Government Hospitals: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ ವಿತರಣೆ!

(Government Hospitals:) ರಾಜ್ಯ ಸರ್ಕಾರದಿಂದ ಬಡ ರೋಗಿಗಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತದೆ. ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ


ಬಡರೋಗಿಗಳಿಗೆ ವಿಶೇಷ ಪೌಷ್ಠಿಕ ಆಹಾರ ವಿತರಿಸಲು ಆರೋಗ್ಯ ಇಲಾಖೆಯು ಇಸ್ಕಾನ್‌ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಇದರಿಂದ ಪ್ರತಿ ಆಸ್ಪತ್ರೆಯ 250 ರೋಗಿಗಳಿಗೆ ಪ್ರತಿ ದಿನ ಆಹಾರ ಸರಬರಾಜು ಮಾಡಲಾಗುತ್ತದೆ. ಇದಕ್ಕಾಗಿ 9 ತಿಂಗಳ ಅವಧಿಗೆ ₹1.37 ಕೋಟಿಯನ್ನು ಆರೋಗ್ಯ ಇಲಾಖೆಯಿಂದ ಭರಿಸಲಾಗುತ್ತದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

(Government Hospitals:) ಬೆಂಗಳೂರಿನ ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟ ವಿತರಿಸುವ ಮೂಲಕ ವಿಶೇಷ ಪೌಷ್ಟಿಕ ಆಹಾರ ಯೋಜನೆಗೆ ಚಾಲನೆ ನೀಡಿದ ದಿನೇಶ್ ಗುಂಡೂರಾವ್, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.


ನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ;  4 ಲಕ್ಷ ಸಹಾಯಧನ


ಪ್ರತಿದಿನ ಬೆಳಗಿನ ಉಪಹಾರ, ಸಂಜೆ ಲಘು ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ರೋಗಿಗಳಿಗೆ ವಿತರಿಸಲಾಗುವುದು. ರೋಗಿಗಳ ಚೇತರಿಕೆಗೆ ಚಿಕಿತ್ಸೆಯ ಜೊತೆಗೆ ಪೌಷ್ಟಿಕ ಆಹಾರ ಕೂಡ ಮಹತ್ವದ ಪಾತ್ರ ವಹಿಸುತ್ತದೆ. ರೋಗಿಗಳ ಆರೋಗ್ಯ ಸ್ಥಿತಿ ಮತ್ತು ವಯಸ್ಸಿಗೆ ಅನುಗುಣವಾಗಿ ಪೌಷ್ಟಿಕಾಂಶ ಅಗತ್ಯ ಕೂಡ ಭಿನ್ನವಾಗಿದೆ. ಎಲ್ಲರಿಗೂ ಒಂದೇ ರೀತಿಯ ಆಹಾರ ಸೂಕ್ತವಲ್ಲ. ಹೀಗಾಗಿ ಆಹಾರ ಪದ್ಧತಿಯನ್ನು ರೋಗಿಗಳ ವೈದ್ಯಕೀಯ ಅಗತ್ಯಗಳ ಆಧಾರದ ಮೇಲೆ ವಿಂಗಡಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲೂ ಪೌಷ್ಟಿಕ ಆಹಾರ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

Government Hospitals: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ ವಿತರಣೆ!
Government Hospitals: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ ವಿತರಣೆ!

ಇತ್ತೀಚಿನ ಜನಪ್ರಿಯ ಸುದ್ದಿಗಳು (Government Hospitals:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ