(Franchise Scheme 2.0:) ದೇಶದ ಅಂಚೆ ಸೇವೆಗಳ ವ್ಯಾಪ್ತಿಯನ್ನು ವಿಸ್ತರಿಸುವ ಜೊತೆಗೆ ಸ್ವಯಂ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆ ‘ಪೋಸ್ಟ್ ಆಫೀಸ್ ಫ್ರಾಂಚೈಸಿ ಯೋಜನೆ 2.0’ ಅನ್ನು ಜಾರಿಗೊಳಿಸಿದೆ. ‘ಆತ್ಮನಿರ್ಭರ ಭಾರತ’ ಮತ್ತು ‘ಡಿಜಿಟಲ್ ಇಂಡಿಯಾ’ ಅಭಿಯಾನಗಳಿಗೆ ಪೂರಕವಾಗಿರುವ ಈ ಯೋಜನೆ, ಅಂಚೆ ಸೇವೆಗಳು ಸಂಪೂರ್ಣವಾಗಿ ಲಭ್ಯವಿಲ್ಲದ ಪ್ರದೇಶಗಳಲ್ಲಿ ವಿಶೇಷವಾಗಿ ಪರಿಣಾಮಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಕಡಿಮೆ ಹೂಡಿಕೆಯೊಂದಿಗೆ ಆರಂಭಿಸಬಹುದಾದ ಈ ಫ್ರಾಂಚೈಸಿ ಮೂಲಕ, ಉದ್ಯಮಿಗಳು ಮತ್ತು ಯುವಕರು ಸ್ಪೀಡ್ ಪೋಸ್ಟ್, ರಿಜಿಸ್ಟರ್ಡ್ ಪೋಸ್ಟ್, ಪಾರ್ಸೆಲ್ ಬುಕಿಂಗ್, ಇ-ಕಾಮರ್ಸ್ ವಿತರಣಾ ಸೇವೆಗಳು ಹಾಗೂ ಹಣಕಾಸು ಸೇವೆಗಳನ್ನು ಗ್ರಾಹಕರಿಗೆ ಒದಗಿಸಬಹುದು. ಹೊಸ ತಂತ್ರಜ್ಞಾನ ಆಧಾರಿತ ಎಪಿಟಿ 2.0 ವೇದಿಕೆಯನ್ನು ಬಳಸಿಕೊಂಡು ಡಿಜಿಟಲ್ ಪಾವತಿ, ಆನ್‌ಲೈನ್ ಟ್ರ್ಯಾಕಿಂಗ್ ಹಾಗೂ ಸ್ಮಾರ್ಟ್ ಲಾಕರ್ ಸೌಲಭ್ಯಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ.
ನೀಡಬಹುದಾದ ಸೇವೆಗಳು
* ಸ್ಪೀಡ್ ಪೋಸ್ಟ್ ಮತ್ತು ರಿಜಿಸ್ಟರ್ಡ್ ಪೋಸ್ಟ್ ಬುಕಿಂಗ್.
* ಅಂಚೆ ಚೀಟಿಗಳು ಮತ್ತು ಲೇಖನ ಸಾಮಗ್ರಿಗಳ ಮಾರಾಟ.
* ಅಂತಾರಾಷ್ಟ್ರೀಯ ಪಾರ್ಸೆಲ್ ಸೇವೆಗಳು.
* ಕ್ಯಾಶ್ ಆನ್ ಡೆಲಿವರಿ ಸೌಲಭ್ಯ.
* ಇ-ಕಾಮರ್ಸ್ ಪಾರ್ಸೆಲ್ ಪಿಕಪ್ ಮತ್ತು ವಿತರಣೆ.
* ಡಿಜಿಟಲ್ ವ್ಯಾಲೆಟ್ ಪಾವತಿ ಮತ್ತು ರಿಯಲ್-ಟೈಮ್ ಟ್ರ್ಯಾಕಿಂಗ್.
ನಗರ ಪ್ರದೇಶಗಳಷ್ಟೇ ಅಲ್ಲದೆ, ದೊಡ್ಡ ಟೌನ್‌ಶಿಪ್‌ಗಳು, ಕೈಗಾರಿಕಾ ವಲಯಗಳು ಮತ್ತು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲೂ ಫ್ರಾಂಚೈಸಿ ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಮಾನ್ಯತೆಯೊಂದಿಗೆ ಕಾರ್ಯನಿರ್ವಹಿಸುವುದರಿಂದ ಗ್ರಾಹಕರ ವಿಶ್ವಾಸ ಹೆಚ್ಚಾಗುತ್ತದೆ ಮತ್ತು ಮಾರುಕಟ್ಟೆ ವೆಚ್ಚವೂ ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಈ ಅರ್ಹತೆ ಕಡ್ಡಾಯ:
* ಈ ಯೋಜನೆಯಡಿ ಫ್ರಾಂಚೈಸಿ ಪಡೆಯಲು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
* ಜೊತೆಗೆ ಕಂಪ್ಯೂಟರ್ ಜ್ಞಾನ ಹಾಗೂ ಸ್ಥಳೀಯ ಭಾಷೆಯ ಅರಿವು ಅಗತ್ಯ.
* 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದ್ದು, ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿಲ್ಲ.
ಫ್ರಾಂಚೈಸಿ ಆರಂಭಿಸಲು ಸುಮಾರು 1 ರಿಂದ 1.5 ಲಕ್ಷ ರೂ.ವರೆಗೆ ಹೂಡಿಕೆ ಅಗತ್ಯವಿದ್ದು, ಕಾರ್ಯಕ್ಷಮತೆಯ ಆಧಾರದಲ್ಲಿ ತಿಂಗಳಿಗೆ 20 ಸಾವಿರದಿಂದ 80 ಸಾವಿರ ರೂ.ವರೆಗೆ ಆದಾಯ ಗಳಿಸುವ ಸಾಧ್ಯತೆ ಇದೆ.
ಅಗತ್ಯವಿರುವ ದಾಖಲೆಗಳೇನು?:
* ವಯಸ್ಸಿನ ಪುರಾವೆ
* ಗುರುತಿನ ಚೀಟಿ
* ವಿಳಾಸದ ಪುರಾವೆ
* ಶೈಕ್ಷಣಿಕ ಅರ್ಹತೆ
* ಆಸ್ತಿ ದಾಖಲೆಗಳು
ಅಂಚೆ ಇಲಾಖೆಯ ಈ ಹೊಸ ಉಪಕ್ರಮವು ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ಸೇವಾ ಅಂತರವನ್ನು ಕಡಿಮೆ ಮಾಡುವ ಜೊತೆಗೆ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿಗೆ ಮಹತ್ವದ ಪಾತ್ರ ವಹಿಸಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Franchise Scheme 2.0:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್





