ಬೆಂಗಳೂರು : ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ಈಗಾಗಲೇ ಸರ್ಕಾರ ಹೊರಡಿಸಿರುವಂತಹ ನಿಯಮದ ಸಡಿಲಿಕೆ ವಿಚಾರಕ್ಕೆ ಸಂಬoಧಿಸಿದoತೆ ಪ್ರತಿಕ್ರಿಯಿಸಿದಂತಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು,ಈ ವಿಚಾರದ ಕುರಿತು ಸಂಜೆಯೊಳಗೆ ನಿರ್ಧಾರವನ್ನು ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದಂತಹ ಸಿಎಂ, ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ಈಗಾಗಲೇ ಹೊರಡಿಸಿರುವಂತಹ ನಿಯಮದ ಸಡಿಲಿಕೆ ವಿಚಾರಕ್ಕೆ ಸಂಬoಧಿಸಿದoತೆ ಸಂಜೆಯೊಳಗೆ ನಿರ್ಧಾರ ಮಾಡುತ್ತೇವೆ. ರಾಜ್ಯ ಸರ್ಕಾರ ಕೆಲವೊಂದು ನಿರ್ಧಾರವನ್ನು ಮಾಡಿದೆ ಬಿಬಿಎಂಪಿಯವರು ತಮ್ಮದೇ ಆಗಿರುವಂತಹ ನಿರ್ಧಾರವನ್ನು ಮಾಡಿದ್ದಾರೆ. ಈ ಕುರಿತು ಆವರೊಡನೆ ಚರ್ಚಿಸಿ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು ಮಾತ್ರವಲ್ಲದೇ ವಿವಿಧ ರಾಜ್ಯಗಳಿಂದ ವಿವಿಧ ಬೇಡಿಕೆಗಳನ್ನು ಮುಂದೆ ಇಟ್ಟಿವೆ. ರಾಜ್ಯ ಸರ್ಕಾರ ಕೂಡ ಕೆಲವೊಂದು ನಿರ್ಧಾರಗಳನ್ನ ತೆಗೆದುಕೊಂಡಿದೆ. ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಜೆಯೊಳಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಆದರೆ, ಬೆಂಗಳೂರಿನಲ್ಲಿ ಬಿಬಿಎಂಪಿ ಐದು ದಿನಗಳ ಬದಲಾಗಿ ಮೂರು ದಿನಗಳಿಗೆ ಮಾತ್ರವೇ ಗಣೇಶೋತ್ಸವವನ್ನು ಸೀಮಿತಗೊಳಿಸಿದೆ ಹಾಗೂ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ವಿಧಿಸಿದೆ. ಇದು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಭಜರಂಗದಳ, ವಿ ಎಚ್ ಪಿ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಇತರೇ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ.