ನಲ್ಲಿ ಹೊಸ ನಿಯಮ ಜಾರಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ