Free Skill Training:ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಯಸುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಒಂದು ಮಹತ್ವದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋನ್ನಹಳ್ಳಿಪುರದಲ್ಲಿರುವ ಈ ಸಂಸ್ಥೆಯು, ನಿರುದ್ಯೋಗಿ ಮಹಿಳೆಯರಿಗೆ ತಮ್ಮ ಕಾಲ ಮೇಲೆ ತಾವು ನಿಲ್ಲುವಂತೆ ಮಾಡಲು ಉಚಿತ ವೃತ್ತಿಪರ ತರಬೇತಿಯನ್ನು ನೀಡಲು ಮುಂದಾಗಿದೆ.
ಅರ್ಹತೆಗಳು:
* ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆ ಈ ತರಬೇತಿಯನ್ನು ಪಡೆಯಲು ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.
* ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು.
* ಅಭ್ಯರ್ಥಿಗೆ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
* ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿ ವಿಷಯದ ಬಗ್ಎ ಮಾಹಿತಿ:
ಎಂಬ್ರಾಯಡರಿ ಕೆಲಸ ಅಂದರೆ ಬ್ಲೌಸ್ಗಳಿಗೆ ಆರಿ ವರ್ಕ್ ಕುರಿತು, ಸೀರಗಳಿಗೆ ಸುಂದರವಾದ ಕುಚ್ಚು ಹಾಕುವ ವಿಧಾನ, ಬಟ್ಟೆಗಳ ಮೇಲೆ ವಿವಿಧ ರೀತಿಯ ಪೇಂಟಿಂಗ್ ಮಾಡುವ ವಿಧಾನ ಮತ್ತು ತರಬೇತಿ ಪಡೆದ ಬಳಿಕ ಅಭ್ಯರ್ಥಿಗಳು ಸ್ವಂತ ಉದ್ದಿಮೆಯನ್ನು ಆರಂಭಿಸಲು ಬ್ಯಾಂಕ್ ಮೂಲಕ ಸಾಲ ಪಡೆಯುವ ತರಬೇತಿಗಳನ್ನು ನೀಡಲಾಗುತ್ತದೆ.
ದಾಖಲೆಗಳು:
* ಅಭ್ಯರ್ಥಿಯ ಆಧಾರ್ ಕಾರ್ಡ್( Candidate’s Aadhar Card)
* ಪ್ಯಾನ್ ಕಾರ್ಡ್( PAN Card)
* ರೇಷನ್ ಕಾರ್ಡ್( Ration Card)
* ಬ್ಯಾಂಕ್ ಪಾಸ್ಬುಕ್(Bank Passbook)
* ಪೋಟೋ( Photo)
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನ ದಿನಾಂಕ ಪೆಬ್ರುವರಿ 21,2026 ರಂದು ಬೆಳಿಗ್ಗೆ 9:00 ಗಂಟೆಗೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಸಂದರ್ಶನದಲ್ಲಿ ಭಾಗಿಯಾಗಬಹುದು. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಸೊನ್ನಹಳ್ಳಿಪುರ,ಹಸಿಗಾಲ ಅಂಚೆ, ಹೊಸಕೋಟೆ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ತರಬೇತಿ ಕೇಂದ್ರದ ವಿಳಾಸ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ, ವಸತಿಗಳ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ನೀಡಲಾಗುತ್ತದೆ. ತರಬೇತಿ ನಂತರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Free Skill Training:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





