(Financial Schemes:) ಮಾರ್ಚ್ 18 ರಂದು ಆಚರಿಸಲ್ಪಡುವ ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ
ಪ್ರಧಾನಮಂತ್ರಿ ಮುದ್ರಾ ಯೋಜನೆ:
ಹತ್ತು ವರ್ಷಗಳ ಹಿಂದೆ ಆರಂಭವಾದ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಅಡಮಾನ ರಹಿತ ಸಾಲ ನೀಡಲಾಗುತ್ತದೆ. ಈ ಯೋಜನೆಯಡಿ 20 ಲಕ್ಷ ರೂವರೆಗೆ ಸಾಲ ಪಡೆಯುವ ಅವಕಾಶವಿದೆ. ಮುದ್ರಾ ಸಾಲ ಖಾತೆಗಳನ್ನು ಹೊಂದಿರುವ ಉದ್ದಿಮೆದಾರರಲ್ಲಿ ಮಹಿಳೆಯರ ಪ್ರಮಾಣ ಹೆಚ್ಚು. ಸಾವಿರಾರು ಮಹಿಳೆಯರು ಈ ಯೋಜನೆಯ ನೆರವಿನಿಂದ ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರೆ.
ಪಿಎಂ ಜನ್ ಧನ್ ಯೋಜನೆ:
2014ರಲ್ಲಿ ಆರಂಭವಾದ ಪ್ರಧಾನಮಂತ್ರಿ ಜನ್ ಧನ್ ಯೋಜನೆಯು ದೇಶದ ಪ್ರತಿಯೊಬ್ಬ ವ್ಯಕ್ತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯೊಳಗೆ ತರಲು ಉದ್ದೇಶಿಸಿದೆ. ಸರ್ಕಾರದ ವಿವಿಧ ಯೋಜನೆಗಳ ಲಾಭವು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲುಪುವಂತೆ ಮಾಡುವುದರಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ. ದೇಶದಲ್ಲಿ ಈಗಾಗಲೇ 32 ಕೋಟಿಗೂ ಅಧಿಕ ಮಹಿಳೆಯರು ಜನ್ ಧನ್ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ಜನ್ ಧನ್ ಖಾತೆಯ ಪ್ರಮುಖ ಸೌಲಭ್ಯಗಳು:
- ಝೀರೋ ಬ್ಯಾಲನ್ಸ್ ಬ್ಯಾಂಕ್ ಖಾತೆ ಸೌಲಭ್ಯ
- ರುಪೇ ಡೆಬಿಟ್ ಕಾರ್ಡ್
- 2 ಲಕ್ಷ ರೂಗಳ ಅಪಘಾತ ವಿಮೆ
- 10,000 ರೂಗಳವರೆಗೆ ಓವರ್‌ಡ್ರಾಫ್ಟ್ ಸೌಲಭ್ಯ
- ಡಿಬಿಟಿ, ಪಿಎಂ ಜೀವನ್ ಜ್ಯೋತಿ ಬಿಮಾ ಯೋಜನೆ, ಪಿಎಂ ಸುರಕ್ಷಾ ಬಿಮಾ ಯೋಜನೆ ಹಾಗೂ ಅಟಲ್ ಪೆನ್ಷನ್ ಯೋಜನೆಗಳಿಗೆ ಸಂಪರ್ಕ
ಪಿಎಂ ಸ್ವನಿಧಿ ಯೋಜನೆ:
2020ರಲ್ಲಿ ಆರಂಭವಾದ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಬೀದಿಬದಿ ವ್ಯಾಪಾರಿಗಳಿಗೆ ನೆರವಾಗಲು ರೂಪಿಸಲಾಗಿದೆ. ಈ ಯೋಜನೆಯಡಿ ಅಡಮಾನವಿಲ್ಲದೆ 50,000 ರೂವರೆಗೆ ಸಾಲ ಪಡೆಯಬಹುದು. ಜೊತೆಗೆ ಬಡ್ಡಿದರದಲ್ಲೂ ರಿಯಾಯಿತಿ ನೀಡಲಾಗುತ್ತದೆ. ಬೀದಿ ವ್ಯಾಪಾರದಲ್ಲಿ ತೊಡಗಿರುವ ಮಹಿಳೆಯರಿಗೆ ಈ ಯೋಜನೆ ವಿಶೇಷವಾಗಿ ಸಹಾಯಕವಾಗಿದೆ.
ಇದನ್ನೂ ಓದಿ: ಎಲ್ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್
ಒಟ್ಟಾರೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಹಣಕಾಸು ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದ್ದು, ಸ್ವಂತ ಉದ್ಯೋಗ ಹಾಗೂ ಜೀವನಮಟ್ಟ ಸುಧಾರಣೆಗೆ ನೆರವಾಗುತ್ತಿವೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Financial Schemes:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





