For colleges: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ “ಜಾನಪದ ಉತ್ಸವ -2025” ವನ್ನು ಆಚರಿಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಆದೇಶ ಪತ್ರದಲ್ಲಿ ಏನಿದೆ?
ಇಂದಿನ ಪಾಶ್ಚಾತ್ಯ ಶೈಲಿಯ ಆಧುನಿಕ ಜೀವನದಲ್ಲಿ ದೇಸೀ ಸಂಸ್ಕೃತಿಯು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ. ಜನಪದ ಸಾಹಿತ್ಯ ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ, ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕೆ, ಜನಾಂಗೀಯ ಪಾಕಪದ್ಧತಿ (ದೇಸೀ ಆಹಾರ), ದೇಸೀ ಉಡುಗೆ-ತೊಡುಗೆ, ದೇಸೀ ನೃತ್ಯ-ಸಂಗೀತ, ಆಟ, ಈ ಎಲ್ಲವನ್ನು ಒಳಗೊಂಡಿರುವುದೇ ಜಾನಪದವೆಂದು ಹೇಳಬಹುದು.
ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರ ಗಮನಕ್ಕೆ ಏನದು? ಇಲ್ಲಿದೆ ಡಿಟೈಲ್ಸ್…
ಈ ದೇಸೀ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿ ತಲೆ-ತಲೆಮಾರುಗಳಿಂದ ಬಂದಿರುವ ಆಯಾ ಪ್ರಾದೇಶಿಕ/ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿ / ಸೊಗಡುಗಳ ಬಗ್ಗೆ, ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಹಾಗೂ ತನ್ನ ಸುತ್ತಲಿನ ಪರಿಸರ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು, ಸೃಜನಶೀಲತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇಲಾಖಾ ವತಿಯಿಂದ ನಮ್ಮ ಸಂಸ್ಕೃತಿ-ನಮ್ಮ ಹೆಮ್ಮೆ”- ಶೀರ್ಷಿಕೆಯಡಿಯಲ್ಲಿ “ಜಾನಪದ ಉತ್ಸವ-2025” ನ್ನು ಆಚರಿಸಲು ಉದ್ದೇಶಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಅಡಗಿರುವ ಆಯಾ ಪ್ರಾದೇಶಿಕ ಸಾಂಪ್ರದಾಯಿಕ ಕಲೆ ಹಾಗೂ ಕೌಶಲ್ಯಗಳನ್ನು ಪ್ರದರ್ಶಿಸಲು ಹಾಗೂ ಸ್ಪರ್ಧೆ/ಆಚರಣೆಗಳು ಇತ್ಯಾದಿಗಳನ್ನು ಮುಂಬರುವ ಫೆಬ್ರವರಿ/ ಮಾರ್ಚ್ ತಿಂಗಳುಗಳಲ್ಲಿ ಆಯೋಜಿಸಿ, ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ನಿಮ್ಮ ಉಗುರುಗಳು ಹೇಳುತ್ತೆ ನಿಮ್ಮ ಆರೋಗ್ಯದ ಗುಟ್ಟು! ರೋಗ ಬರೋ ಮುನ್ನವೇ ಉಗುರುಗಳು ಸೂಚನೆ ಕೊಡುತ್ತೆ
ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (For colleges) ಈ ಕೆಳಗೆ ನೀಡಿರುವ ಕಾರ್ಯಕ್ರಮಗಳಲ್ಲಿ ತಮಗೆ ಸೂಕ್ತವಾದ ಕಾರ್ಯಕ್ರಮ/ಕಾರ್ಯಕ್ರಮಗಳನ್ನು “ಜಾನಪದ ಉತ್ಸವ-2025” ದಡಿಯಲ್ಲಿ ಹಮ್ಮಿಕೊಳ್ಳಬಹುದಾಗಿರುತ್ತದೆ.
1. ಜನಪದ ಸಾಹಿರ್ತ ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ, ಇವುಗಳ ಕುರಿತ ಕಾರ್ಯಗಾರಗಳು.
2. ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕೆ/ವಸ್ತು ಪ್ರದರ್ಶನ.
3. ಜನಾಂಗೀಯ ಪಾಕಪದ್ಧತಿ (ದೇಸೀ ಆಹಾರ) – ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.
4. ಸ್ಥಳೀಯ ಕಲಾವಿದರುಗಳಿಂದ ದೇಸೀ ಉಡುಗೆ-ತೊಡುಗೆಗಳು – ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.
5. ಸ್ಥಳೀಯ ಕಲಾವಿದರುಗಳಿಂದ ದೇಸೀ ನೃತ್ಯ-ಸಂಗೀತ, ಆಟ – ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.
6. ಮೇಲೆ ತಿಳಿಸಿರುವ ವಿಷಯಗಳಲ್ಲಷ್ಟೇ ಅಲ್ಲದೆ ವಿದ್ಯಾರ್ಥಿಗಳಲ್ಲಿ ವಿಶೇಷವಾದ ಸೃಜನಾತ್ಮಕ/ಕಲಾತ್ಮಕ ಕೌಶಲ್ಯತೆಗಳೇನಾದರೂ ಇದ್ದಲ್ಲಿ ಅಂತಹ ಕೌಶಲ್ಯತೆಗಳನ್ನು ಗುರುತಿಸಿ, ಅವುಗಳನ್ನು ಪ್ರದರ್ಶಿಸಲು ತಮ್ಮ ಹಂತದಲ್ಲೇ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಕಾರ್ಮಿಕರ ಗಮನಕ್ಕೆ! ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು
ಈ ಮೇಲ್ಕಂಡ “ಜಾನಪದ ಉತ್ಸವ-2025” ನ್ನು ಫೆಬ್ರವರಿ ಹಾಗೂ ಮಾರ್ಚ್- 2025 ರ ತಿಂಗಳಿನಲ್ಲಿ ತಮ್ಮ ತಮ್ಮ ಕಾಲೇಜಿನ ಹಂತದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮಕೈಗೊಳ್ಳುವುದು ಹಾಗೂ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಸಚಿತ್ರ ಸಮೇತ ವರದಿಗಳನ್ನು ಕೇಂದ್ರ ಕಛೇರಿಯ ಇ-ಮೇಲ್ ವಿಳಾಸ : dreacademic6@gmail.com ಕ್ಕೆ ಏಪ್ರಿಲ್-5 ರೊಳಗೆ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: ಇ-ಖಾತೆ ಕುರಿತು ಮತ್ತೊಂದು ಬಿಗ್ ಅಪ್ಡೇಟ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





