Free Ration Scheme: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿ ಬಡವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಉಚಿತ ಪಡಿತರ ಯೋಜನೆಯನ್ನು ಇನ್ನೂ 5 ವರ್ಷಗಳ ಕಾಲ ಮುಂದುವರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದರು.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; ಈ ದಿನ ರೈತರ ಖಾತೆಗೆ ಬರಲಿದೆ 15ನೇ ಕಂತಿನ ಹಣ; ಹಣ ರಿಲೀಸ್ ಗೆ ಡೇಟ್ ಫಿಕ್ಸ್
80 ಕೋಟಿಗೂ ಹೆಚ್ಚು ಜನರು ಸದ್ಯ ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಛತ್ತೀಸ್ ಗಢದ ದುರ್ಗ್ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ಬಿಜೆಪಿ ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದರು.
ಛತ್ತೀಸ್ ಗಢದಲ್ಲಿ ಇದೇ ತಿಂಗಳು ಚುನಾವಣೆ ನಡೆಯಲಿದೆ. 90 ಸ್ಥಾನಗಳನ್ನು ಹೊಂದಿರುವ ಛತ್ತೀಸ್ ಗಢ ವಿಧಾನಸಭೆಗೆ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹೀಗಿರುವಾಗ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಈ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ; 15ನೇ ಕಂತಿನ ಹಣ ಪಡೆಯುವವರ ಹೆಸರು ಬಿಡುಗಡೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಹಣ ಬರಲ್ಲ
ಕೋವಿಡ್ ಸಮಯದಲ್ಲಿ ಈ ಯೋಜನೆ ಜಾರಿ:
ಕೊರೊನಾ ಸಾಂಕ್ರಾಮಿಕ ರೋಗದ ನಂತರ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಪ್ರಾರಂಭಿಸಿದೆ. ಕೋವಿಡ್ ಸಮಯದಲ್ಲಿ ಲಾಕ್ ಡೌನ್ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಲಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ವಿಶೇಷವಾಗಿ ಬಡವರು ಆಹಾರ ಮತ್ತು ಪಾನೀಯದ ಬಿಕ್ಕಟ್ಟನ್ನು ಎದುರಿಸುತ್ತಿದ್ದರು. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ನೆರವಿಗಾಗಿ ಉಚಿತ ಪಡಿತರ ಯೋಜನೆ ಆರಂಭಿಸಿತ್ತು. 80 ಕೋಟಿ ದೇಶವಾಸಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

Free Ration Scheme: ಡಿಸೆಂಬರ್ ಗೆ ಯೋಜನೆಯ ಅವಧಿ ಮೀರುತ್ತಿತ್ತು:
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಐದು ಕೆಜಿ ಗೋಧಿ ಅಥವಾ ಅಕ್ಕಿ ಸಿಗುತ್ತದೆ. ಫಲಾನುಭವಿಗಳು ಈ ಧಾನ್ಯವನ್ನು ಉಚಿತವಾಗಿ ಪಡೆಯುತ್ತಾರೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು 2020 ಜೂನ್ 30 ರಂದು ಪ್ರಾರಂಭಿಸಿತು. ನಂತರ ಅದನ್ನು ಹಲವಾರು ಸಂದರ್ಭಗಳಲ್ಲಿ ವಿಸ್ತರಿಸಲಾಗಿದೆ. ಪ್ರಸ್ತುತ ಈ ಯೋಜನೆಯು ಡಿಸೆಂಬರ್ 2023 ರಲ್ಲಿ ಅಂದರೆ ಮುಂದಿನ ತಿಂಗಳು ಕೊನೆಗೊಳ್ಳಲಿದೆ. ಈಗ 5 ವರ್ಷಗಳ ವಿಸ್ತರಣೆಯ ನಂತರ, ಜನರು ಡಿಸೆಂಬರ್ 2028 ರವರೆಗೆ ಈ ಯೋಜನೆಯ ಪ್ರಯೋಜನ ಪಡೆಯುವುದನ್ನು ಮುಂದುವರಿಸುತ್ತಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ