Monday, December 11, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ

ಚಿಕ್ಕಮಗಳೂರು: ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾಗಿದ್ದ ವ್ಯಕ್ತಿ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಜೆಪಿನಗರದ ಪರೋಸ್ ಅಗರ್ ವಾಲ್ ನಾಪತ್ತೆಯಾಗಿದ್ದ ವ್ಯಕ್ತಿ.

ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ

ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?

ಏನಿದು ಘಟನೆ:
ರಾಣಿಝರಿ ವರೆಗೆ ಬೈಕ್ ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು ಮುಂದಾಗಿದ್ದಾನೆ. ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಪೊಲೀಸ್ ಕಂಟ್ರೋಲ್ ರೂಂಗೆ ದೂರವಾಣಿ ಕರೆ ಮಾಡಿದ್ದಾನೆ. ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಪತ್ತೆ ಹಚ್ಚುವುದು ಕ್ಲಿಷ್ಟಕರವಾಗಿತ್ತು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ, ಸ್ಥಳೀಯರಿಂದ ಶೋಧ ಕಾರ್ಯ ನಡೆಸಿ ನಾಪತ್ತೆಯಾಗಿದ್ದ ಪರೋಸ್ ಅಗರ್ ವಾಲ್ ನನ್ನು ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ ಮಾಡಿ ಬಾಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೂಡಿಗೆರೆ: ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಯುವಕ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾದ ಘಟನೆ ಭಾನುವಾರ ನಡೆದಿದೆ.

ಇದನ್ನೂ ಓದಿ; ವಿದ್ಯುತ್‌ ತಂತಿ ತಗುಲಿ ಕಾಡಾನೆ ಸಾವು

ಬೆಂಗಳೂರು ಜೆಪಿ ನಗರದ ಪರೋಸ್ ಅಗರ್ವಾಲ್ ಎಂದು ಹೇಳಲಾಗಿರುವ ಯುವಕ ರಾಣಿಝರಿ ಸಮೀಪದವರೆಗೆ ಬೈಕ್ ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು ಮುಂದಾಗಿದ್ದಾನೆ. ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಪೊಲೀಸ್ ಕಂಟ್ರೋಲ್ ರೂಂಗೆ ದೂರವಾಣಿ ಕರೆ ಮಾಡಿದ್ದಾನೆ. ಆದರೆ ಆತನಿರುವ ಸ್ಥಳ ಪತ್ತೆ ಹಚ್ಚಲು ಕ್ಲಿಷ್ಟ ಪರಿಸ್ಥಿತಿ ಇದೆ. ಇಲ್ಲಿನ ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ಸಿಗದಿರುವುದು, ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಹಾಗೂ ಜಾರುವ ಬಂಡೆಗಳು ಇರುವುದರಿಂದ ಈತ ಇರಬಹುದಾದ ನಿಗದಿತ ಸ್ಥಳ ಹುಡುಕಲು ಹರಸಾಹಸ ನಡೆಸಬೇಕಾಗಿದೆ.
ಈಗಾಗಲೇ ಬಾಳೂರು ಪೊಲೀಸರು ಭಂಡಾಜೆ ಫಾಲ್ಸ್ ನ ತಮ್ಮ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ಬಂಡಾಜೆ ಫಾಲ್ಸ್ ನ ತಳ ಹಾಗೂ ಇತರ ಕೆಲವುಭಾಗಗಳು ದಕ ಜಿಲ್ಲೆ ವ್ಯಾಪ್ತಿಯಲ್ಲಿದ್ದು ಇಲ್ಲಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಹುಡುಕಾಟ ಮುಂದುವರಿಸಿದ್ದಾರೆ.
ಪ್ರದೇಶವು ಸಂಪೂರ್ಣ ಕತ್ತಲ ಪರಿಸರ ಹಾಗೂ ಕಾಡಾನೆ ಸಹಿತ ಇತರ ವನ್ಯಜೀವಿಗಳು ಸಂಚರಿಸುವ ಸ್ಥಳವಾಗಿದ್ದು ಹಲವು ರೀತಿಯ ಅಪಾಯಗಳ ಮಧ್ಯೆ ಹುಡುಕಾಟ ನಡೆಸುವ ಅನಿವಾರ್ಯತೆ ಇದೆ. ಆಗಾಗ ಮೊಬೈಲ್ ಕರೆಗೆ ಸಿಗುತ್ತಿರುವ ಯುವಕನಿಗೆ ಪೊಲೀಸರು ಮತ್ತು ಅರಣ್ಯ ಇಲಾಖೆ, ಧೈರ್ಯ ತುಂಬಿದ್ದು ಹುಡುಕಾಟ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಹಿಟ್‌ ಅಂಡ್‌ ರನ್‌; ತಪ್ಪಿದ ಭಾರಿ ಅನಾಹುತ

Most Popular

Recent Comments