Sunday, October 1, 2023
Homeಮಲೆನಾಡುಚಿಕ್ಕಮಗಳೂರುಮಾಜಿ ಶಾಸಕ ವೈಎಸ್ ವಿ ದತ್ತಾ ಜೆಡಿಎಸ್ ಸೇರ್ಪಡೆ: ಕಡೂರು ಕ್ಷೇತ್ರದಿಂದ ಟಿಕೆಟ್ ಫಿಕ್ಸ್

ಮಾಜಿ ಶಾಸಕ ವೈಎಸ್ ವಿ ದತ್ತಾ ಜೆಡಿಎಸ್ ಸೇರ್ಪಡೆ: ಕಡೂರು ಕ್ಷೇತ್ರದಿಂದ ಟಿಕೆಟ್ ಫಿಕ್ಸ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಡೂರು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ವೈಎಸ್ಸಿ ದತ್ತಾ ಬೇಜಾರುಗೊಂಡಿದ್ದರು. ಇಂದು ಅವರನ್ನು ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ಇತರೆ ನಾಯಕರು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ; ಟ್ರ‍್ಯಾಕ್ಟರ್‌ನ ಹಿಂಬದಿ ಡಾಬರ್ ರಾಡ್‌ಗೆ ತಲೆ ತಾಗಿ ಒಂದೂವರೆ ವರ್ಷದ ಮಗು ಸಾವು

ಹೀಗಾಗಿ ಮಾಜಿ ಶಾಸಕ ವೈಎಸ್ ವಿ ದತ್ತಾ ಜೆಡಿಎಸ್ ಗೆ ವಾಪಸ್ಸು ಆಗುವ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ಕಡೂರು ಕ್ಷೇತ್ರದಿಂದ ಅವರಿಗೆ ಟಿಕೆಟ್ ಫಿಕ್ಸ್ ಆಗಿದೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರನ್ನು ಹಾಸನದ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿಯಾದರು. ಅವರೊಂದಿಗೆ ಕೆಲ ಕಾಲ ಚರ್ಚಿಸಿ, ಜೆಡಿಎಸ್ ಗೆ ವಾಪಾಸ್ಸು ಬರುವಂತೆ ಮನವೊಲಿಸಿದರು. ಈ ಮನವೊಲಿಕೆ ಪ್ರಯತ್ನ ಯಶಸ್ವಿಯಾಗಿದೆ.

ಇದನ್ನೂ ಓದಿ; ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ!

ಈ ಬಗ್ಗೆ ಮಾತನಾಡಿದಂತ ಸಂಸದ ಪ್ರಜ್ವಲ್ ರೇವಣ್ಣ, ಕಡೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ವೈಎಸ್ ವಿ ದತ್ತಾ ಕಣಕ್ಕೆ ಇಳಿಯಲಿದ್ದಾರೆ. ಅವರಿಗೆ ಪಕ್ಷದಿಂದ ಟಿಕೆಟ್ ಸದ್ಯದಲ್ಲೇ ಘೋಷಣೆಯಾಗಲಿದ್ದು, ಇಂದಿನಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಹೆಚ್ ಡಿ ರೇವಣ್ಣ, ವೈಎಸ್ ವಿ ದತ್ತಾ ಅವರು ಕಡೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ, ಅವರು ನಾಮಪತ್ರ ಸಲ್ಲಿಕ ದಿನ ದೇವೇಗೌಡರು ಆಗಮಿಸಲಿದ್ದಾರೆ ಎಂದರು.

ಇದನ್ನೂ ಓದಿ; ನನಗೆ ಟಿಕೆಟ್ ತಪ್ಪಿಸಿದ್ದು ಶಾಸಕ ಸಿ. ಟಿ ರವಿ: ಎಂ ಪಿ ಕುಮಾರಸ್ವಾಮಿ ಕಿಡಿ

ಈ ಬಳಿಕ ಮಾತನಾಡಿದಂತ ಮಾಜಿ ಶಾಸಕ ವೈಎಸ್ ವಿ ದತ್ತಾ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಾತಿಗೆ ನಾನು ಬೆಲೆ ಕೊಡುತ್ತೇನೆ. ಹೆಚ್ ಡಿ ದೇವೇಗೌಡ ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದಿದ್ದಾರೆ. ಹಾಗಾಗಿ ದೇವೇಗೌಡರ ಮಾತಿಗೆ ಬೆಲೆಕೊಟ್ಟು ಪಕ್ಷಕ್ಕೆ ವಾಪಾಸ್ಸು ಆಗುತ್ತಿದ್ದೇನೆ. ಏಪ್ರಿಲ್ 18 ರಂದು ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇವೆ. ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಈ ತೀರ್ಮಾನ ಮಾಡಿದ್ದೇನೆ ಎಂಬುದಾಗಿ ತಿಳಿಸಿದರು.

 

ಧನಂಜಯ್ ಸ್ಥಿತಿ ಅತಂತ್ರ

ಯಾವುದಾದರೂ ಪಕ್ಷದಿಂದ ಅಭ್ಯರ್ಥಿಯಾಗಲೇ ಬೇಕು ಎಂದು ವಿವಿಧ ಕ್ಷೇತ್ರ ಸುತ್ತಾಡಿ ಕಡೂರಿಗೆ ಬಂದಿದ್ದ ಧನಂಜಯ್ ಗೆ ಈ ಬಾರಿ ಜೆಡಿಎಸ್ ಟಿಕೆಟ್ ಘೋಷಿಸಿತ್ತು. ಅಭ್ಯರ್ಥಿ ಘೋಷಣೆಗೂ ಹಿಂದೆಯೇ ಸಾಕಷ್ಟು ಖರ್ಚು ಮಾಡಿದ್ದರು. ಆದ್ರೆ YSV ದತ್ತ ಅವರು ಮತ್ತೆ ಜೆಡಿಎಸ್ ಸೇರ್ಪಡೆ ಹಿನ್ನಲೆ ಧನಂಜಯ್ ಗೆ ಮತ್ತೆ ಟಿಕೆಟ್ ತಪ್ಪಿದಂತಾಗಿದೆ.

Most Popular

Recent Comments