(Fruits FID:) ರೈತರು ಮುಂಗಾರು ಹಂಗಾಮಿನಲ್ಲಿ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಖರೀದಿಸಲು ‘ಫ್ರೂಟ್ಸ್ ಎಫ್‍ಐಡಿ’ (FRUITS FID) ಸಂಖ್ಯೆಯನ್ನು ಹೊಂದುವುದು ಕಡ್ಡಾಯವಾಗಿದೆ.
ಕೇಂದ್ರ ಸರ್ಕಾರದ ತಂತ್ರಾಂಶದ ಮೂಲಕ ರೈತರ ಎಫ್‍ಐಡಿ ಸಂಖ್ಯೆಯನ್ನು ಬಳಸಿಕೊಂಡು, ಅವರ ಜಮೀನಿನ ವಿಸ್ತೀರ್ಣಕ್ಕೆ (ಎಕರೆಗೆ) ಅಗತ್ಯವಿರುವಷ್ಟು ರಸಗೊಬ್ಬರವನ್ನು ನಿಯಮಾನುಸಾರ ವಿತರಿಸಲು ಕೃಷಿ ಇಲಾಖೆಯು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.2026-27ನೇ ಸಾಲಿನ ಮುಂಗಾರು ಹಂಗಾಮಿನಿಂದಲೇ ಇದು ಜಾರಿಗೆ ಬರಲಿದೆ.
ರೈತರು ತಾವು ಬೆಳೆದ ಬೆಳೆ ಆಧಾರದ ಮೇಲೆ ತಂತ್ರಾಂಶದಲ್ಲಿ ಅನುಮೋದಿಸಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಪಡೆಯಲು ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ರೈತರು ಆದ್ಯತೆಯ ಮೇರೆಗೆ ತಮ್ಮ ಹೆಸರಿನಲ್ಲಿ ‘ಫ್ರೂಟ್ಸ್ ಎಫ್‍ಐಡಿ’ ಮಾಡಿಸಿಕೊಳ್ಳಬೇಕು. ಅಷ್ಟೇ ಅಲ್ಲದೆ, ತಮ್ಮ ಎಲ್ಲಾ ಜಮೀನಿನ ಸರ್ವೆ ನಂಬರ್‍ಗಳನ್ನು ಈ ಎಫ್‍ಐಡಿಗೆ ಕಡ್ಡಾಯವಾಗಿ ಜೋಡಣೆ ಮಾಡಿಸಬೇಕು ಎಂದು ಕೋರಲಾಗಿದೆ.
ಈಗಾಗಲೇ ಫ್ರೂಟ್ಸ್ ಎಫ್‍ಐಡಿ ಹೊಂದಿರುವ ರೈತರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಇದರಿಂದ ರಸಗೊಬ್ಬರ ಪಡೆಯುವಾಗ ಯಾವುದೇ ರೀತಿಯ ತಾಂತ್ರಿಕ ತೊಂದರೆಗಳು ಎದುರಾಗುವುದಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Fruits FID:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply