Saturday, June 10, 2023
Homeರಾಜ್ಯಬೆಂಗಳೂರು : ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಯುವಕ

ಬೆಂಗಳೂರು : ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಯುವಕ

ಬೆಂಗಳೂರು: ಕುಡಿದ ಮತ್ತಿನಲ್ಲಿ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆಯು ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಶ್ರೀನಿವಾಸನಗರ ನಿವಾಸಿ ನಿತೇಶ್ ಮೃತ ದುರ್ದೈವಿ.

ಮೃತ ನಿತೇಶ್ ಹಾಗೂ ಆತನ ಸ್ನೇಹಿತ ಪ್ರಶಾಂತ್ ರವರು ತಡರಾತ್ರಿಯವರೆಗೂ ಎಣ್ಣೆ ಪಾರ್ಟಿಯನ್ನು ಮಾಡಿದ್ದರು. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯು ಆರಂಭವಾಗಿದ್ದು, ಕೊನೆಗೆ ಜಗಳ ತಾರಕಕ್ಕೇರಿ ಪ್ರಶಾಂತ್‌ರವರು ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.

ಪಾರ್ಟಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಪ್ರಶಾಂತ್‌ನನ್ನ ನಿತೇಶ್ ಕಾಲಿನಿಂದ ಒದ್ದಿದ್ದ. ಸ್ವಲ್ಪ ಹೊತ್ತಿನ ಬಳಿಕ ಇಬ್ಬರೂ ಸುಮ್ಮನಾಗಿ ಮಲಗಿದ್ದರು. ಮಲಗಿ ಸ್ವಲ್ಪ ಸಮಯ ಕಳೆಯುತ್ತಿದ್ದಂತೆ ಪ್ರಶಾಂತ್ ಕೋಪದಿಂದ ಮತ್ತೆ ಎಚ್ಚರಗೊಂಡಿದ್ದಾನೆ ಸಿಟ್ಟಿನಿಂದ ಎದ್ದು ನಂತರ ನಿತೇಶ್ ರವರ ತಲೆ ಮೇಲೆ ಅಲ್ಲೇ ಇದ್ದಂತಹ ಸಿಮೆಂಟ್ ಇಟ್ಟಿಗೆಯನ್ನು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಡಿ.ಜೆ.ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗುತಿದ್ದ ಪ್ರಶಾಂತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Most Popular

Recent Comments