ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿ ಆಕೆಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಳ್ಳುತ್ತಿದ್ದ ರಿಕ್ಷಾ ಚಾಲಕನನ್ನು ಬಂಧಿಸಿರುವ ಘಟನೆ ನಗರದ ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆದಿದೆ.
ಸಂತ್ರಸ್ತೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಅಪ್ರಾಪ್ತ ಬಾಲಕಿ ಹಾಗೂ ಆರೋಪಿ ನೆಲ್ಯಾಡಿಯ ಹೊಸಮಜಲು ನಿವಾಸಿಯಾಗಿರುವ ರಿಕ್ಷಾ ಚಾಲಕ ನೌಫಲ್ ಎಂದು ತಿಳಿದುಬಂದಿದೆ.
ಸಂತ್ರಸ್ತ ಬಾಲಕಿ ಮೂರು ವರ್ಷದ ಹಿಂದೆ ನೆಲ್ಯಾಡಿಯ ಖಾಸಗಿ ವಿದ್ಯಾಸಂಸ್ಥೆಯ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಆರೋಪಿ ನೌಫಲ್ ಆಕೆಯ ಪರಿಚಯ ಮಾಡಿಕೊಂಡು ಮೊಬೈಲ್ ನಂಬರ್ ಪಡೆದುಕೊಂಡು ಆಕೆಗೆ ಪದೇ ಪದೇ ಕರೆ ಮಾಡುತ್ತಿದ್ದ. ಬಾಲಕಿಯ ಮನೆಯಲ್ಲಿ 15-02-2018 ರಂದು ಯಾರು ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿ ಆಕೆಯ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಮಾಡಿದ್ದಾನೆ. ನಂತರ ಆಕೆಯ ನಗ್ನ ಫೋಟೋ ಗಳನ್ನು ತೆಗೆದು ಅತ್ಯಾಚಾರ ನಡೆಸಿದ ವಿಚಾರ ಯಾರಿಗಾದರೂ ಹೇಳಿದರೆ ಫೋಟೋ ವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇನೆ ಎಂದು ಹೆದರಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಬಾಲಕಿಯನ್ನು ಈ ಮೂರು ವರ್ಷದಲ್ಲಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. 2-11-2021 ನಿನ್ನೆ ಬಾಲಕಿಗೆ ಕರೆಮಾಡಿ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದು ಬಾಲಕಿ ಬೇಸತ್ತು ತನ್ನ ತಂದೆ ತಾಯಿಗೆ ವಿಷಯ ತಿಳಿಸಿ ನಂತರ ಧರ್ಮಸ್ಥಳ ಪೊಲೀಸರಿಗೆ ದೂರನ್ನು ನೀಡಿದ್ದಾಳೆ.
ಪೊಕ್ಸೋ ಪ್ರಕರಣದಡಿಯಲ್ಲಿ ದೂರನ್ನು ದಾಖಲಿಸಿಕೊಂಡ ಪೊಲೀಸರು ಮತ್ತು ಸಿಬ್ಬಂದಿಗಳು ಆರೋಪಿಯನ್ನು ಉಪಾಯದಿಂದ ಆತನದ್ದೇ ಆಟೋವನ್ನು ಬಾಡಿಗೆಗೆ ಕರೆಸಿಕೊಂಡು ನೆಲ್ಯಾಡಿ ಠಾಣೆಗೆ ಕರೆತಂದು ಆತನನ್ನು ವಶಕ್ಕೆ ಪಡೆದುಕೊಂಡು ಧರ್ಮಸ್ಥಳ ಠಾಣೆಗೆ ಕರೆದೊಯ್ದಿದ್ದಾರೆ.