Free Notebook Scheme: ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಾರಿಗೆ ತಂದಿರುವ “ಉಚಿತ ನೋಟ್ ಪುಸ್ತಕ ವಿತರಣೆ ಯೋಜನೆ” ಕರ್ನಾಟಕ ಸರ್ಕಾರದ ಈ ಯೋಜನೆ ಕೈಗೊಂಡಿದೆ. ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಮತ್ತು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ 1 ರಿಂದ 12ನೇ ತರಗತಿಯವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳ ಜೊತೆಗೆ ನೋಟ್ಬುಕ್ಗಳನ್ನು ವಿತರಿಸಲು ನಿರ್ಧರಿಸಿದೆ.
ಈ ಯೋಜನೆಯಡಿ, ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರಮುಖ ವಿಷಯಗಳಿಗೆ ಅಗತ್ಯವಿರುವ ಸುಮಾರು ಆರು ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ್ದು, 61 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇದರ ಲಾಭವಾಗಲಿದೆ. ಈಗಾಗಲೇ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಬೂಟು-ಸಾಕ್ಸ್, ಮತ್ತು ಮಧ್ಯಾಹ್ನದ ಬಿಸಿಯೂಟವನ್ನು ಒದಗಿಸುತ್ತಿರುವ ಸರ್ಕಾರ, ಈಗ ನೋಟ್ ಪುಸ್ತಕಗಳನ್ನು ನೀಡುವುದರಿಂದ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಈ ಕ್ರಮವು ವಿದ್ಯಾರ್ಥಿಗಳು ಯಾವುದೇ ಅಡಚಣೆಯಿಲ್ಲದೆ ತಮ್ಮ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರಿಸಲು ಸಹಾಯ ಮಾಡುತ್ತದೆ ಮತ್ತು ಶಿಕ್ಷಣದಲ್ಲಿ ಸಮಾನತೆಯನ್ನು ಸಾಧಿಸಲು ಸಹಕಾರಿಯಾಗಿದೆ. ಅದಷ್ಟೇ ಅಲ್ಲದೆ ಬಡ, ಹಿಂದುಳಿದ ಮತ್ತು ಮದ್ಯಮ ವರ್ಗದಲ್ಲಿ ಇರುವಂತ ಪೋಷಕರಿಗೆ ಆರ್ಥಿಕ ಸಹಾಯವನ್ನು ನೀಡಿದೆ.
ಈ ಬಾರಿ ಘೋಷಣೆ ಮಾಡುವುದಷ್ಟೇ ಅಲ್ಲದೆ ಅದರ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡಲು ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ.
* ಕಾಗದದ ಗುಣಮಟ್ಟ ಮತ್ತು ಮುದ್ರಣ ಅತ್ಯುತ್ತಮವಾಗಿರಬೇಕು. ಕಳಪೆ ಗುಣಮಟ್ಟ ಕಂಡಿಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.
* ಸರ್ಕಾರದ ಹಣ ದುರುಪಯೋಗ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
* ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ವಿದ್ಯಾರ್ಥಿಗಳಿಗೆ ಕೈಗೆ ಪುಸ್ತಕಗಳು ತಲುಪಿರಬೇಕು.
* ಸರ್ಕಾರದ ಈ ನಿರ್ಧಾರದಿಂದ ಬಡ ಮತ್ತು ಮದ್ಯಮ ಕುಟುಂಬದ ಪೋಷಕರಿಗೆ ಆರ್ಥಿಕವಾಗಿ ಸಹಾಯವಾಗಿದೆ.
* ಇದು ಕೇವಲ ಪುಸ್ತಕ ವಿತರಣೆ ಅಲ್ಲ, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಹೊಸ ವೇಗ.
ಮುಖ್ಯಾಂಶಗಳು:
ಯೋಜನೆ: 1-12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ.
ಉದ್ದೇಶ: ಪೋಷಕರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ಮತ್ತು ಶಿಕ್ಷಣ ಉತ್ತೇಜಿಸುವುದು.
ಫಲಾನುಭವಿಗಳು: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳು.
ಅನುಷ್ಠಾನ: ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTBS) ಮೂಲಕ.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Free Notebook Scheme:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





