Google Fellowship: ಗೂಗಲ್​ನಿಂದ ಫೆಲೋಶಿಪ್’ಗೆ ಅರ್ಜಿ ಆಹ್ವಾನ

(Google Fellowship: ) ಗೂಗಲ್ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದ್ದು, ಇದರಲ್ಲಿ ಭಾಗವಹಿಸುವವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ವಿಶೇಷ ಫೆಲೋಶಿಪ್ ಕಾರ್ಯಕ್ರಮವು ಕೇವಲ ಅನುಭವವನ್ನು ಮಾತ್ರವಲ್ಲದೆ, ಆರ್ಥಿಕವಾಗಿಯೂ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲ ನೀಡಲಿದೆ.


ನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ


ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಪದವಿ (UG), ಸ್ನಾತಕೋತ್ತರ ಪದವಿ (PG) ಅಥವಾ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರಬೇಕು. ಪೂರ್ಣ ಸಮಯದ (Full-time) ಅಥವಾ ಅರೆಕಾಲಿಕ (Part-time) ವಿದ್ಯಾರ್ಥಿಯಾಗಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಯೋಮಿತಿ:
* ಜನವರಿ 1, 2026 ರ ವೇಳೆಗೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
* ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳ ಬಗ್ಗೆ ಆಸಕ್ತಿ ಇರಬೇಕು.
* ಉತ್ತಮ ಸಂಶೋಧನಾ ಮನೋಭಾವ, ಬರವಣಿಗೆ ಮತ್ತು ಸಂವಹನ ಕೌಶಲ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ಸ್ಟೈಫಂಡ್ ವಿವರ:
ಪೂರ್ಣ ಸಮಯ (ವಾರಕ್ಕೆ 40 ಗಂಟೆ): ಸುಮಾರು $12,000 (ಅಂದಾಜು ₹10 ಲಕ್ಷ).
ಅರೆಕಾಲಿಕ (ವಾರಕ್ಕೆ 20 ಗಂಟೆ): ಸುಮಾರು $6,000 (ಅಂದಾಜು ₹5 ಲಕ್ಷ).


ನ್ನೂ ಓದಿ: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 9, 2026 (ಮಧ್ಯಾಹ್ನ 12:00 ರೊಳಗೆ).

ಪ್ರವೇಶದ ಷರತ್ತು:
ಆಗಸ್ಟ್ 30, 2026 ರೊಳಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿ ದಾಖಲಾಗಿರಬೇಕು.

ಗಮನಿಸಿ:
ಈ ಹಿಂದೆ ಗೂಗಲ್‌ನ ಈ ಫೆಲೋಶಿಪ್‌ನಲ್ಲಿ ಭಾಗವಹಿಸಿದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಗೂಗಲ್‌ನ ಅಧಿಕೃತ ವೃತ್ತಿ ಪೋರ್ಟಲ್ (Google Careers Portal) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿದ್ರೆ ಈ ಸುದ್ದಿ ಓದಿ;  ಚಿಕ್ಕಮಗಳೂರು ಉಸ್ತುವಾರಿ ಸಚಿವರಿಂದ ರೈತರಿಗೆ 3 ತಿಂಗಳು ಮಾತ್ರ ಟೈಲ್!


ವಿಶೇಷ ಸೂಚನೆ:
ಅಭ್ಯರ್ಥಿಗಳು ಅಮೆರಿಕದಲ್ಲಿ ಕೆಲಸ ಮಾಡಲು ಕಾನೂನುಬದ್ಧ ಅನುಮತಿ (Work Authorization) ಹೊಂದಿರಬೇಕು. ವೀಸಾ ಪ್ರಕ್ರಿಯೆಗೆ ಗೂಗಲ್ ಯಾವುದೇ ನೆರವು ನೀಡುವುದಿಲ್ಲ.

Google Fellowship: ಗೂಗಲ್​ನಿಂದ ಫೆಲೋಶಿಪ್'ಗೆ ಅರ್ಜಿ ಆಹ್ವಾನ
Google Fellowship: ಗೂಗಲ್​ನಿಂದ ಫೆಲೋಶಿಪ್’ಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Google Fellowship: )

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ