(Graduate Constituency Election:) ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?
ಹೆಸರು ನೊಂದಾಯಿಸಲು ದಾಖಲೆಗಳು ಕಡ್ಡಾಯ
* ಆಧಾರ್ ಕಾರ್ಡ್
* ವೋಟರ್ ಐಡಿ
* ಎಸ್ ಎಸ್ ಎಲ್ ಸಿ ಅಂಕಪಟ್ಟಿ
* ಪದವಿ ಪ್ರಮಾಣ ಪತ್ರದ ನಕಲು ಜೊತೆಗೆ
* ಒಂದು ಪಾಸ್ಪೋರ್ಟ್ ಸೈಜ್ ಫೋಟೋವನ್ನು ಅರ್ಜಿ ಜೊತೆ ಲಗತ್ತಿಸಬೇಕು
* ಮತದಾರರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
(Graduate Constituency Election:) ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ಪದವಿಧರ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು.
* 1 ನವೆಂಬರ್ 2025 ನಿರ್ಧಿಷ್ಟಪಡಿಸಿದ ಅರ್ಹ ದಿನಾಂಕವಾಗಿದ್ದು, ಇದಕ್ಕೂ ಕನಿಷ್ಟ 3 ವರ್ಷಗಳ ಮೊದಲು ರಾಜ್ಯ ಸರ್ಕಾರ ಅಧಿಸೂಚಿಸಿರುವ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಓದಿ: ಉಚಿತ ಎಲ್‌ಪಿಜಿ ಸಂಪರ್ಕ | ಅರ್ಜಿ ಸಲ್ಲಿಕೆ ಹೇಗೆ?
ವಿದ್ಯಾರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್, ಕಿಸಾನ್ ಅಥವಾ ಅಂಚೆ ಕಚೇರಿ ಚಾಲ್ತಿ ಖಾತೆಯ ಪಾಸ್ ಬುಕ್ ಅಥವಾ ಚುನಾವಣೆ ಆಯೋಗ ನಿಗದಿಪಡಿಸಿದ ಇತರೆ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ನಮೂನೆ-18 ಅರ್ಜಿಯೊಂದಿಗೆ ವಾಸಸ್ಥಳ ವ್ಯಾಪ್ತಿಯ ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ನಿರ್ದಿಷ್ಟಪಡಿಸಿದ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಹೀಗೂ ಡೌನ್ ಲೋಡ್ ಮಾಡಬಹುದು:
ಅರ್ಜಿ ನಮೂನೆಯನ್ನು ಚುನಾವಣಾ ಆಯೋಗದ ವೆಬ್‍ಸೈಟ್ http://eci.gov.in/files/category/356-forms-for-registration-in-eroll/ ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ https://ceo.karnataka.gov.in/20/download-forms/en ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಯುಪಿಐನಲ್ಲಿ ಬರಲಿದೆ ಹೊಸ ಫೀಚರ್; ಯಾವುದು ಈ ಫೀಚರ್, ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Graduate Constituency Election:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





