ಬೆಂಗಳೂರು: ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು ಬೈಕ್, ಟಿವಿ, ಫ್ರಿಡ್ಜ್ ಇದ್ದ ಮನೆಗಳ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ ಎಂದು ತಿಳಿಸಿದೆ.
ರಾಜ್ಯಾದ್ಯಂತ ಬೈಕ್, ಟಿವಿ, ಫ್ರಿಡ್ಜ್ ಹೊಂದಿರುವoತಹ ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಪಡಿತರವನ್ನು ನೀಡುವುದಿಲ್ಲ ಎಂಬ ವಂದoತಿ ಹರಡಿದ್ದರಿಂದ ಅನೇಕ ಜನರು ಭಯಗೊಂಡಿದ್ದರು.
ಈ ವಿಷಯದ ಕುರಿತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತೆ ಶಮ್ಲಾ ಇಕ್ಬಾಲ್ ನವರು, ‘ಜನರು ವದಂತಿಗಳನ್ನು ನಂಬಬಾರದು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವಂತಹ ಸುದ್ದಿಗಳು ಆಧಾರವಿಲ್ಲದೇ ಇರುವಂತಹ ಸುದ್ದಿಯಾಗಿದೆ, ಅಂತಹ ಯಾವುದೇ ಆದೇಶವನ್ನು ಇಲಾಖೆಯಿಂದ ಹೊರಡಿಸಿಲ್ಲ. ಬೈಕ್, ಟಿವಿ, ಫ್ರಿಡ್ಜ್ ಇದ್ದಂತಹವರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ’ ಎಂದು ಸ್ಪಷ್ಟೀಕರಣವನ್ನು ನೀಡಿದ್ದಾರೆ.