ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ದೇವರಮನೆ ಸಮೀಪದ ಗುಡ್ಡದಲ್ಲಿ ಯುವಕನೋರ್ವನನ್ನು ಕೊಲೆ ಮಾಡಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಾವೂದ್ ಅಮೀರ್(25), ಅಬ್ದುಲ್ ರಹೀಜ್(23), ಆಫ್ರಿದಿ(23), ಮಹಮ್ಮದ್ ಇರ್ಷಾದ್(20) ಬಂಧಿತ ಆರೋಪಿಗಳು.
ಇದನ್ನೂ ಓದಿ; ಕೊಪ್ಪ: ಮೇಯುವಾಗ ಆಯಾ ತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದ ಹಸು
ಏನಿದು ಘಟನೆ?:
ದೇವರಮನೆ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಬಂಟ್ವಾಳ ಮೂಲದ ಕುಟುಂಬ ಶವವನ್ನು ಗುರುತಿಸಿತ್ತು. ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದು, ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- debit card ಇಲ್ಲದೆಯೇ atmನಿಂದ ಹಣವನ್ನು ಸುಲಭವಾಗಿ ಪಡೆಯಬಹುದು
- ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಸೋರುತಿರುವ ಶಾಲೆ ಮಳಿಗೆ
- amarnath yatra: ಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡಿಗರು ಸೇಫ್
ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ಈ ಹಿಂದೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು. ಇನ್ನು ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ; ಜಯಪುರ: ಸಹಕಾರ ಸಂಘದ ಕರ್ತವ್ಯ ನಿರತ ಕಾವಲುಗಾರನ ಮೇಲೆ ಹಲ್ಲೆ; ಆರೋಪಿಗಳಿಬ್ಬರ ಬಂಧನ
amarnath yatra: ಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡಿಗರು ಸೇಫ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಳೆ ಆರ್ಭಟ ಹೆಚ್ಚಾದ ಪರಿಣಾಮ ಅಮರನಾಥದಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಇದರಿಂದ ಕರ್ನಾಟದಿಂದ ತೆರಳಿದ್ದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪೈಕಿ ಯಾತ್ರೆಗೆ ಹೋಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಮೂಲದ ಪ್ರವಾಸಿಗರು ಯಾವುದೇ ತೊಂದರೆ ಇಲ್ಲದೆ ಸೇಫ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಶ್ರೀನಿವಾಸ್, ಮಣಿ, ಭರತ್, ಚಂದ್ರಶೇಖರ್, ಮನೋಜ್ ಎಂಬ ಐವರು ಸುರಕ್ಷಿತವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ವಾರ ಯಾತ್ರೆಗೆ ತೆರಳಿದ್ದ ಈ ಐವರ ತಂಡ ಇದೀಗ ಶೇಷನಾಗ್ ಪ್ರದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ.