Government School: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

(Government School:) ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ದೊರೆತಿದೆ. ವಿದ್ಯಾ ವಿಕಾಸ ಯೋಜನೆಯಡಿ 2026–27ನೇ ಸಾಲಿನಲ್ಲಿ ಸುಮಾರು 36.56 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಈ ಯೋಜನೆಗಾಗಿ ಸರ್ಕಾರ ಒಟ್ಟು ₹104 ಕೋಟಿ ವೆಚ್ಚ ಮಾಡಲಿದ್ದು, ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರತಿ ವಿದ್ಯಾರ್ಥಿಗೆ ಒಂದು ಜೋಡಿ ಶೂ ಹಾಗೂ ಎರಡು ಜೋಡಿ ಸಾಕ್ಸ್ ನೀಡಲಾಗುತ್ತದೆ.

ಗುಣಮಟ್ಟಕ್ಕೆ ಆದ್ಯತೆ
ಉತ್ತಮ ಗುಣಮಟ್ಟದ ಕಪ್ಪು ಬಣ್ಣದ ಶೂ ಹಾಗೂ ಬಿಳಿ ಬಣ್ಣದ ಸಾಕ್ಸ್ ಖರೀದಿಗಾಗಿ ಪಾರದರ್ಶಕ ಟೆಂಡರ್ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಗುಣಮಟ್ಟದ ಮೇಲ್ವಿಚಾರಣೆಗಾಗಿ ತಾಂತ್ರಿಕ ತಜ್ಞರ ಸಮಿತಿಯನ್ನು ರಚಿಸುವುದಕ್ಕೂ ಕ್ರಮ ಕೈಗೊಳ್ಳಲಾಗಿದೆ.


ನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


ಅಧಿಕ ಮಳೆಯಾಗುವ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂಗಳನ್ನು ವಿತರಿಸಲಾಗುವುದಿಲ್ಲ. ಈ ಭಾಗಗಳ ಎಸ್‌ಡಿಎಂಸಿ ಗಳಿಂದ ಶೂಗಳ ಬದಲಿಗೆ ಮಳೆಗೆ ಅನುಕೂಲವಾದ ಪಾದರಕ್ಷೆಗಳು (ಸ್ಯಾಂಡಲ್ಸ್/ಫುಟ್‌ವೇರ್) ನೀಡುವಂತೆ ಮನವಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕಟ್ಟುನಿಟ್ಟಿನ ಸೂಚನೆ
ಹಿಂದಿನ ವರ್ಷಗಳಲ್ಲಿ ಗುಣಮಟ್ಟದ ಬಗ್ಗೆ ದೂರುಗಳು ಬಂದ ಹಿನ್ನೆಲೆ, ಈ ಬಾರಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ವಿತರಣೆ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Government School: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್
Government School: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

ನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


ಇತ್ತೀಚಿನ ಜನಪ್ರಿಯ ಸುದ್ದಿಗಳು (Government School:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ