Free Tv Repair: ರೇಷನ್‌ ಕಾರ್ಡ್‌ ಇರುವವರಿಗೆ ಸಿಹಿಸುದ್ದಿ

(Free Tv Repair) ನಿರುದ್ಯೋಗಿ ಯುವಕ –ಯುವತಿಯರಿಗೆ ಟಿವಿ ರಿಪೇರಿ ಕುರಿತು ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಯುವಕ- ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತು ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ –ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ


ತರಬೇತಿ ಪ್ರಾರಂಭ ದಿನಾಂಕ:
ಡಿಸೆಂಬರ್ 18 ರಿಂದ ಪ್ರಾರಂಭ (30 ದಿನಗಳ)

* ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು.
* ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು.
* ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.


ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ


ಈ ಅರ್ಹತೆ ಕಡ್ಡಾಯ:
* ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
* ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.


ಇದನ್ನೂ ಓದಿ; ನೌಕಾಪಡೆಯಲ್ಲಿ ಜಾಬ್‌ ಆಫರ್‌; 10th, PUC ವಿದ್ಯಾರ್ಹತೆ; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9241482541, 9740982585 ಅನ್ನು ಸಂಪರ್ಕಿಸಬಹುದಾಗಿದೆ.

Free Tv Repair: ರೇಷನ್‌ ಕಾರ್ಡ್‌ ಇರುವವರಿಗೆ ಸಿಹಿಸುದ್ದಿ
Free Tv Repair: ರೇಷನ್‌ ಕಾರ್ಡ್‌ ಇರುವವರಿಗೆ ಸಿಹಿಸುದ್ದಿ

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು