Forest Land SIT: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ

(Forest Land SIT:) ಕಂದಾಯ ಇಲಾಖೆಯ ಸ್ವಾಧೀನದಲ್ಲಿದ್ದ ಅರಣ್ಯ ಪ್ರದೇಶವನ್ನು ಅರಣೇತರ ಉದ್ದೇಶಗಳಿಗಾಗಿ ಮಂಜೂರು ಮಾಡಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಿ, ಅಂತಹ ಭೂಮಿಯನ್ನು ಮರುವಶಕ್ಕೆ ಪಡೆಯಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಶೇಷ ತನಿಖಾ ತಂಡಗಳನ್ನು (ಎಸ್‌ಐಟಿ) ರಚಿಸಲಾಗಿದೆ.


ನ್ನೂ ಓದಿ: ಮತ್ತೊಮ್ಮೆ ವಿದ್ಯುತ್ ದರ ಏರಿಕೆ;  ರಾಜ್ಯದ ಜನತೆಗೆ ಕರೆಂಟ್ ಶಾಕ್


ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ ಅರಣ್ಯ ಇಲಾಖೆಯು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಎಸ್‌ಐಟಿ ರಚಿಸಿದೆ. ನಾಲ್ಕು ತಿಂಗಳಲ್ಲಿ ಈ ಕುರಿತು ವರದಿ ನೀಡಬೇಕೆಂದು ಜಿಲ್ಲಾ ಎಸ್‌ಐಟಿಗೆ ನಿರ್ದೇಶಿಸಲಾಗಿದೆ.

(Forest Land SIT:) ಇನ್ನು ರಾಜ್ಯ ಮಟ್ಟದಲ್ಲಿ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುತ್ತಾರೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಅರಣ್ಯ ಪಡೆಗಳ ಮುಖ್ಯಸ್ಥ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ) ಸದಸ್ಯರಾಗಿರಲಿದ್ದಾರೆ. ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಕಾರ್ಯಯೋಜನೆ) ಸದಸ್ಯ ಕಾರ್ಯದರ್ಶಿಯಾಗಿರುವರು.


ನ್ನೂ ಓದಿ: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!


ಜಿಲ್ಲಾ ಮಟ್ಟದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಜಿಲ್ಲಾಧಿಕಾರಿ, ಸದಸ್ಯ ಕಾರ್ಯದರ್ಶಿಯಾಗಿ ಪ್ರಾದೇಶಿಕ ಹಾಗೂ ವನ್ಯಜೀವಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸದಸ್ಯರಾಗಿ ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕರು ಕಾರ್ಯನಿರ್ವಹಿಸಲಿದ್ದಾರೆ.

ರಾಜ್ಯ ಮಟ್ಟದಲ್ಲಿ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುತ್ತಾರೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಅರಣ್ಯ ಪಡೆಗಳ ಮುಖ್ಯಸ್ಥ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ) ಸದಸ್ಯರಾಗಿರಲಿದ್ದಾರೆ. ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಕಾರ್ಯಯೋಜನೆ) ಸದಸ್ಯ ಕಾರ್ಯದರ್ಶಿಯಾಗಿರುವರು. ಜಿಲ್ಲಾ ಮಟ್ಟದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಜಿಲ್ಲಾಧಿಕಾರಿ, ಸದಸ್ಯ ಕಾರ್ಯದರ್ಶಿಯಾಗಿ ಪ್ರಾದೇಶಿಕ ಹಾಗೂ ವನ್ಯಜೀವಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸದಸ್ಯರಾಗಿ ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕರು ಕಾರ್ಯನಿರ್ವಹಿಸಲಿದ್ದಾರೆ.

(Forest Land SIT:) ಜಿಲ್ಲಾ ತಂಡದ ಕಾರ್ಯ ಹೇಗೆ?:
ಜಿಲ್ಲಾ ಮಟ್ಟದ ವಿಶೇಷ ತನಿಖಾ ತಂಡವು ಆಯಾ ಜಿಲ್ಲೆಗಳಲ್ಲಿ ಕಂದಾಯ ಇಲಾಖೆಯು ಹಂಚಿಕೆ ಮಾಡಿರುವ ಅರಣ್ಯ ಭೂಮಿಯನ್ನು ಅರಣ್ಯವಲ್ಲದೇ ಯಾವ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಕುರಿತು ದಾಖಲೆಗಳನ್ನು ಪರಿಶೀಲಿಸಿ, ತನಿಖೆ ನಡೆಸಬೇಕು.


ನ್ನೂ ಓದಿ: ಆಧಾರ್‌ ಕಾರ್ಡ್‌ ಹೊಂದಿದ್ರೆ ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಬಿಗ್‌ ಅಪ್ಡೇಟ್


ತಾಲ್ಲೂಕು, ಹೋಬಳಿ, ಗ್ರಾಮದ ಹೆಸರು, ಸರ್ವೆ ನಂಬರ್‌ಗಳೊಂದಿಗೆ ಭೂಮಿಯನ್ನು ಖಾಸಗಿ ವ್ಯಕ್ತಿ ಇಲ್ಲವೇ ಸಂಸ್ಥೆಗೆ ಯಾವ ಉದ್ದೇಶಕ್ಕೆ ಹಂಚಿಕೆ ಮಾಡಲಾಗಿದೆ. ಯಾವ ಉದ್ದೇಶಕ್ಕೆ ಈಗ ಬಳಕೆ ಮಾಡಲಾಗುತ್ತಿದೆ ಎಂಬುದನ್ನು ಪತ್ತೆಹಚ್ಚಬೇಕು. ಭೂಮಿ ಹಂಚಿಕೆ ವೇಳೆ ನೀಡಿರುವ ಆದೇಶದ ಪ್ರತಿಗಳನ್ನು ಸಂಬಂಧಪಟ್ಟವರಿಂದ ಪಡೆದುಕೊಳ್ಳಬೇಕು.

ಪ್ರತಿ ಜಿಲ್ಲೆಯಲ್ಲಿ ಹಂಚಿಕೆಯಾಗಿರುವ ಅರಣ್ಯ ಭೂಮಿ, ಉದ್ದೇಶದ ಮಾಹಿತಿಯನ್ನು ಸರ್ವೇ ನಂಬ‌ರ್ ಸಹಿತ ನಿಖರವಾಗಿ ದಾಖಲಿಸಿ ನಿಗದಿತ ನಮೂನೆಯಲ್ಲಿ ರಾಜ್ಯ ವಿಶೇಷ ತನಿಖಾ ತಂಡಕ್ಕೆ ಸಲ್ಲಿಸಬೇಕು. ರಾಜ್ಯ ವಿಶೇಷ ತನಿಖಾ ತಂಡ ರೂಪಿಸಿದ ಮಾರ್ಗಸೂಚಿ/ ವಿವರಣೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿದ್ದುಕೊಂಡು ವ್ಯಕ್ತಿ ಇಲ್ಲವೇ ಸಂಸ್ಥೆಗಳ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯ ನಿಖರ ಮಾಹಿತಿ ಸಂಗ್ರಹಿಸಬೇಕು.


ನ್ನೂ ಓದಿ: ಬಿಗ್ ಬಿಲಿಯನ್ ಡೇಸ್ ಸೇಲ್​ನಲ್ಲಿ ಐಫೋನ್​ಗಳ ಡಿಸ್ಕೌಂಟ್ ಬೆಲೆ ಪ್ರಕಟ


ಇಂತಹ ಭೂಮಿ ವಿಚಾರವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೆ ಅವುಗಳ ಮಾಹಿತಿಯನ್ನೂ ಒದಗಿಸಬೇಕು. ಜಿಲ್ಲಾ ಮಟ್ಟದಲ್ಲಿ ಸಂಗ್ರಹಿಸುವ ಸಮಗ್ರ ಮಾಹಿತಿಯನ್ನು ನಾಲ್ಕು ತಿಂಗಳ ಒಳಗೆ ರಾಜ್ಯ ವಿಶೇಷ ತಂಡಕ್ಕೆ ಸಲ್ಲಿಸಬೇಕು.

Forest Land SIT: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ
Forest Land SIT: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ

ಇತ್ತೀಚಿನ ಜನಪ್ರಿಯ ಸುದ್ದಿಗಳು (Forest Land SIT:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ