(Graduate Students) ಸರ್ಕಾರಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್’ಳ ಜೊತೆಗೆ ಕೌಶಲ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 11,000 ದಿಂದ 17,000 ವರೆಗೆ ಶಿಷ್ಯ ವೇತನ ನೀಡುತ್ತಿದ್ದು, ಯಾವ ಕೋರ್ಸ್ಗಳಿಗೆ, ಯಾವ ವಿದ್ಯಾರ್ಥಿಗಳಿಗೆ ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಯಾವ ವಿದ್ಯಾರ್ಥಿಗಳಿಗೆ ಈ ಶಿಷ್ಯ ವೇತನ:
* ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್ಗಳ ಜೊತೆಗೆ ಕೌಶಲ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಒಂದು ವರ್ಷದವರೆಗೆ (ಎರಡು ಸೆಮಿಸ್ಟರ್) ಪ್ರತಿ ತಿಂಗಳು 11,000 ದಿಂದ 17,000 ವರೆಗೆ ಶಿಷ್ಯವೇತನ ಸಿಗಲಿದೆ.
* ಇದೇ ಶೈಕ್ಷಣಿಕ ಸಾಲಿನಿಂದ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕೊನೆಯ ಐದು ಮತ್ತು ಆರನೇ ಸೆಮಿಸ್ಟರ್ ನಲ್ಲಿ ಶಿಷ್ಯ ವೇತನದ ಸೌಲಭ್ಯ ದೊರಕಲಿದೆ.
ಇದನ್ನೂ ಓದಿ: ಆಧಾರ್ ಕೌಶಲ್ಯದಿಂದ ಇಂತಹ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
14,340 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಗುರಿ:
ಹತ್ತು ಮಂದಿ ನಿವೃತ್ತ ಐಎಎಸ್ ಅಧಿಕಾರಿಗಳು ಸ್ಥಾಪಿಸಿರುವ ‘ಕ್ರಿಸ್ಟ್’ (ಸೆಂಟರ್ ಫಾರ್ ರಿಸರ್ಚ್ ಇನ್ ಸ್ಕಿಮ್ಸ್ ಆಯಂಡ್ ಪಾಲಿಸೀಸ್) ಜೊತೆ ಉನ್ನತ ಶಿಕ್ಷಣದಲ್ಲಿ ಕೌಶಲಾಧಾರಿತ ಕೋರ್ಸ್ಗಳನ್ನು ಪರಿಚಯಿಸುವ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ. ಮೊದಲ ವರ್ಷ 60 ಕಾಲೇಜುಗಳಲ್ಲಿ 3,600 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಮೂರು ವರ್ಷಗಳಲ್ಲಿ 239 ಕಾಲೇಜುಗಳಿಗೆ ಯೋಜನೆ ವಿಸ್ತರಿಸಲಾಗುವುದು. 2026-27 ರ ವೇಳೆಗೆ 14,340 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಗುರಿ ಹೊಂದಲಾಗಿದೆ.
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಮೊದಲು ಹಂತದಲ್ಲಿ ಈ ಕೋರ್ಸ್ಗಳು ಪರಿಚಯ:
ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎಂ, ಬಿ.ಸಿ.ಎ ವಿದ್ಯಾರ್ಥಿಗಳಿಗೆ ಇ-ಕಾಮರ್ಸ್, ಆಹಾರ ಸರಪಳಿ ನಿರ್ವಹಣೆ, ಸರಕು ಸಾಗಣೆ ಉದ್ಯಮ, ರಿಟೇಲ್, ಹೆಲ್ತ್ ಕೇರ್, ಪ್ರವಾಸೋದ್ಯಮ ಮತ್ತು ಆತಿಥ್ಯ ನಿರ್ವಹಣೆ, ಜೀವನ ವಿಜ್ಞಾನ, ಔಷಧ ಮಾರುಕಟ್ಟೆ ಮತ್ತು ಮಾರಾಟ, ಔಷಧ ತಯಾರಿ ಮತ್ತು ಗುಣಮಟ್ಟ, ಡಿಜಿಟಲ್ ಮಾರುಕಟ್ಟೆ, ಸಿನಿಮಾ ನಿರ್ಮಾಣ, ಜಾಹೀರಾತು, ಮಾಧ್ಯಮ ಮತ್ತು ಮನರಂಜನೆ, ಫ್ಯಾಷನ್ ಡಿಸೈನ್, ಬ್ಯಾಂಕಿಂಗ್, ಹಣಕಾಸು ಸೇವೆ ಮತ್ತು ಜೀವವಿಮೆ, ಎಲೆಕ್ಟ್ರಾನಿಕ್ಸ್, ದತ್ತಾಂಶ ವಿಶ್ಲೇಷಣೆ, ಮಾಹಿತಿ ತಂತ್ರಜ್ಞಾನ ಕೋರ್ಸ್ಗಳನ್ನು ಪರಿಚಯಿಸಲಾಗಿದೆ.
ಕಲಾ ವಿದ್ಯಾರ್ಥಿಗಳಿಗೂ ಮುಂದಿನ ಹಂತದಲ್ಲಿ ಅವಕಾಶ:
ಇನ್ನು ಮುಂದಿನ ಹಂತದಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳಿಗೂ ಕೂಡ ಕೌಶಲ ದೊರಕಿಸಲು ಸರ್ಕಾರ ಚಿಂತನೆ ನಡೆಸಿದೆ.
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಆಂಧ್ರ ಪ್ರದೇಶ, ಅಸ್ಸಾಂ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶದ ಪದವಿ ಕಾಲೇಜುಗಳಲ್ಲಿ ಕ್ರಿಸ್ಟ್ ಸಾಮಾನ್ಯ ಪದವಿ ಶಿಕ್ಷಣದ ಜೊತೆಗೆ ಕೌಶಲ ವಿಷಯಗಳನ್ನು ಪರಿಚಯಿಸಿದ್ದು, ಅಲ್ಲಿನ ವಿದ್ಯಾರ್ಥಿಗಳಿಂದ ಭಾರಿ ಬೇಡಿಕೆ ಬರುತ್ತಿದೆ. ಈ ಒಪ್ಪಂದದಿಂದಾಗಿ ರಾಜ್ಯದ ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೂ ಭವಿಷ್ಯದಲ್ಲಿ ಕೌಶಲಾಧಾರಿತ ಉದ್ಯೋಗದ ಅವಕಾಶಗಳು ಹೆಚ್ಚಲಿವೆ ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ
ಈ ಕೋರ್ಸ್ ಗಳಿಗೆ ಆಗಸ್ಟ್ ನಿಂದ ಪ್ರವೇಶ:
ಸಾಮಾನ್ಯ ಶಿಕ್ಷಣದ ಜೊತೆಗೆ ಕೌಶಲ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಇದೇ ತಿಂಗಳು 30 ರಿಂದ ಅರ್ಜಿಗಳನ್ನು ವಿತರಿಸಲಾಗುತ್ತದೆ. ಆಗಸ್ಟ್ ನಿಂದ ಪ್ರವೇಶ ಪ್ರಕ್ರಿಯೆಗಳು ಆರಂಭವಾಗಲಿವೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






