Governament: ಸರ್ಕಾರಿ ನೌಕರರಿಗೆ ಸರ್ಕಾರದಿಂದ ವಿಶೇಷ ಸೂಚನೆ

Governament: ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್‌ ಸಾಕ್ಷಾರತಾ ಪರೀಕ್ಷೆಗೆ ಸಂಬಂಧಿಸಿದಂತೆ ತಿದ್ದುಪಡಿ ವಿಧೇಯಕದ ಕುರಿತು ರಾಜ್ಯ ಸರ್ಕಾರವು ರಾಜ್ಯಪತ್ರವನ್ನು ಪ್ರಕಟಿಸಿದೆ.

ಈ ಪತ್ರಕ್ಕೆ ಸಂಭದಿಸಿದಂತೆ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012, ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ: 18.01.2025ರ ಅಧಿಸೂಚನೆ ಸಂಖ್ಯೆ: ಸಿಆಸುಇ 103 ಸೇವನೆ 2024 ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 18.01.2025ರ ಕರ್ನಾಟಕ ರಾಜ್ಯಪತ್ರದ ಭಾಗ IV-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿದೆ.

Governament: ಸರ್ಕಾರಿ ನೌಕರರಿಗೆ ಸರ್ಕಾರದಿಂದ ವಿಶೇಷ ಸೂಚನೆ
Governament: ಸರ್ಕಾರಿ ನೌಕರರಿಗೆ ಸರ್ಕಾರದಿಂದ ವಿಶೇಷ ಸೂಚನೆ

ಇದನ್ನೂ ಓದಿ: ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು ಆದೇಶ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


(Governament) ಸದರಿ ರಾಜ್ಯಪತ್ರವನ್ನು ದಿನಾಂಕ: 18.01.2025ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದು.

ಮತ್ತು, ಸದರಿ ಕರಡು ನಿಯಮಗಳ ಬಗ್ಗೆ ಸ್ವೀಕೃತವಾಗಿರುವ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಶೀಲಿಸಿರುವುದರಿಂದ ಈಗ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ 3ನೇ ಪ್ರಕರಣದ (1) ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ನಿಯಮಗಳನ್ನು ರಚಿಸಿದೆ.

ಕರ್ನಾಟಕ ಸರ್ಕಾರದ ನಿಯಮಗಳೇನು?

1. ಶೀರ್ಷಿಕೆ ಮತ್ತು ಪ್ರಾರಂಭ:-
(1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.


ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ಗೃಹಲಕ್ಷ್ಮಿ ಹಣದಲ್ಲಿ ಹೆಚ್ಚಳ..!


2. ನಿಯಮ 2ಕ್ಕೆ ತಿದ್ದುಪಡಿ:-
ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ದಿನಾಂಕ: 31.12.2024 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :-
ಸದರಿ ನಿಯಮಗಳ ನಿಯಮ 3ರಲ್ಲಿ;
(ಎ) ಉಪ ನಿಯಮ (1)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.


ಇದನ್ನೂ ಓದಿ: ಶಿಕ್ಷಕರ ಗಮನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಮಿಸ್‌ ಮಾಡ್ದೆ ಈ ಸುದ್ದಿ ಓದಿ


(ಬಿ) ಉಪ ನಿಯಮ (2)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಷ್ಠಾಪಿಸತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ ಚಿಕಿತ್ಸೆ ಯಾವ ಯೋಜನೆ? ಚಿಕಿತ್ಸಾ ವೆಚ್ಚ ಎಷ್ಟು?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ